AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪವಿತ್ರಾ ಗೌಡ ಜೈಲು ಸೇರಿದ್ದು, ಅಲ್ಲಿನ ವಾತಾವರಣ ಅವರಿಗೆ ಕಷ್ಟವಾಗುತ್ತಿದೆ. ಹೆಚ್ಚು ಉಪ್ಪು, ಖಾರ ಇಲ್ಲದ ಜೈಲಿನ ಆಹಾರ ಸೇವಿಸುವುದು ಪವಿತ್ರಾ ಗೌಡಗೆ ಕಷ್ಟ ಆಗಿದೆ. ಚಾಪೆಯಲ್ಲಿ ಮಲಗುವುದು ಅವರಿಗೆ ಸಾಧ್ಯವಾಗುತ್ತಿಲ್ಲ. ಸೊಳ್ಳೆ ಕಾಟ ಸಹ ಇರುವುದರಿಂದ ಪವಿತ್ರಾ ಗೌಡ ಮತ್ತಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಅವರು ಮತ್ತೆ ಮತ್ತೆ ಎಚ್ಚರಕೊಳ್ಳುತ್ತಿದ್ದರು.

ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು
ಪವಿತ್ರಾ ಗೌಡ
ರಾಮು, ಆನೇಕಲ್​
| Updated By: ಮದನ್​ ಕುಮಾರ್​|

Updated on: Jun 24, 2024 | 9:36 AM

Share

ಸಖತ್​ ಹೈಫೈ ಜೀವನ ನಡೆಸುತ್ತಿದ್ದ ನಟಿ ಪವಿತ್ರಾ ಗೌಡ (Pavithra Gowda) ಅವರು ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಕೊಲೆ ಕೇಸ್​ನಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದು, ಪರಪ್ಪನ ಅಗ್ರಹಾರದಲ್ಲಿ (Parappana Agrahara) ಜೈಲು ವಾಸ ಅನುಭವಿಸುತ್ತಿದ್ದಾರೆ. ಇಷ್ಟು ದಿನ ದರ್ಶನ್​ ಸ್ನೇಹಿತೆಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಪವಿತ್ರಾ ಗೌಡಗೆ ಜೈಲಿನ ವಾತಾವರಣ ನರಕದಂತೆ ಆಗಿದೆ. ಸರಿಯಾಗಿ ಊಟ ಸೇರದೇ, ನಿದ್ರೆ ಬಾರದೇ ಅವರು ಒದ್ದಾಡುತ್ತಿದ್ದಾರೆ. ಮಂಕಾಗಿ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ (Darshan) ಕೂಡ ಈಗ ಜೈಲಿನಲ್ಲಿದ್ದಾರೆ.

ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿಕೊಂಡು ಬಂದು, ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್​, ಪವಿತ್ರಾ ಗೌಡ ಹಾಗೂ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೊರಗಡೆ ಇದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದ ಅವರಿಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ.

ಸಹಕೈದಿಗಳ ಜೊತೆ ಪವಿತ್ರಾ ಗೌಡ ಬೆರೆಯುತ್ತಿಲ್ಲ. ಅಲ್ಲದೇ ಅವರು ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇಂದು (ಜೂನ್​ 24) ಬೆಳಗ್ಗೆ ಬೇಗ ಎದ್ದ ಅವರು ಕಾಫಿ ಕುಡಿದು, ಪೇಪರ್ ಓದಿದ್ದಾರೆ. ನಿನ್ನೆ ರಾತ್ರಿ ಜೈಲಿನ ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆ ಊಟವನ್ನು ಅವರು ಒಲ್ಲದ ಮನಸ್ಸಿನಿಂದ ಸೇವಿಸಿದ್ದಾರೆ ಎನ್ನಲಾಗಿದೆ.

ಸರಿಯಾಗಿ ಉಪ್ಪು ಖಾರ ಇಲ್ಲದ ಜೈಲಿನ ಊಟ ಸೇವಿಸುವುದು ಪವಿತ್ರಾ ಗೌಡ ಅವರಿಗೆ ಸಖತ್​ ಕಷ್ಟ ಆಗಿದೆ. ಅಷ್ಟೇ ಅಲ್ಲದೇ, ಚಾಪೆಯಲ್ಲಿ ಮಲಗಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದರ ಜೊತೆಗೆ ಸೊಳ್ಳೆ ಕಾಟ ಕೂಡ ಇರುವುದರಿಂದ ಅವರು ಇನ್ನಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಕೂಡ ಅವರು ಪದೇ ಪದೇ ಎಚ್ಚರಕೊಳ್ಳುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದರ್ಶನ್​ ನ್ಯಾಯಾಂಗ ಬಂಧನ: ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದ ರೇಣುಕಾಸ್ವಾಮಿ ತಂದೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣ ದೇಶಾದ್ಯಂತ ಸುದ್ದಿ ಆಗಿದೆ. ಸ್ಟಾರ್​ ನಟ ದರ್ಶನ್​ ಮೇಲೆ ಕೊಲೆ ಆರೋಪ ಬಂದಿರುವುದರಿಂದ ಎಲ್ಲರ ಕಣ್ಣು ಈ ಕೇಸ್​ನ ಮೇಲಿದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ. ದರ್ಶನ್​ ಮೇಲೆ ಗಂಭೀರ ಆರೋಪ ಎದುರಾದ ಕಾರಣ ಅವರ ಆಪ್ತರಿಗೆ ಬೇಸರ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ