AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾಸಿಗೆ-ದಿಂಬು ಕೊಡಿ ಪ್ಲೀಸ್, ನಂಗೆ ಜಾಮೀನು ಕೊಡಿ’; ಕೋರ್ಟ್​ನಲ್ಲಿ ದರ್ಶನ್-ಪವಿತ್ರಾ ವಿವಿಧ ಬೇಡಿಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ರದ್ದಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ದಿಂಬು ಮತ್ತು ಹಾಸಿಗೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಕೆಳ ಹಂತದ ನ್ಯಾಯಾಲಯದಲ್ಲಿ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

‘ಹಾಸಿಗೆ-ದಿಂಬು ಕೊಡಿ ಪ್ಲೀಸ್, ನಂಗೆ ಜಾಮೀನು ಕೊಡಿ’; ಕೋರ್ಟ್​ನಲ್ಲಿ ದರ್ಶನ್-ಪವಿತ್ರಾ ವಿವಿಧ ಬೇಡಿಕೆ
ದರ್ಶನ್-ಪವಿತ್ರಾ
ರಾಜೇಶ್ ದುಗ್ಗುಮನೆ
|

Updated on: Aug 30, 2025 | 2:37 PM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ (Darshan), ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಕೆಳ ಹಂತದ ಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.

ದರ್ಶನ್ ಅರ್ಜಿಯಲ್ಲೇನಿದೆ?

ದರ್ಶನ್ ಅವರಿಗೆ ವಿಶೇಷ ಸವಲತ್ತು ನೀಡದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ನಿಯಮದಲ್ಲಿರುವಂತೆ ಒಂದು ಬೆಡ್​ಶೀಟ್ ಮಾತ್ರ ನೀಡಲಾಗಿದೆ ಎನ್ನಲಾಗಿದೆ. ಹೆಚ್ಚುವರಿಯಾಗಿ ಯಾವುದೇ ಬೆಡ್​ಶೀಟ್ ಕೊಟ್ಟಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗಿದೆ.

‘ನಾವು ದರ್ಶನ್​ಗೆ ಮನೆ ಊಟ ಕೇಳುತ್ತಿಲ್ಲ. 5 ಸ್ಟಾರ್ ಅನುಕೂಲ ಕೂಡ ಬೇಕು ಎಂದು ಹೇಳುತ್ತಿಲ್ಲ. ದರ್ಶನ್​ಗೆ ಬೆಡ್​ಶಿಟ್, ದಿಂಬು ಕೊಡುತ್ತಿಲ್ಲ. ಕೋರ್ಟ್​ನಿಂದ ನಿರ್ದೇಶನ ತನ್ನಿ ಎಂದಿದ್ದಾರೆ’ ಎಂದು ದರ್ಶನ್ ಪರ ವಕೀಲ್ ಸುನೀಲ್‌ಕುಮಾರ್ ಸೆಶನ್ ಕೋರ್ಟ್​ನಲ್ಲಿ ವಾದ ಮಾಡಿದ್ದಾರೆ.  ಈ ಅರ್ಜಿ ವಿಚಾರಣೆ ಮುಂದಕ್ಕೆ ಹಾಕಲಾಗಿದೆ. ಇನ್ನು, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಕೆ ಆಗಿತ್ತ. ಇದರ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ ಆಗಿದೆ.

ಇದನ್ನೂ ಓದಿ
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್
Image
ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?
Image
ಧೂಳೆಬ್ಬಿಸಿದ ರಾಜ್ ಹಂಚಿಕೆ ಮಾಡ್ತಿರೋ ‘ಲೋಕಃ’ ಸಿನಿಮಾ; 9.5 ರೇಟಿಂಗ್
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಇದನ್ನೂ ಓದಿ: ದರ್ಶನ್ ಜೈಲು ಪಾಲಾದರೂ ಮೈಸೂರು ನಂಟು ಮರೆಯದ ವಿಜಯಲಕ್ಷ್ಮೀ

ಪವಿತ್ರಾ ಜಾಮೀನು ಅರ್ಜಿ

ಸುಪ್ರೀಂಕೋರ್ಟ್​ನಲ್ಲಿ ಪವಿತ್ರಾ ಗೌಡ ಜಾಮೀನು ರದ್ದಾಗಿದೆ. ಈ ಬೆನ್ನಲ್ಲೇ ಅವರು ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ವೇಳೆ ಪವಿತ್ರಾ ಪರ ವಕೀಲರು ವಾದ ಮಂಡಿಸಿದರು. ‘ಸುಪ್ರೀಂಕೋರ್ಟ್ ಆದೇಶವನ್ನು ನಾವು ಪ್ರಶ್ನಿಸುತ್ತಿಲ್ಲ. ಆದೇಶದಲ್ಲಿ ತಾಂತ್ರಿಕ ಲೋಪವಿರುವುದರಿಂದ ಜಾಮೀನು ನೀಡಬೇಕು’ ಎಂದು ಬಾಲನ್ ವಾದಿಸಿದ್ದಾರೆ. ಇದಕ್ಕೆ ಪ್ರತಿವಾದಿ ಸಚಿನ್ ಆಕ್ಷೇಪ ಹೊರಹಾಕಿದ್ದಾರೆ. ಜಾಮೀನು ಅರ್ಜಿ ರದ್ದು ಮಾಡಿ ಎಂದು ಕೋರಿದ್ದಾರೆ. ಸದ್ಯ ಸೆಪ್ಟೆಂಬರ್ 2ಕ್ಕೆ ಆದೇಶ ಮುಂದೂಡಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ