ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ

ದರ್ಶನ್​, ಪವಿತ್ರಾ ಗೌಡ ಸೇರಿ ಹಲವರ ಮೇಲೆ ಕೊಲೆ ಆರೋಪ ಇದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸಿದ್ದು ಚಾರ್ಜ್​ಶೀಟ್​ ಸಲ್ಲಿಸಲು ಸಜ್ಜಾಗಿದ್ದಾರೆ. ಜೈಲಿನಲ್ಲಿ ಬರೋಬ್ಬರಿ 72 ದಿನಗಳನ್ನು ಕಳೆದಿರುವ ಪವಿತ್ರಾ ಗೌಡ ಅವರು ಈಗ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದು, ಆಗಸ್ಟ್​ 22ರಂದು ಇದರ ವಿಚಾರಣೆ ನಡೆಯಲಿದೆ.

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ
ಪವಿತ್ರಾ ಗೌಡ, ದರ್ಶನ್​, ರೇಣುಕಾ ಸ್ವಾಮಿ
Follow us
Ramesha M
| Updated By: ಮದನ್​ ಕುಮಾರ್​

Updated on: Aug 19, 2024 | 7:04 PM

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ. ಈಗ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಸಾಯಿಸಲಾಗಿತ್ತು. ಈ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ನಟ ದರ್ಶನ್​ ಎ2 ಆಗಿದ್ದಾರೆ. ಈ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಜಾಮೀನು ಪಡೆಯುವ ಸಲುವಾಗಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಜಾಮೀನು ನೀಡುವಂತೆ ಮನವಿ ಮಾಡಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ಗೆ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ ಬಳಿಕ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ನೋಟಿಸ್ ನೀಡಿದೆ. ಸಿಸಿಹೆಚ್ 57 ಕೋರ್ಟ್ ಆಗಸ್ಟ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಪವಿತ್ರಾ ಗೌಡ ಜೊತೆ ಮತ್ತೊಬ್ಬ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಪೊಲೀಸರು ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಚಾರ್ಜ್​ ಶೀಟ್​ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಚಾರ್ಜ್​ಶೀಟ್​ ಸಲ್ಲಿಸುವ ವೇಳೆಗೆ ಸರಿಯಾಗಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಸಿಸಿಎಚ್ 57ರ ನ್ಯಾಯಾಲಯದಲ್ಲಿ ವಕೀಲೆ ರೆನಿ ಸೆಬಾಸ್ಟಿನ್ ಅವರಿಂದ ಪವಿತ್ರಾ ಗೌಡ ಪರ ಜಾಮೀನಿಗೆ ಅರ್ಜಿ ಸಲ್ಲಿಕೆ ಆಗಿದೆ.

ಇದನ್ನೂ ಓದಿ: ಜೈಲಿನಲ್ಲಿ ರಾಖಿ ಕಟ್ಟಿಸಿಕೊಳ್ಳದೇ ಧಿಮಾಕು ತೋರಿದ ದರ್ಶನ್​ ಸ್ನೇಹಿತೆ ಪವಿತ್ರಾ ಗೌಡ

ಆಗಸ್ಟ್​ 22ರಂದು ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುತ್ತೋ ಅಥವಾ ಇಲ್ಲವೋ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ನಟ ದರ್ಶನ್​ ಕೂಡ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಹೈಪ್ರೊಫೈಲ್​ ಕೇಸ್​ ಆದ್ದರಿಂದ ಎಲ್ಲರ ಗಮನ ಈ ಪ್ರಕರಣದ ಮೇಲಿದೆ. ದರ್ಶನ್​ ಕುಟುಂಬದವರು ಆಗಾಗ ಜೈಲಿಗೆ ಭೇಟಿ ನೀಡಿ ಕಾನೂನಿನ ಪ್ರಕ್ರಿಯೆ ಬಗ್ಗೆ ಚರ್ಚಿಸುತ್ತಿದ್ದಾರೆ. ಇಂದು (ಆಗಸ್ಟ್​ 19) ಕೂಡ ದರ್ಶನ್​ ಸಹೋದರ ದಿನಕರ್​ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್​ ಅವರು ಜೈಲಿಗೆ ಭೇಟಿ ನೀಡಿ ಮಾತನಾಡಿಕೊಂಡು ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ