Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ

Pavitra Lokesh News: ಸೋಶಿಯಲ್​ ಮೀಡಿಯಾದಲ್ಲಿ ಪವಿತ್ರಾ ಲೋಕೇಶ್​ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯಲಾಗಿದೆ. ಅದರ ಮೂಲಕ ಅವಹೇಳನಕಾರಿ ಪೋಸ್ಟ್​ಗಳನ್ನು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ
ಪವಿತ್ರಾ ಲೋಕೇಶ್
Follow us
TV9 Web
| Updated By: ಮದನ್​ ಕುಮಾರ್​

Updated on: Jun 29, 2022 | 9:36 AM

ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh)​ ಅವರ ವೈಯಕ್ತಿಕ ಜೀವನದ ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡುತ್ತಿವೆ. ಅವರ ದಾಂಪತ್ಯ ಜೀವನದ ಬಗ್ಗೆಯೂ ಹಲವು ಗಾಸಿಪ್​ಗಳು (Pavitra Lokesh News) ಪ್ರಕಟ ಆಗಿವೆ. ಇನ್ನೂ ಕೆಲವರು ಪವಿತ್ರಾ ಲೋಕೇಶ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಮಾಡುತ್ತಿದ್ದಾರೆ. ಇದರ ವಿರುದ್ಧ ಪವಿತ್ರಾ ಲೋಕೇಶ್​ ಅವರು ಸಿಡಿದೆದ್ದಿದ್ದಾರೆ. ಈಗ ಅವರು ಕಾನೂನಿನ ಮೂಲಕ ಸಮರ ಸಾರಲು ಮುಂದಾಗಿದ್ದಾರೆ. ಸೈಬರ್​ ​ ಕ್ರೈಂ (Cyber Crime) ಠಾಣೆಯ ಮೆಟ್ಟಿಲೇರಿರುವ ಪವಿತ್ರಾ ಲೋಕೇಶ್​ ಅವರು ಸುಳ್ಳು ಸುದ್ದಿ ಹರಡಿಸುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಪವಿತ್ರಾ ಲೋಕೇಶ್​ ಅವರು ನರೇಶ್​ ಎಂಬುವವರ ಜೊತೆ ಮದುವೆ ಆಗಿದ್ದಾರೆ ಎಂದು ಅನೇಕ ಕಡೆಗಳಲ್ಲಿ ವರದಿ ಆಗಿದೆ. ಆ ಬಗ್ಗೆ ಇನ್ನಷ್ಟೇ ಸೂಕ್ತ ಸ್ಪಷ್ಟನೆ ಬರಬೇಕಿದೆ. ಅದು ಏನೇ ಇದ್ದರೂ ಅವರ ವೈಯಕ್ತಿಕ ವಿಚಾರ. ಆ ಬಗ್ಗೆ ಅವರು ಸಾರ್ವಜನಿಕವಾಗಿ ಮಾತನಾಡುವುದಕ್ಕೂ ಮುನ್ನವೇ ಹತ್ತಾರು ಬಗೆಯ ಗಾಸಿಪ್​ಗಳು ಹರಿದಾಡಿವೆ. ಇದು ಪವಿತ್ರಾ ಲೋಕೇಶ್​ ಅವರಿಗೆ ಬೇಸರ ಮೂಡಿಸಿದೆ. ಹಾಗಾಗಿ ಅವರು ಮೈಸೂರಿನ ಸೈಬರ್​ ಕ್ರೈಂ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಪವಿತ್ರಾ ಲೋಕೇಶ್​ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯಲಾಗಿದೆ. ಅದರ ಮೂಲಕ ಅವಹೇಳನಕಾರಿ ಪೋಸ್ಟ್​ಗಳನ್ನು ಮಾಡಲಾಗಿದೆ. ಜೊತೆಗೆ, ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಕೂಡ ಅವರು ಆರೋಪಿಸಿದ್ದು, ದೂರು ನೀಡಿದ್ದಾರೆ. ಈ ಕುರಿತು ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಖ್ಯಾತ ನಟ ಮೈಸೂರು ಲೋಕೇಶ್​ ಅವರ ಪುತ್ರಿ ಪವಿತ್ರಾ ಲೋಕೇಶ್​. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮತ್ತು ತೆಲುಗು ಸೇರಿ ನೂರಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಪೋಷಕ ಪಾತ್ರಗಳ ಮೂಲಕ ಪವಿತ್ರಾ ಲೋಕೇಶ್​ ಜನಮನ ಗೆದ್ದಿದ್ದಾರೆ. ಇಂದಿಗೂ ಅವರು ಬಹುಬೇಡಿಕೆಯ ಪೋಷಕ ನಟಿಯಾಗಿ ಚಾರ್ಮ್​ ಉಳಿಸಿಕೊಂಡಿದ್ದಾರೆ. ಅವರ ಪತಿ ಸುಚೇಂದ್ರ ಪ್ರಸಾದ್​ ಹಾಗೂ ಸಹೋದರ ಆದಿ ಲೋಕೇಶ್​ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ