ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Pavithra Gowda: ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ನವೆಂಬರ್ 21ಕ್ಕೆ ಮುಂದೂಡಿದೆ.

ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Follow us
ಮಂಜುನಾಥ ಸಿ.
|

Updated on: Nov 07, 2024 | 3:04 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇತರೆ ನಾಲ್ಕು ಆರೋಪಿಗಳಿಗೆ ನಿಯಮಿತ ಜಾಮೀನು ಈಗಾಗಲೇ ಮಂಜೂರಾಗಿದೆ. ಪ್ರಕರಣದಲ್ಲಿ ಮೊದಲ ಆರೋಪಿ ಆಗಿರುವ ಪವಿತ್ರಾ ಗೌಡ ಸಹ ಜಾಮೀನಿಗೆ ಯತ್ನಿಸುತ್ತಲೇ ಇದ್ದಾರೆ. ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು. ಮತ್ತೆ ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇಂದು (ನವೆಂಬರ್ 07) ಪವಿತ್ರಾ ಗೌಡ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿಕೆ ಮಾಡಲಾಗಿದೆ. ಪವಿತ್ರಾರ ಜಾಮೀನು ಅರ್ಜಿಗೆ ಸಲ್ಲಿಸಿದಂತೆ ಹೆಚ್ಚಿನ ವಾದ-ವಿವಾದ ಇಂದು ನಡೆದ ಬಗ್ಗೆ ವರದಿಯಾಗಿಲ್ಲ.

ಪ್ರಕರಣದ ಎರಡನೇ ಆರೋಪಿ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರಾಗಿರುವ ಕಾರಣ ಅದೇ ಕಾರಣವನ್ನು ಇಟ್ಟುಕೊಂಡು ಪವಿತ್ರಾ ಸಹ ಜಾಮೀನಿಗೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇಂದು ಪವಿತ್ರಾಗೆ ನಿರಾಶೆಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ. ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ:ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್​; ಜೈಲುವಾಸವೇ ಗತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ಪವಿತ್ರಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ. ರೇಣುಕಾ ಸ್ವಾಮಿ, ಪವಿತ್ರಾ ಗೌಡಗೆ ಕೆಟ್ಟದಾಗಿ ಸಂದೇಶ ಕಳಿಸಿದ್ದನೆಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿ ಕರೆತಂದು ಇಲ್ಲಿ ಹಲ್ಲೆ ಮಾಡಿ ಕೊಲ್ಲಲಾಗಿದೆ ಎಂಬ ಆರೋಪವಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ