Actor Suraj: ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗ ಸೂರಜ್​ಗೆ ಗಂಭೀರ ಅಪಘಾತ; ಕಾಲು ಕಳೆದುಕೊಂಡ ನಟ

Kannada Actor Suraj: ಅಪಘಾತದಲ್ಲಿ ನಟ ಸೂರಜ್​ ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Actor Suraj: ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗ ಸೂರಜ್​ಗೆ ಗಂಭೀರ ಅಪಘಾತ; ಕಾಲು ಕಳೆದುಕೊಂಡ ನಟ
ನಟ ಸೂರಜ್​

Updated on: Jun 25, 2023 | 12:11 PM

ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ನಡೆದಿದೆ. ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರನಾದ ಸೂರಜ್​ (Kannada Actor Suraj) ಅವರು ಗಂಭೀರ ಅಪಘಾತಕ್ಕೆ ಒಳಗಾಗಿದ್ದಾರೆ. ಊಟಿಗೆ ತೆರಳುತ್ತಿದ್ದ ಅವರಿಗೆ ನಂಜನಗೂಡಿನ ಬಳಿ ಲಾರಿ ಡಿಕ್ಕಿ ಆಗಿದೆ. ಶನಿವಾರ (ಜೂನ್​ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ (Suraj Accident) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಂಧಿನಗರಕ್ಕೆ ಎಂಟ್ರಿ ನೀಡಬೇಕು ಎಂದು ಸೂರಜ್​ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸೇರಿದಂತೆ ಒಂದೆರಡು ಸಿನಿಮಾಗಳನ್ನು ಅವರು ಅನೌನ್ಸ್​ ಮಾಡಿದ್ದರು. ಅಷ್ಟರಲ್ಲಾಗಲೇ ಅವರಿಗೆ ಈ ದುಸ್ಥಿತಿ ಎದುರಾಗಿದೆ.

ಸೂರಜ್​ ಅವರು ಬೈಕ್​ನಲ್ಲಿ ಊಟಿಗೆ ತೆರಳುತ್ತಿದ್ದರು. ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್​ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕತ್ತರಿಸುವುದು ಅನಿವಾರ್ಯ ಆಯಿತು. ಕನ್ನಡ ಚಿತ್ರರಂಗದಲ್ಲಿ ನಟನಾಗಬೇಕು ಎಂದು ಸೂರಜ್​ ಕನಸು ಕಂಡಿದ್ದರು. ಕೆಲವು ಚಿತ್ರಗಳ ಶೂಟಿಂಗ್​ನಲ್ಲೂ ಪಾಲ್ಗೊಂಡಿದ್ದರು. ಆದರೆ ಈಗ ಅವರು ಕಾಲು ಕಳೆದುಕೊಂಡು ಸಂಕಟಪಡುವಂತಾಗಿರುವುದು ನೋವಿನ ಸಂಗತಿ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಘವಿಸಿದೆ. ಸದ್ಯ ಸೂರಜ್​ ಅವರು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಚಿತ್ರರಂಗದ ಅನೇಕರು ಭೇಟಿ ನೀಡಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ಸೂರಜ್​ ಐಸಿಯುನಲ್ಲೇ ಇರಬೇಕಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​ ಸೇರಿದಂತೆ ಡಾ. ರಾಜ್​ ಕುಟುಂಬದ ಹಲವರು ಆಸ್ಪತ್ರೆಗೆ ಬಂದು ಸಮಾಧಾನ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:50 am, Sun, 25 June 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us