ವಿಜಯಲಕ್ಷ್ಮಿ ದರ್ಶನ್​ಗೆ ಪ್ರತಿಕ್ರಿಯೆ: ಹಳೆ ವಿಷಯ ಕೆದಕಿದ ಪವಿತ್ರಾ ಗೌಡ

Vijayalakshmi Darshan vs Pavithra Gowda: ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಪೋಸ್ಟ್​ಗೆ ಪ್ರತಿಯಾಗಿ ಇದೀಗ ಪವಿತ್ರಾ ಗೌಡ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ವಿಜಯಲಕ್ಷ್ಮಿ ದರ್ಶನ್​ಗೆ ಪ್ರತಿಕ್ರಿಯೆ: ಹಳೆ ವಿಷಯ ಕೆದಕಿದ ಪವಿತ್ರಾ ಗೌಡ
Follow us
ಮಂಜುನಾಥ ಸಿ.
|

Updated on: Jan 26, 2024 | 2:16 PM

ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಹಾಗೂ ದರ್ಶನ್​ ಜೊತೆ ಆತ್ಮೀಯ ಬಂಧವುಳ್ಳ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಜಗಳ ಶುರುವಾಗಿದೆ. ವಿಜಯಲಕ್ಷ್ಮಿ ದರ್ಶನ್ ಅವರು ದರ್ಶನ್ ಹಾಗೂ ತಮ್ಮ ಮಗನೊಟ್ಟಿಗೆ ತಾವಿರುವ ಚಿತ್ರವನ್ನು ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯೆಯ ರೀತಿಯಲ್ಲಿ ಪವಿತ್ರಾ ಗೌಡ, ತಮ್ಮ ಹಾಗೂ ದರ್ಶನ್​ರ ಚಿತ್ರಗಳ ಗುಚ್ಛವನ್ನು ಹಂಚಿಕೊಂಡು, ‘ಹತ್ತು ವರ್ಷದ ಸಂಬಂಧ’ ಎಂದು ಕ್ಯಾಪ್ಷನ್ ನೀಡಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ವಿಜಯಲಕ್ಷ್ಮಿ, ಪವಿತ್ರಾ, ತಮ್ಮ ಪತಿಯೊಟ್ಟಿಗೆ ಇರುವ ಕೆಲವು ಹಳೆಯ ಚಿತ್ರಗಳನ್ನು ಹಂಚಿಕೊಂಡು, ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬರ್ಥದ ಸಂದೇಶ ಹಂಚಿಕೊಳ್ಳುವ ಜೊತೆಗೆ, ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದರು. ಇದೀಗ ಪವಿತ್ರಾ ಗೌಡ, ವಿಜಯಲಕ್ಷ್ಮಿ ಅವರ ಪೋಸ್ಟ್​ಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಪವಿತ್ರಾ ಗೌಡ, ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಸ್ಟ್

‘ನಾನು ಪವಿತ್ರ ಗೌಡ ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಜೀವನದಲ್ಲಿ ಉಂಟಾದ ಸಮಸ್ಯೆಗಳಿಂದ ನಾನು ಸಂಜಯ್ ಅವರಿಂದ ವಿಚ್ಛೇದನ ಪಡೆದಿದ್ದೇನೆ. ಇಲ್ಲಿಯ ವರಗೂ ಖುಷಿ ಗೌಡ, ದರ್ಶನ್ ಶ್ರೀನಿವಾಸ್​ ಅವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ. ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. ನಾನು ಯಾವುದೇ ಖಾಸಗಿ ಅವಶ್ಯಕತೆ ಅಥವಾ ಖಾಸಗಿ ಉದ್ದೇಶಗಳಿಗಾಗಿ ಇಲ್ಲಿಲ್ಲ. ನನ್ನದು ಏನಿದ್ದರೂ ಪರಿಪೂರ್ಣ ಪ್ರೀತಿ ಮತ್ತು ಕಾಳಜಿ, ಅದೂ ಕಳೆದ 10 ವರ್ಷದಿಂದ, ಅದು ಸುಲಭದ್ದಾಗಿರಲಿಲ್ಲ. ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ ಕರೆ ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ದಾಖಲೆಗಳು ಹಾಗೂ ನನ್ನ ವಿಚ್ಛೇದನ ದಾಖಲೆ ನನ್ನ ಬಳಿ ಇವೆ. ಸಮಯ ಬಂದಾಗ ಹಂಚಿಕೊಳ್ಳುತ್ತೇನೆ) ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ ಹದಿಹರೆಯದ ಮಗಳಾದ ಖುಷಿ ಗೌಡಳ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬಹಳಷ್ಟು ಜನ ಕೆಟ್ಟ ಪದಗಳನ್ನು ಬಳಕೆ ಮಾಡಿ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೆ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ಖಾಸಗಿ ಫೋಟೊಗಳನ್ನು ಪೋಸ್ಟ್ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ. ಈ ಮೂಲಕ ನಾನು ಹೇಳುವುದೇನೆಂದರೆ ನನಗೂ ಕಾನೂನು ಕ್ರಮ ತೆಗೆದುಕೊಳ್ಳುವ ಹಕ್ಕು ಇದೆ. ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. ನಾನು ಅವರ ಜೀವನಕ್ಕೆ ಬರುವ ಮುಂಚೆ, ಅವರಿಬ್ಬರ ನಡುವೆ ಎಂಥಹಾ ಸಮಸ್ಯೆ ಇತ್ತು, ಅದರಿಂದಾಗಿ ಆತ ಎಷ್ಟು ಕಷ್ಟಗಳನ್ನು ಅನುಭವಿಸಿದ್ದಾನೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಭಾವಿಸಿದ್ದೇನೆ. ಅದನ್ನು ಮತ್ತೊಮ್ಮೆ ನೆನಪು ಮಾಡಿಕೊಳ್ಳಿ’

ಇದನ್ನೂ ಓದಿ:ದನಿ ಎತ್ತುವ ಸಮಯ ಬಂದಿದೆ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಪವಿತ್ರಾ ಗೌಡ ಅವರು ತಮ್ಮ ಈ ಪೋಸ್ಟ್​ ಅನ್ನು ನೇರವಾಗಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಈ ಇಬ್ಬರ ನಡುವೆ ಜಗಳ ತಾರಕಕ್ಕೆ ಏರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ