ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ

ಪವಿತ್ರಾ ಗೌಡ ಅವರು ದರ್ಶನ್ ಅವರ ಜೊತೆಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿ, ‘ಒಂದು ದಶಕ ಕಳೆಯಿತು. ನಮ್ಮ ಸಂಬಂಧಕ್ಕೆ 10 ವರ್ಷ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, ತಿರುಗೇಟು ಕೊಟ್ಟಿದ್ದರು. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದಿತ್ತು. ಈಗ ಮತ್ತೆ ಇವರ ವಿಚಾರ ಚರ್ಚೆಗೆ ಬಂದಿದೆ.

ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ
ಪವಿತ್ರಾ, ವಿಜಯಲಕ್ಷ್ಮಿ, ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: May 21, 2024 | 2:37 PM

ನಟ ದರ್ಶನ್ (Darshan) ಹಾಗೂ ವಿಜಯಲಕ್ಷ್ಮಿ 2003ರ ಮೇ 19ರಂದು ಮದುವೆ ಆದರು. ಇವರ ದಾಂಪತ್ಯಕ್ಕೆ ಈಗ 21 ವರ್ಷ. ಮೇ 19ರಂದು ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದುಬೈಗೆ ತೆರಳಿ ಇವರು ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಮಧ್ಯೆ ನಟಿ ಪವಿತ್ರಾ ಗೌಡ ಅವರು ನಿಗೂಡಾರ್ಥದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಕ್ಕೂ, ಇದಕ್ಕೂ ಕೆಲವರು ಲಿಂಕ್ ಕಲ್ಪಿಸುತ್ತಿದ್ದಾರೆ.

ಪವಿತ್ರಾ ಗೌಡ ಹಾಗೂ ವಿಜಯಲಕ್ಷ್ಮಿ ಮಧ್ಯೆ ಕಿತ್ತಾಟ ನಡೆದಿದ್ದು ಗುಟ್ಟಾಗಿ ಏನು ಉಳಿದಿಲ್ಲ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಓಪನ್ ಆಗಿಯೇ ಕಿತ್ತಾಡಿಕೊಂಡಿದ್ದರು. ಪವಿತ್ರಾ ಗೌಡ ಅವರು ದರ್ಶನ್ ಅವರ ಜೊತೆಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿ, ‘ಒಂದು ದಶಕ ಕಳೆಯಿತು. ನಮ್ಮ ಸಂಬಂಧಕ್ಕೆ 10 ವರ್ಷ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, ತಿರುಗೇಟು ಕೊಟ್ಟಿದ್ದರು. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ನಡೆದಿತ್ತು. ಇದನ್ನೂ ಓದಿ: ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್​-ವಿಜಯಲಕ್ಷ್ಮಿ

ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಇತ್ತೀಚೆಗೆ ದುಬೈಗೆ ತೆರಳಿದ್ದಾರೆ. ಅಲ್ಲಿ ವಿಜಯಲಕ್ಷ್ಮಿ ಅವರು ಪತಿ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರು ವೆಡ್ಡಿಂಗ್​ ದರ್ಶನ್​ ಹಾಗೂ ವಿಜಯಲಕ್ಷ್ಮಿ ಅವರಿಗೆ ಆ್ಯನಿವರ್ಸರಿಯ ಶುಭಾಶಯ ಕೋರಿದ್ದಾರೆ. ದರ್ಶನ್ ಅವರು ವಿಜಯಲಕ್ಷ್ಮಿಗೆ ಹೂಗುಚ್ಛ ಕೊಡುತ್ತಿರುವ ಫೋಟೋನ ವಿಜಯಲಕ್ಷ್ಮಿ ಸ್ಟೇಟಸ್​ನಲ್ಲಿ ಪೋಸ್ಟ್ ಮಾಡಿದ್ದರು. ಈ ಬೆನ್ನಲ್ಲೇ ದರ್ಶನ್ ಅವರು ಹೇಳಿದ್ದ ಕರ್ಮದ ಸಾಲುಗಳನ್ನು ಪವಿತ್ರಾ ಗೌಡ ಸ್ಟೇಟಸ್​ನಲ್ಲಿ ಹಾಕಿದ್ದಾರೆ.

‘ಕರ್ಮ ಅನ್ನೋದು ಹೊರೆ ಇದ್ದಂತೆ. ಸಣ್ಣವರಿದ್ದಾಗ ಹಿರಿಯರು ಹೇಳ್ತಿದ್ರು, ಹೀಗೆಲ್ಲ ಮಾಡ್ತಿದ್ದೀಯಾ ಅದು ಮುಂದಿನ ಜನ್ಮಕ್ಕೆ ಕ್ಯಾರಿ ಆಗುತ್ತದೆ ಎನ್ನುತ್ತಿದ್ದರು. ಈಗ ಹಾಗಿಲ್ಲ, ಅಲ್ಲೇ ಡ್ರಾ, ಅಲ್ಲೇ ಬಹುಮಾನ’ ಎಂದು ದರ್ಶನ್ ಸಂದರ್ಶನದಲ್ಲಿ ಹೇಳಿದ್ದರು. ಈ ವಿಡಿಯೋನ ಸ್ಟೇಟಸ್​ನಲ್ಲಿ ಹಾಕಿದ್ದಾರೆ ಪವಿತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ