ಪವಿತ್ರಾ ಗೌಡಗೆ ನಿರಾಸೆ: ಜಾಮೀನು ಅರ್ಜಿ ವಜಾ
Pavithra Gowda bail application: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು ಆದರೆ ಅರ್ಜಿ ವಜಾ ಆಗಿದೆ.
ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.
ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಪವಿತ್ರಾ ಗೌಡ ಅವರು ಇದೀಗ ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಅಥವಾ ಹದಿನಾಲ್ಕು ದಿನಗಳ ಬಳಿಕ ಮತ್ತೆ ಜಾಮೀನು ಅರ್ಜಿ ಸಲ್ಲಿಸುವ ಅವಕಾಶವೂ ಸಹ ಪವಿತ್ರಾ ಗೌಡಗೆ ಇದ್ದಂತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:01 pm, Tue, 2 September 25




