AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್’ದೇ ಬೆಳಕು.. ಶೂಟಿಂಗ್​ ಶುರು

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ. […]

ಮೈಸೂರು: ದಸರಾ ಸಡಗರದ ನೆರಳಲ್ಲಿ ‘ಪೆಟ್ರೋಮ್ಯಾಕ್ಸ್'ದೇ ಬೆಳಕು.. ಶೂಟಿಂಗ್​ ಶುರು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 19, 2020 | 6:03 PM

Share

ಮೈಸೂರು: ಅರಮನೆ ನಗರಿಯಲ್ಲಿ ಈಗ ವಿಶ್ವವಿಖ್ಯಾತ ದಸರಾ ಹಬ್ಬದ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ನಗರದಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.

ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18 ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಿದ್ಲಿಂಗು ಮತ್ತು ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಸಿನಿಮಾಗೆ ಌಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದ್ದೇ.

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಕ್ಯೂಟ್ ಹರಿಪ್ರಿಯಾ. ಅರುಣ್ (ಗೊಂಬೆಗಳ ಲವ್ ಖ್ಯಾತಿ), ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಪೆಟ್ರೋಮ್ಯಾಕ್ಸ್​ಗೆ ನಿರಂಜನ್ ಬಾಬೂರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿಯ ಕಲಾ ನಿರ್ದೇಶನ ಹಾಗೂ ವಿನಯ್​ರ (ತುಮಕೂರು) ಸಹ ನಿರ್ದೇಶನ ಈ ಚಿತ್ರಕ್ಕಿದೆ.

Published On - 6:02 pm, Mon, 19 October 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್