AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಲಾದರೂ ಪವಿತ್ರಾ ಗೌಡಗೆ ಸಿಗುತ್ತಾ ಜಾಮೀನು? ನ.21ಕ್ಕೆ ಬೇಲ್ ಅರ್ಜಿ ವಿಚಾರಣೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆಗಿ ಜೈಲು ವಾಸ ಅನುಭವಿಸುತ್ತಿರುವ ನಟಿ ಪವಿತ್ರಾ ಗೌಡ ಅವರಿಗೆ ಜಾಮೀನು ಮರೀಚಿಕೆ ಆಗಿದೆ. ಎ2 ದರ್ಶನ್ ಅನಾರೋಗ್ಯ ಕಾರಣದಿಂದ ಜಾಮೀನು ಪಡೆದರೂ ಕೂಡ ಪವಿತ್ರಾ ಗೌಡಗೆ ಬೇಲ್​ ಸಿಕ್ಕಿರಲಿಲ್ಲ. ಗುರುವಾರ (ನವೆಂಬರ್​ 21) ಹೈಕೋರ್ಟ್​ನಲ್ಲಿ ದರ್ಶನ್, ಪವಿತ್ರಾ ಗೌಡ ಮುಂತಾದವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಈಗಲಾದರೂ ಪವಿತ್ರಾ ಗೌಡಗೆ ಸಿಗುತ್ತಾ ಜಾಮೀನು? ನ.21ಕ್ಕೆ ಬೇಲ್ ಅರ್ಜಿ ವಿಚಾರಣೆ
ಪವಿತ್ರಾ ಗೌಡ, ದರ್ಶನ್
Ramesha M
| Edited By: |

Updated on: Nov 20, 2024 | 9:30 PM

Share

ನಟ ದರ್ಶನ್ ಅವರ ಆಪ್ತ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ಜೈಲು ಸೇರಿ 5 ತಿಂಗಳು ಕಳೆದಿದ್ದರೂ ಕೂಡ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಕೆಲವೇ ದಿನಗಳ ಹಿಂದೆ ದರ್ಶನ್​ ಅವರಿಗೆ ತೀವ್ರ ಅನಾರೋಗ್ಯ ಇದ್ದರಿಂದ ಜಾಮೀನು ನೀಡಲಾಗಿತ್ತು. ಆದರೆ ಅವರ ಗೆಳತಿ ಪವಿತ್ರಾ ಗೌಡ ಇನ್ನೂ ಜೈಲಿನಲ್ಲಿದ್ದಾರೆ. ಗುರುವಾರ (ನ.21) ಪ್ರಮುಖ ಆರೋಪಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್​ ಸಿಗುವ ನಿರೀಕ್ಷೆಯಲ್ಲಿ ಪವಿತ್ರಾ ಗೌಡ ಇದ್ದಾರೆ.

ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಈವರೆಗೂ ಸರ್ಜರಿ ಮಾಡಿಸಿಲ್ಲ. ಆ ಬಗ್ಗೆ ಅವರು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ.

ಇನ್ನೂ ಯಾಕೆ ಸರ್ಜರಿ ಮಾಡಿಸಿಲ್ಲ, ಬೆನ್ನು ನೋವಿಗೆ ಚಿಕಿತ್ಸೆ ಯಾವ ಹಂತದಲ್ಲಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ನ.21ರಂದು ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ದರ್ಶನ್​ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಜಾಮೀನು ಪಡೆದು ಅವರು ಬೆಂಗಳೂರಿಗೆ ಬಂದಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ನಲ್ಲಿ ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಲು ಸರ್ಕಾರದ ಒಪ್ಪಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹಲವರು ಆರೋಪಿಗಳಾಗಿದ್ದಾರೆ. ಆ ಪೈಕಿ ಕೆಲವರಿಗೆ ಮಾತ್ರ ಜಾಮೀನು ಸಿಕ್ಕಿದೆ. ಪವನ್, ನಂದೀಶ್​ ಅವರ ಜಾಮೀನು ಅರ್ಜಿ ಇಂದು (ನವೆಂಬರ್​ 20) ವಜಾ ಆಗಿದೆ. ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಸಿಸಿಹೆಚ್ 57ರ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ಧನರಾಜ್ ಜಾಮೀನು ಅರ್ಜಿ ಬಗ್ಗೆ ಗುರುವಾರ (ನ.21) ಆದೇಶ ಪ್ರಕಟ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.