AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ […]

ಪತಿ ಬೇಕು ಡಾಟ್ ಕಾಂ ಚಿತ್ರದ ಹಣಕಾಸು ವಿವಾದ: ನೆಲಮಂಗಲ PSI ವಿರುದ್ಧ ಬಂಧನ ವಾರಂಟ್
ಆಯೇಷಾ ಬಾನು
| Edited By: |

Updated on: Oct 28, 2020 | 3:44 PM

Share

ಬೆಂಗಳೂರು: ‘ಪತಿ ಬೇಕು ಡಾಟ್ ಕಾಂ’ ಸಿನಿಮಾದ ಹಣಕಾಸು ವಿವಾದಕ್ಕೆ ಸಂಬಂಧಿಸಿ ನಿರ್ದೇಶಕನಿಗೆ ಬೆದರಿಸಿ ಚೆಕ್​ಗಳಿಗೆ ಸಹಿ ಪಡೆದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ ಪೊಲೀಸ್ ಆಯುಕ್ತರ ಮೂಲಕ PSI ಮಂಜುನಾಥ ಹಾಗೂ ಕಾನ್ಸ್​ಟೇಬಲ್ ಕೇಶವ್​​ ವಿರುದ್ಧ ವಾರಂಟ್ ಜಾರಿಗೊಳಿಸಲು ಆದೇಶ ನೀಡಿದೆ. PSI ಮಂಜುನಾಥ ಪತಿ ಬೇಕು ಡಾಟ್ ಕಾಂ ಸಿನಿಮಾಗೆ ಬಂಡವಾಳ ಹೂಡಿದ್ದರು. ಸಿನಿಮಾ ನಷ್ಟ ಅನುಭವಿಸಿದ್ದರಿಂದ ನಿರ್ದೇಶಕ ರಾಕೇಶ್​ಗೆ ಹಣ ಹಿಂದಿರುಗಿಸಲು ಒತ್ತಡ ಹೇರಿದ್ದಾರೆ.

ನೆಲಮಂಗಲ ಪೊಲೀಸ್​ ಠಾಣೆಗೆ ಕರೆಸಿಕೊಂಡು ಬೆದರಿಸಿ ಚೆಕ್​ಗೆ ಸಹಿ ಪಡೆದಿದ್ದರು. ಹೀಗಾಗಿ ಪೊಲೀಸರ ವಿರುದ್ಧ ರಾಕೇಶ್ ಖಾಸಗಿ ದೂರು ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಿದರೂ ಪೊಲೀಸರು ಕೋರ್ಟ್​ಗೆ ಹಾಜರಾಗಿರಲಿಲ್ಲ. ವಾರಂಟ್ ಜಾರಿಗೊಳಿಸುವಂತೆ ವಕೀಲ ವೇದಮೂರ್ತಿ ವಾದ ಮಂಡಿಸಿದ್ದರು. ಸಿವಿಲ್ ಕೇಸ್​ನಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಗರಂ ಆಗಿತ್ತು. ಸದ್ಯ ಈಗ ಎಸಿಎಂಎಂ ಕೋರ್ಟ್​ ಜಡ್ಜ್​ ಬಾಲಗೋಪಾಲಕೃಷ್ಣ 2021ರ ಜನವರಿ 29ರೊಳಗೆ ವಾರಂಟ್ ಜಾರಿಗೆ ಆದೇಶಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್