AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ಸಾವಿಗೆ ಕಾರಣವಾಯ್ತು ಆ ಒಂದು ವಿಷಯ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ (42) ಅನಾರೋಗ್ಯದಿಂದ ರಾಜಸ್ಥಾನದಲ್ಲಿ ನಿಧನರಾಗಿದ್ದಾರೆ. ವಿಚ್ಛೇದನದ ಬಳಿಕ ತೀವ್ರ ಖಿನ್ನತೆಯಿಂದ ಕುಡಿತಕ್ಕೆ ದಾಸರಾಗಿದ್ದ ಅವರ ಆರೋಗ್ಯ ಕ್ಷೀಣಿಸಿ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದು, ಈ ಸುದ್ದಿ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ಸಾವಿಗೆ ಕಾರಣವಾಯ್ತು ಆ ಒಂದು ವಿಷಯ
ಸಂಜಯ್-ಪವಿತ್ರಾ
ಮಂಗಳ ರಾಜಗೋಪಾಲ್​
| Edited By: |

Updated on: Aug 20, 2026 | 7:06 AM

Share

ಮುಖ್ಯಾಂಶಗಳು

  • ವಿಚ್ಛೇದನದ ನೋವು, ಕುಡಿತದ ದಾಸ
  • ಸಂಜಯ್ ಸಿಂಗ್ ಜೀವಕ್ಕೆ ಕಂಠಕವಾದದ್ದೇ ಮದ್ಯಪಾನ
  • ಪವಿತ್ರಾ ಬಂಧನವಾದಾಗ ಧಾವಿಸಿ ಬಂದಿದ್ದ ಮಾಜಿ ಪತಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ (42) ನಿಧನರಾಗಿದ್ದಾರೆ. ಕಳೆದ 7-8 ತಿಂಗಳ ಹಿಂದೆಯೇ ಅವರು ರಾಜಸ್ಥಾನದಲ್ಲಿ ಕೊನೆಯುಸಿರೆಳೆದಿದ್ದು, ಈ ಸುದ್ದಿ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಪವಿತ್ರಾ ಗೌಡ ಅವರಿಂದ (Pavitra Gowda) ದೂರವಾಗಿಯೇ ಉಳಿದಿದ್ದ ಸಂಜಯ್ ಸಿಂಗ್ ಸಾವು ಇಷ್ಟು ತಡವಾಗಿ ಬೆಳಕಿಗೆ ಬಂದಿದ್ದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಪವಿತ್ರಾ ಅರೆಸ್ಟ್ ಆದಾಗ ಧಾವಿಸಿ ಬಂದಿದ್ದ ಸಂಜಯ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಬಂಧನಕ್ಕೊಳಗಾದ ಸಮಯದಲ್ಲಿ ಸಂಜಯ್ ಸಿಂಗ್ ರಾಜಸ್ಥಾನದಿಂದ ಬೆಂಗಳೂರಿಗೆ ಆಗಮಿಸಿದ್ದರು. ಮಾಧ್ಯಮಗಳ ಮುಂದೆ ನಿಂತು ಮಾಜಿ ಪತ್ನಿ ಪವಿತ್ರಾ ಪರ ವಹಿಸಿ ಬೆಂಬಲವಾಗಿ ಮಾತನಾಡಿದ್ದರು.

ಹೇಗೆ ಸಂಭವಿಸಿತು ಸಾವು?

ಬೆಂಗಳೂರಿನಿಂದ ರಾಜಸ್ಥಾನಕ್ಕೆ ತೆರಳಿದ್ದ ಸಂಜಯ್ ಸಿಂಗ್, ಅಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಪವಿತ್ರಾ ಗೌಡ ಅವರಿಂದ ವಿಚ್ಛೇದನ ಪಡೆದ ಬಳಿಕ ತೀವ್ರ ಮಾನಸಿಕ ಅಭದ್ರತೆ ಹಾಗೂ ಖಿನ್ನತೆಗೆ ಒಳಗಾಗಿದ್ದ ಸಂಜಯ್, ಅತಿಯಾದ ಮದ್ಯಪಾನಕ್ಕೆ ದಾಸರಾಗಿದ್ದರು. ಈ ಕುಡಿತದ ಚಟವೇ ಅವರ ಆರೋಗ್ಯ ಕ್ಷೀಣಿಸಿ ಸಾವನ್ನಪ್ಪಲು ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪವಿತ್ರಾ ಗೌಡ ಕುಗ್ಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ

ಪ್ರೀತಿ, ಮದುವೆ ಮತ್ತು ವಿಚ್ಛೇದನ

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಸಂಜಯ್ ಸಿಂಗ್, ಸ್ವಂತ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ನಡೆಸುತ್ತಿದ್ದರು. 2007-08ರ ಅವಧಿಯಲ್ಲಿ ಪವಿತ್ರಾ ಗೌಡ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. 2011ರಲ್ಲಿ ದಂಪತಿಗೆ ಖುಷಿ ಎಂಬ ಹೆಣ್ಣು ಮಗು ಜನಿಸಿದ ನಂತರ ಇಬ್ಬರ ನಡುವೆ ಮನಸ್ತಾಪಗಳು ಶುರುವಾಗಿದ್ದವು. ಕೊನೆಗೆ ಪರಸ್ಪರ ಸಮ್ಮತಿಯಿಂದ ವಿಚ್ಛೇದನ ಪಡೆದು ದೂರಾಗಿದ್ದರು. ಡಿವೋರ್ಸ್ ಪಡೆದ ನಂತರ ಬೆಂಗಳೂರು ತೊರೆದು ರಾಜಸ್ಥಾನದಲ್ಲೇ ಕೆಲಸ ಮಾಡಿಕೊಂಡಿದ್ದ ಸಂಜಯ್, ವೈಯಕ್ತಿಕ ಜೀವನದ ಹಿನ್ನಡೆಯಿಂದಾಗಿ ಕುಡಿತದ ದಾಸರಾಗಿ ಕೊನೆಗೆ ಅನಾರೋಗ್ಯದಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಶ್ನೆ: ಪವಿತ್ರಾ ಗೌಡ ಮಾಜಿ ಪತಿ ಯಾರು? ಉತ್ತರ: ಸಂಜಯ್ ಸಿಂಗ್

ಪ್ರಶ್ನೆ: ಪವಿತ್ರಾ-ಸಂಜಯ್ ಸಿಂಗ್ ವಿವಾಹ ಯಾವಾಗ ನಡೆದಿತ್ತು? ಉತ್ತರ: 2007-2008ರ ಅವಧಿಯಲ್ಲಿ

ಪ್ರಶ್ನೆ: ಸಂಜಯ್ ಸಿಂಗ್ ಸಾವಿಗೆ ಕಾರಣ ಏನು? ಉತ್ತರ:  ಅತಿಯಾದ ಕುಡಿತದ ಚಟ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?