AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡಗೆ ಮತ್ತೆ ನಿರಾಸೆ, ಅರ್ಜಿ ವಜಾ ಮಾಡಿದ ಕೋರ್ಟ್

ತಮ್ಮ ಬ್ಯಾರಕ್​​ನಲ್ಲಿ ಇರುವ ನೈಜೀರಿಯನ್ ಮೂಲದ ಆರೋಪಿಗಳಿಂದ ಸಮಸ್ಯೆ ಆಗುತ್ತಿದೆ. ತಮ್ಮ ಉಡುಪುಗಳನ್ನು ಬೇರೆ ಆರೋಪಿಗಳು ಬಳಸುತ್ತಿದ್ದಾರೆ. ಪದೇ ಪದೇ ತಮಗೆ ತೊಂದರೆ ನೀಡುತ್ತಿದ್ದಾರೆ. ತಮಗೆ ಬ್ಯಾರಕ್​​ನಲ್ಲಿ ಇರುವುದಕ್ಕೆ ಆಗುತ್ತಿಲ್ಲ. ಇಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ನ್ಯಾಯಾಧೀಶರ ಸಮಿತಿಯೇ ಬಂದು ಇಲ್ಲಿನ ವ್ಯವಸ್ಥೆ ನೋಡುವಂತೆ ಪವಿತ್ರಾ ಹೇಳಿದ್ದರು. ಜೊತೆಗೆ ತಮ್ಮ ಬ್ಯಾರಕ್ ಬದಲಾವಣೆಗೆ ಅನುಮತಿ ನೀಡಬೇಕು ಎಂದು ಅವರು ಕೋರಿದ್ದರು. ಜೊತೆಗೆ ಪ್ರತ್ಯೇಕ ಆರೋಗ್ಯ ತಪಾಸಣೆಗೂ ಅನುಮತಿ ಕೋರಿದ್ದರು.

ಪವಿತ್ರಾ ಗೌಡಗೆ ಮತ್ತೆ ನಿರಾಸೆ, ಅರ್ಜಿ ವಜಾ ಮಾಡಿದ ಕೋರ್ಟ್
Pavithra Gowda
ಮಂಜುನಾಥ ಸಿ.
|

Updated on: Oct 23, 2026 | 4:32 PM

Share

ಮುಖ್ಯಾಂಶಗಳು

  • ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಜಾ
  • ಬ್ಯಾರಕ್ ಬದಲಾವಣೆಗೆ ಮನವಿ ಮಾಡಿದ್ದ ಪವಿತ್ರಾ
  • ಬ್ಯಾರಕ್​​ನಲ್ಲಿ ದಬ್ಬಾಳಿಕೆ ಆಗುತ್ತಿದೆ ಎಂದಿದ್ದ ಪವಿತ್ರಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನೆಡೆ ಉಂಟಾಗಿದೆ. ಪವಿತ್ರಾ ಗೌಡ ಅವರು ತಮ್ಮ ಬ್ಯಾಕರ್ ಬದಲಾವಣೆ ಕೋರಿ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ 59ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಇಂದಿಗೆ (ಅಕ್ಟೋಬರ್ 23)ಕ್ಕೆ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬಿದ್ದಿದ್ದು ನ್ಯಾಯಾಧೀಶರು ಅರ್ಜಿಯನ್ನು ವಜಾ ಮಾಡಿದ್ದಾರೆ.

ತಮ್ಮ ಬ್ಯಾರಕ್​​ನಲ್ಲಿ ಇರುವ ನೈಜೀರಿಯನ್ ಮೂಲದ ಆರೋಪಿಗಳಿಂದ ಸಮಸ್ಯೆ ಆಗುತ್ತಿದೆ. ತಮ್ಮ ಉಡುಪುಗಳನ್ನು ಬೇರೆ ಆರೋಪಿಗಳು ಬಳಸುತ್ತಿದ್ದಾರೆ. ಪದೇ ಪದೇ ತಮಗೆ ತೊಂದರೆ ನೀಡುತ್ತಿದ್ದಾರೆ. ತಮಗೆ ಬ್ಯಾರಕ್​​ನಲ್ಲಿ ಇರುವುದಕ್ಕೆ ಆಗುತ್ತಿಲ್ಲ. ಇಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ನ್ಯಾಯಾಧೀಶರ ಸಮಿತಿಯೇ ಬಂದು ಇಲ್ಲಿನ ವ್ಯವಸ್ಥೆ ನೋಡುವಂತೆ ಪವಿತ್ರಾ ಹೇಳಿದ್ದರು. ಜೊತೆಗೆ ತಮ್ಮ ಬ್ಯಾರಕ್ ಬದಲಾವಣೆಗೆ ಅನುಮತಿ ನೀಡಬೇಕು ಎಂದು ಅವರು ಕೋರಿದ್ದರು. ಜೊತೆಗೆ ಪ್ರತ್ಯೇಕ ಆರೋಗ್ಯ ತಪಾಸಣೆಗೂ ಅನುಮತಿ ಕೋರಿದ್ದರು.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ನಟ ದರ್ಶನ್ ಖುದ್ದು ಹಾಜರಿ ಕೋರಿ ವಕೀಲರ ಅರ್ಜಿ

ಆದರೆ ವಿಚಾರಣೆ ಆಲಿಸಿದ್ದ 59ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ, ಪವಿತ್ರಾ ಗೌಡ ಅವರ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಪವಿತ್ರಾ ಗೌಡ ಮಾತ್ರವೇ ಅಲ್ಲದೆ ಇತರೆ ಆರೋಪಿಗಳಾದ ಅನುಕುಮಾರ್, ಜಗದೀಶ್ ಸಹ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಆ ಅರ್ಜಿಯನ್ನೂ ಸಹ ವಜಾ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!