AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ವಿವಾದ, ನಿರ್ದೇಶಕ ಗುರುದತ್​​ಗೆ ಪನ್ನಗಾಭರಣ ಪ್ರಶ್ನೆ

Karavali movie: ‘ಕರಾವಳಿ’ ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಅವರಿಂದ ಡಬ್ಬಿಂಗ್ ಮಾಡಿಸಿಲ್ಲ, ಬದಲಿಗೆ ಬೇರೊಬ್ಬ ಕಲಾವದರಿಂದ ಡಬ್ಬಿಂಗ್ ಮಾಡಿಸಲಾಗಿದೆ. ಖುದ್ದು ನಿರ್ದೇಶಕ ಗುರುದತ್ ಗಾಣಿಗಾ ಅವರು ಪ್ರಜ್ವಲ್ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಇದೆಲ್ಲದರ ನಡುವೆ ನಿರ್ದೇಶಕ, ಪ್ರಜ್ವಲ್ ದೇವರಾಜ್ ಅವರ ಆಪ್ತ ಗೆಳೆಯ ಪನ್ನಗಾಭರಣ ಅವರು ನಿರ್ದೇಶಕ ಗುರುದತ್ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

‘ಕರಾವಳಿ’ ವಿವಾದ, ನಿರ್ದೇಶಕ ಗುರುದತ್​​ಗೆ ಪನ್ನಗಾಭರಣ ಪ್ರಶ್ನೆ
Karavali Controversy
ಮಂಜುನಾಥ ಸಿ.
|

Updated on: Jul 09, 2026 | 5:20 PM

Share

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ಸಿನಿಮಾ ತಂಡ, ಪ್ರಜ್ವಲ್ ದೇವರಾಜ್ ಅವರನ್ನು ಪಕ್ಕಕ್ಕೆ ಸರಿಸಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಆರೋಪ ಎದುರಾಗಿದೆ. ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಅವರಿಂದ ಡಬ್ಬಿಂಗ್ ಮಾಡಿಸಿಲ್ಲ, ಬದಲಿಗೆ ಬೇರೊಬ್ಬ ಕಲಾವದರಿಂದ ಡಬ್ಬಿಂಗ್ ಮಾಡಿಸಲಾಗಿದೆ. ಖುದ್ದು ನಿರ್ದೇಶಕ ಗುರುದತ್ ಗಾಣಿಗಾ ಅವರು ಪ್ರಜ್ವಲ್ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಇದೆಲ್ಲದರ ನಡುವೆ ನಿರ್ದೇಶಕ, ಪ್ರಜ್ವಲ್ ದೇವರಾಜ್ ಅವರ ಆಪ್ತ ಗೆಳೆಯ ಪನ್ನಗಾಭರಣ ಅವರು ನಿರ್ದೇಶಕ ಗುರುದತ್ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಪನ್ನಗಾಭರಣ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ‘ಕರಾವಳಿ’ ನಿರ್ದೇಶಕ ಗುರುದತ್ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ವಿಡಿಯೋನಲ್ಲಿ ಮಾತನಾಡಿರುವ ಪನ್ನಗಾಭರಣ, ‘ಕರಾವಳಿ’ ಸಿನಿಮಾದ ವಿವಾದದ ಬಗ್ಗೆ ಕೆಲ ವಿಡಿಯೋಗಳನ್ನು ನಾನು ನೋಡಿದೆ. ಗುರುದತ್ ಗಾಣಿಗಾ ಅವರು ಹೇಳಿದರು, ‘ನಾನು ಅಂಬರೀಶ್ ಅವರ ಜೊತೆ, ಸುದೀಪ್ ಅವರ ಜೊತೆ ಕೆಲಸ ಮಾಡಿದ್ದೀನಿ’ ಅಂತ. ಹೌದು, ನಾನು ಆ ಸಿನಿಮಾ ನೋಡಿದ್ದೀನಿ, ಮೆಚ್ಚಿಕೊಂಡಿದ್ದೀನಿ. ಆದರೆ ಆ ಸಿನಿಮಾಗಳಲ್ಲಿ ಆ ನಟರಿಗೆ ಹೇಳದೆ ಬೇರೆಯವರಿಂದ ಮಾಡಿಸಿ ರಿಲೀಸ್ ಮಾಡಲು ಗುರುದತ್ ಕೈಯಲ್ಲಿ ಆಗುತ್ತಿತ್ತಾ? ಹಾಗೆ ಮಾಡಿದ್ದರೆ ಆ ನಟರು ಒಪ್ಪಿಕೊಳ್ಳುತ್ತಿದ್ದರಾ?’ ಎಂದು ಪನ್ನಗ ಪ್ರಶ್ನೆ ಮಾಡಿದ್ದಾರೆ.

‘ನಿಮ್ಮ ಸಿನಿಮಾನಲ್ಲಿ ನಿಮಗೆ ಶಕ್ತಿಯಾಗಿ ರಾಜ್ ಬಿ ಶೆಟ್ಟಿ ಅವರಿದ್ದಾರೆ. ಅವರೊಬ್ಬ ನಿಜವಾದ ಸಿನಿಮಾ ಲವ್ವರ್, ವೈಯಕ್ತಿಕವಾಗಿ ನನಗೆ ಅವರ ಪರಿಚಯ ಇದೆ. ‘ಕರಾವಳಿ’ ಸಿನಿಮಾನಲ್ಲೇ ನಟಿಸಿರುವ ಮಿತ್ರ ಅವರು ಸಹ ಹೇಳಿದರು. ‘ನನಗೆ ಡಬ್ಬಿಂಗ್​​ ಮಾಡುವಾಗ ಕಷ್ಟ ಆಗುತ್ತಿತ್ತು, ಆಗ ರಾಜ್ ಬಿ ಶೆಟ್ಟಿ ನನ್ನ ಜೊತೆಗೆ ಇದ್ದು, ನನ್ನ ಸಂಭಾಷಣೆ ತಿದ್ದಿ ಡಬ್ಬಿಂಗ್ ಮಾಡಿದರು’ ಅಂತ. ಹಾಗಿರುವಾಗ ಅವರ ಸಹಾಯ ಪಡೆದು ಪ್ರಜ್ವಲ್ ಅವರ ಕೈಯಲ್ಲಿ ಯಾಕೆ ಡಬ್ಬಿಂಗ್ ಮಾಡಿಸಲಿಲ್ಲ. ಸಹಾಯ ಕೇಳಿದರೆ ಬೇಡ ಎನ್ನುವ ವ್ಯಕ್ತಿ ರಾಜ್ ಬಿ ಶೆಟ್ಟಿ ಅಲ್ಲ, ಹಾಗೆಯೇ ಹೊಸದನ್ನ ಕಲಿಯಲು ಹಿಂದೇಟು ಹಾಕುವ ವ್ಯಕ್ತಿ ಪ್ರಜ್ವಲ್ ದೇವರಾಜ್ ಅಲ್ಲ’ ಎಂದಿದ್ದಾರೆ ಪನ್ನಗಾಭರಣ.

‘ಆರ್ಥಿಕ ಸಮಸ್ಯೆಗಳ ಕಾರಣದಿಂದ ನೀವು ಪ್ರಜ್ವಲ್ ಅವರನ್ನು ದೂರ ಇಟ್ಟಿದ್ದೀರಿ, ಆದರೆ ಈಗ ಪ್ರಜ್ವಲ್ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿದ್ದೀರಿ. ಪ್ರಜ್ವಲ್ ಅವರ ಕೈಯಲ್ಲಿ ಡಬ್ ಮಾಡಿಸಿ ಅವರ ಕೈಯಲ್ಲಿ ಡಬ್ಬಿಂಗ್ ಆಗುತ್ತಿಲ್ಲ ಎಂದು ಹೇಳಿದ್ದರೆ ಒಪ್ಪಿಕೊಳ್ಳಬಹುದಿತ್ತು. ನೀವು ಅವರನ್ನು ಡಬ್ಬಿಂಗಿಗೆ ಕರೆದೇ ಇಲ್ಲ. ಡಬ್ಬಿಂಗ್ ಮಾಡಿಸದೆ ಅವರ ಕೈಯಿಂದ ಆಗುವುದಿಲ್ಲ ಎಂದು ಹೇಳುವುದು ಸರಿಯಲ್ಲ. ಹೋಗಲಿ, ಪ್ರಜ್ವಲ್ ದೇವರಾಜ್ ಸೂಕ್ತ ಅಲ್ಲ ಅನ್ನೋದು ನಿಮಗೆ ಸಿನಿಮಾ ಮುಗಿದ ಬಳಿಕ ಗೊತ್ತಾಯ್ತ? ಸಿನಿಮಾ ಶುರು ಮಾಡುವ ಮುಂಚೆ ನೀವು ಮಾತುಕತೆ ಮಾಡಿರುತ್ತೀರಿ, ವರ್ಕ್​​ ಶಾಪ್ ಮಾಡಿರುತ್ತೀರಿ, ಆಗೆಲ್ಲ ಇಲ್ಲದ ಸಮಸ್ಯೆ ಈಗ ಬಂದಿರುವುದು ಏಕೆ?’ ಎಂದು ಪನ್ನಗಾಭರಣ ಪ್ರಶ್ನೆ ಮಾಡಿದ್ದಾರೆ.

‘ಒಬ್ಬ ಕಲಾವಿದನನ್ನು ಗೌರವಿಸಬೇಕು. ಅವರ ಅನುಮತಿ ಪಡೆಯದೇ ಅವರ ಪಾತ್ರಕ್ಕೆ ಬೇರೆಯವರಿಂದ ಡಬ್ಬಿಂಗ್ ಮಾಡಿಸುವುದು ತಪ್ಪು, ಈಗ ನಿಮ್ಮನ್ನು ಬಿಟ್ಟು ನಿಮ್ಮ ಸಿನಿಮಾ ರಿಲೀಸ್ ಮಾಡಿಸಿದರೆ ಅದು ಸರಿ ಅನಿಸುತ್ತಾ? ಅದನ್ನು ನೀವು ಒಪ್ಪಿಕೊಳ್ಳುತ್ತೀರ? ಹೀಗೆಲ್ಲ ಮಾಡಬೇಡಿ, ಸಿನಿಮಾ ಎಂಬುದು ಕುಟುಂಬದ ಥರ ಎಲ್ಲರೂ ಅನುಸರಿಸಿಕೊಂಡು ಹೋಗಬೇಕು. ಸಮಸ್ಯೆಗಳಿದ್ದರೆ ಕೂತು ಮಾತನಾಡಿ ಬಗೆಹರಿಸಿಕೊಳ್ಳಿ’ ಎಂದು ಪನ್ನಗಾಭರಣ ಸಲಹೆ ನೀಡಿದ್ದಾರೆ.

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ