ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳು ಯಾವುವು? ವಿವರಿಸಿದ ವಕೀಲೆ

Pavithra Gowda got bail: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಜಾಮೀನು ದೊರೆತಿದೆ. ಹಿರಿಯ ವಕೀಲ ಸೆಬಾಸ್ಟಿಯನ್ ಅವರು ಪವಿತ್ರಾ ಪರವಾಗಿ ವಾದ ಮಾಡಿದ್ದರು. ಯಾವ ಅಂಶಗಳನ್ನು ಪರಿಗಣಿಸಿ ನ್ಯಾಯಾಲಯವು ಪವಿತ್ರಾ ಅವರಿಗೆ ಜಾಮೀನು ನೀಡಿದೆ ಎಂದು ವಕೀಲರು ವಿವರಿಸಿದ್ದಾರೆ.

ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳು ಯಾವುವು? ವಿವರಿಸಿದ ವಕೀಲೆ
Pavithra-Renuka
Follow us
ಮಂಜುನಾಥ ಸಿ.
|

Updated on:Dec 13, 2024 | 3:27 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್​ಗೂ ಸಹ ಜಾಮೀನು ದೊರೆತಿದೆ. ದರ್ಶನ್​ ಈಗಾಗಲೇ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ. ಆದರೆ ಪವಿತ್ರಾ ಗೌಡ ಕಳೆದ ಆರು ತಿಂಗಳಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಪವಿತ್ರಾ ಗೌಡ ಪರವಾಗಿ ನ್ಯಾಯಾಲಯದಲ್ಲಿ ವಾದ ಮಾಡಿದ ವಕೀಲರ ತಂಡದ ಸದಸ್ಯೆ ಶಿಲ್ಪಾ ಅವರು ತಮ್ಮ ಕಕ್ಷಿಧಾರೆಗೆ ಜಾಮೀನು ಸಿಗಲು ಕಾರಣವಾದ ಅಂಶಗಳ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ.

ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲರಾದ ಸೆಬಾಸ್ಟಿಯನ್ ಅವರು ವಾದ ಮಂಡಿಸಿದ್ದರು. ವಾದದ ವೇಳೆ ಪವಿತ್ರಾ ಗೌಡ ಸಿಂಗಲ್ ಪೇರೆಂಟ್, ಆಕೆ ಒಬ್ಬ ಮಹಿಳೆ ಎಂಬುದರ ಜೊತೆಗೆ ಪ್ರಕರಣದಲ್ಲಿ ಅವರ ಪಾತ್ರ ಇರಲಿಲ್ಲವೆಂದು. ಅಪಹರಣಕ್ಕಾಗಲಿ ಕೊಲೆಗಾಗಲಿ ಅವರು ಕುಮ್ಮಕ್ಕು ನೀಡಿರಲಿಲ್ಲ ಎಂದು ವಾದಿಸಿದ್ದರು. ಇಂದು ಟಿವಿ9 ಜೊತೆ ಮಾತನಾಡಿದ ವಕೀಲೆ ಶಿಲ್ಪಾ, ‘ಪವಿತ್ರಾ ಅವರು ಸಿಂಗಲ್ ಪೇರೆಂಟ್ ಅಥವಾ ಮಹಿಳೆ ಎಂಬ ಅಂಶವನ್ನು ನ್ಯಾಯಾಲಯ ಪರಿಗಣಿಸಿಲ್ಲ, ಬದಲಿಗೆ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಅವರಿಗೆ ಜಾಮೀನು ನೀಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್​ನಲ್ಲಿ ಸಿಕ್ತು ಜಾಮೀನು

ನ್ಯಾಯಾಲಯವು ಏನೇನು ಷರತ್ತುಗಳನ್ನು ವಿಧಿಸಿದೆ ಎಂಬುದು ನಮಗೆ ಈಗ ತಿಳಿಯುವುದಿಲ್ಲ. ನ್ಯಾಯಾಲಯದ ಆದೇಶ ಬಂದ ನಂತರವೇ ಅದರ ಮಾಹಿತಿ ಲಭ್ಯ ಆಗಲಿದೆ ಎಂದ ವಕೀಲೆ ಶಿಲ್ಪಾ, ‘ಪವಿತ್ರಾ ಗೌಡ ಅವರು ಸೋಮವಾರದಂದು ಬಿಡುಗಡೆ ಆಗುವ ಸಾಧ್ಯತೆ ಇದೆ’ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಪವಿತ್ರಾ ಗೌಡ ಅವರ ತಾಯಿ, ‘ಮಗಳಿಗೆ ಜಾಮೀನು ಸಿಕ್ಕಿರುವುದು ಬಹಳ ಖುಷಿಯಾಗಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Fri, 13 December 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ