AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಜೈಲು ಪಾಲು; ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನ್ಯಾಯಾಂಗ ಬಂಧನ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಈಗ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪವಿತ್ರಾ ಗೌಡ ಇನ್ಮುಂದೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸಬೇಕಿದೆ. ನಟ ದರ್ಶನ್​ ಈ ಕೇಸ್​ನಲ್ಲಿ ಎ2 ಆರೋಪಿ ಆಗಿದ್ದು, ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

ಪವಿತ್ರಾ ಗೌಡ ಜೈಲು ಪಾಲು; ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನ್ಯಾಯಾಂಗ ಬಂಧನ
ಪವಿತ್ರಾ ಗೌಡ, ದರ್ಶನ್​
ರಮೇಶ್​ ಎಮ್​.
| Edited By: |

Updated on: Jun 20, 2024 | 4:48 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್​ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಲಾಗಿದೆ. ಇನ್ಮುಂದೆ ಪವಿತ್ರಾ ಗೌಡ (Pavithra Gowda) ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯಬೇಕಿದೆ. ಈ ಪ್ರಕರಣದಲ್ಲಿ ಅವರು ಎ1 ಆಗಿರುವ ಕಾರಣ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ದರ್ಶನ್​, ವಿನಯ್​ ಮುಂತಾದವರು ಕೂಡ ಈ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್​ ಕಳಿಸಿದ್ದ ಎಂಬ ಆರೋಪಿ ಇದೆ. ಆದ್ದರಿಂದ ಆತನಿಗೆ ಬುದ್ಧಿ ಕಲಿಸಲು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಯಿತು. ಈ ಕೇಸ್​ನಲ್ಲಿ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್​, ಪವಿತ್ರಾ ಗೌಡ, ಪವನ್​, ವಿನಯ್​, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಮುಂತಾದವರು ಪ್ರಮುಖ ಆರೋಪಿಗಳು.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಈ ಕೇಸ್​ನ ವಿಚಾರಣೆ ನಡೆಯುತ್ತಿದೆ. ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ. ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶಿಸಿದೆ.

ಇದನ್ನೂ ಓದಿ: ಡಿಎನ್​ಎ ಟೆಸ್ಟ್​ ಮಾಡಿಸಲು ಆಸ್ಪತ್ರೆಗೆ ತೆರಳುವಾಗಿ ಟೆನ್ಷನ್​ ಆದ ಪವಿತ್ರಾ ಗೌಡ

ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಮಗಳು ಖುಷಿ ಗೌಡ ಕೋರ್ಟ್​ಗೆ ಆಗಮಿಸಿದ್ದಾರೆ. ಜೈಲಾದ ಕಾರಣ ಪವಿತ್ರಾ ಗೌಡರನ್ನು ಮಾತನಾಡಿಸಲು ಮಗಳು ಮತ್ತು ಅಜ್ಜಿ ಬಂದಿದ್ದಾರೆ. ತನಿಖೆ ಇನ್ನೂ ಬಾಕಿ ಇರುವ ಕಾರಣದಿಂದ ದರ್ಶನ್‌, ವಿನಯ್, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಧನರಾಜ್‌ನನ್ನು 4 ದಿನಗಳ ಕಾಲ ಮತ್ತೆ ಪೊಲೀಸ್​ ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ