AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಡಾ. ರಾಜ್​​ಕುಮಾರ್ ಅವರ 'ಶ್ರೀ ಚಾಮುಂಡೇಶ್ವರಿ' ಹಾಡನ್ನು ಹಂಚಿಕೊಂಡಿರುವುದು ಕನ್ನಡಿಗರಿಗೆ ಮತ್ತು ಅಣ್ಣಾವ್ರ ಅಭಿಮಾನಿಗಳಿಗೆ ಸಂತಸ ತಂದಿದೆ. 1970ರ 'ಶ್ರೀ ಕೃಷ್ಣದೇವರಾಯ' ಚಿತ್ರದ ಈ ಹಾಡು ಜಗತ್ಜನನಿ ಮಾತೆಯ ಮೇಲಿನ ನಂಬಿಕೆಯನ್ನು ಸಾರುತ್ತದೆ. ರಾಜ್​​ಕುಮಾರ್ ಅವರ ವಿಶ್ವಾದ್ಯಂತ ಖ್ಯಾತಿ ಮತ್ತು ಬಹುಮುಖಿ ಪ್ರತಿಭೆಗೆ ಇದು ಮತ್ತೊಂದು ಸಾಕ್ಷಿ.

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?
ಮೋದಿ-ರಾಜ್​​​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 21, 2026 | 1:46 PM

Share

ಕನ್ನಡದ ವರನಟ ಡಾ. ರಾಜ್​​ಕುಮಾರ್ (Rajkumar) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ನೀಡಿದ ಸಿನಿಮಾಗಳು ಈಗಲೂ ಅನೇಕರಿಗೆ ಮಾದರಿ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಕನ್ನಡದ ಮಾತ್ರವಲ್ಲದೆ, ಪರಭಾಷೆಯ ಮಂದಿಗೂ ರಾಜ್​​ಕುಮಾರ್ ತಿಳಿದಿದ್ದಾರೆ. ರಾಜ್​​ಕುಮಾರ್ ಅವರ ಹಾಡುಗಳು ಕೂಡ ಅನೇಕರ ಫೇವರಿಟ್. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜ್​​ಕುಮಾರ್ ಅವರ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಅಣ್ಣಾವ್ರ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಕೊಟ್ಟಿದೆ.

ರಾಜ್​​ಕುಮಾರ್ ಅವರು ಬಾಂಡ್ ಸಿನಿಮಾಗಳಿಂದ ಹಿಡಿದು, ಪೌರಾಣಿಕ ಸಿನಿಮಾಗಳವರೆಗೆ, ಆ್ಯಕ್ಷನ್ ಸಿನಿಮಾದಿಂದ ಹಿಡಿದು ಭಕ್ತಿ ಪ್ರಧಾನ ಸಿನಿಮಾವರೆಗೆ ಎಲ್ಲ ರೀತಿಯ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ‘ಶ್ರೀ ಕೃಷ್ಣದೇವರಾಯ’ ಸಿನಿಮಾ ಕೂಡ ಒಂದು. ಈ ಚಿತ್ರದಲ್ಲಿ ರಾಜ್​​ಕುಮಾರ್ ಅವರು ಕೃಷ್ಣದೇವರಾಯ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ 1970ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಶ್ರೀ ಚಾಂಮುಂಡೇಶ್ವರಿ..’ ಹಾಡು ಗಮನ ಸೆಳೆಯಿತು. ಇದನ್ನು ಮೋದಿ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು

‘ಶ್ರೀ ಚಾಂಮುಂಡೇಶ್ವರಿ..’ ಹಾಡಿನ ಯೂಟ್ಯೂಬ್ ಲಿಂಕ್ ಶೇರ್ ಮಾಡಿಕೊಂಡಿರೋ ಮೋದಿ, ‘ಜಗತ್ಜನನಿ ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಶಕ್ತಿಯನ್ನು ತುಂಬಲಿದೆ’ ಎಂದು ಹೇಳಿದ್ದಾರೆ. ಈ ಮೂಲಕ ದೈವದ ಭಕ್ತಿ ಸಾರುವ ವಿಡಿಯೋ ಹಂಚಿಕೊಂಡಿದ್ದಾರೆ.

‘ಶ್ರೀ ಚಾಂಮುಂಡೇಶ್ವರಿ..’ಹಾಡನ್ನು ಪಿ. ಲೀಲಾ, ಎಸ್​ ಗೋವಿಂದರಾಜು ಹಾಡಿದ್ದಾರೆ. ಪ್ರಭಾಕರ ಶಾಸ್ತ್ರಿ ಅವರು ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಟಿಜಿ ಲಿಂಗಪ್ಪ ಅವರು ಹಾಡಿಗೆ ಸಂಗೀತ ನೀಡಿದ್ದಾರೆ. ರಾಜ್​​ಕುಮಾರ್, ಜಯಂತಿ,  ಭಾರತಿ, ನರಂಸಿಹರಾಜು ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:58 am, Sat, 21 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್