ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ನರೇಂದ್ರ ಮೋದಿ

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ನಿಧನರಾದ ಸುದ್ದಿ ತಿಳಿದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೋದಿ ಅವರು ಸುದೀಪ್ ಅವರಿಗೆ ಸಾಂತ್ವನದ ಪತ್ರ ಬರೆದಿದ್ದು, ಅದರ ಪ್ರತಿಯನ್ನು ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ದುಃಖದ ಸಮಯದಲ್ಲಿ ಸುದೀಪ್ ಅವರು ಸಿನಿಮಾ ಮತ್ತು ಬಿಗ್ ಬಾಸ್ ಕಾರ್ಯಕ್ರಮಗಳಿಂದ ವಿರಾಮ ಪಡೆದಿದ್ದಾರೆ.

ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ನರೇಂದ್ರ ಮೋದಿ
ಕಿಚ್ಚ ಸುದೀಪ್, ಸರೋಜಾ ಸಂಜೀವ್, ನರೇಂದ್ರ ಮೋದಿ
Follow us
ಮದನ್​ ಕುಮಾರ್​
|

Updated on: Oct 28, 2024 | 5:18 PM

ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ನಿಧನರಾದರು. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅ.20ರಂದು ಮುಂಜಾನೆ ಸರೋಜಾ ಸಂಜೀವ್ ಅವರು ಕೊನೆಯುಸಿರು ಎಳೆದರು. ತಾಯಿಯನ್ನು ಕಳೆದುಕೊಂಡು ನೋವಿನಲ್ಲಿ ಇರುವ ಸುದೀಪ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ. ಪತ್ರದ ಮೂಲಕ ಮೋದಿ ಧೈರ್ಯ ತುಂಬಿದ್ದಾರೆ. ಆ ಪತ್ರದ ಪ್ರತಿಯನ್ನು ಸುದೀಪ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.

‘ನಿಮ್ಮ ತಾಯಿ ಸರೋಜಾ ಸಂಜೀವ್ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ನೋವಾಗಿದೆ. ತಾಯಿಯ ಅಗಲಿಕೆಯಿಂದ ಆದ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಅವರ ಜೊತೆ ನಿಮಗೆ ಇದ್ದ ಬಾಂಧವ್ಯ ಹಾಗೂ ಅವರ ಪರಿಣಾಮ ನಿಮ್ಮ ಮೇಲೆ ಎಷ್ಟಿತ್ತು ಎಂಬುದನ್ನು ಈಗ ನಿಮ್ಮ ದುಃಖವೇ ಹೇಳುತ್ತಿದೆ. ನೆನಪುಗಳ ಮೂಲಕ ಅವರು ಶಾಶ್ವತವಾಗಿ ಇರಲಿದ್ದಾರೆ’ ಎಂದು ಮೋದಿ ಅವರು ಪತ್ರದಲ್ಲಿ ಬರೆದಿದ್ದಾರೆ.

‘ಈ ಕಷ್ಟದ ಸಂದರ್ಭದಲ್ಲಿ ನಾನು ನಿಮಗೆ ಸಂತಾಪ ಸೂಚಿಸುತ್ತೇನೆ. ನಿಮಗಾಗಿ ಮತ್ತು ನಿಮ್ಮ ಹಿತೈಷಿಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ. ನೋವನ್ನು ಭರಿಸುವ ಶಕ್ತಿ ನಿಮಗೆ ಸಿಗಲಿ. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಪತ್ರವನ್ನು ಪೂರ್ಣಗೊಳಿಸಿದ್ದಾರೆ. ಸುದೀಪ್​ ಅವರು ಈ ಪತ್ರದ ಪ್ರತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ.

‘ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರೇ.. ನಿಮ್ಮ ಸಹಾನುಭೂತಿಯ ಸಂತಾಪ ಪತ್ರಕ್ಕಾಗಿ ಪ್ರಾಮಾಣಿಕ ಧನ್ಯವಾದಗಳು. ನಿಮ್ಮ ಚಿಂತನಶೀಲ ಮಾತುಗಳು ಈ ಆಳವಾದ ಕಷ್ಟದ ಸಮಯದಲ್ಲಿ ಸಾಂತ್ವಾನದ ಮೂಲಸೆಲೆಯನ್ನು ನೀಡಿದೆ. ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ. ನಿಮ್ಮ ವಿಶ್ವಾಸಕ್ಕೆ ನಾನು ಅಭಾರಿ’ ಎಂದು ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ತಿಳಿಸಿದ್ದಾರೆ.

ಇದನ್ನೂ ಓದಿ: ಸರೋಜಾ ಸಂಜೀವ್ ಅಂತ್ಯಕ್ರಿಯೆ: ಚಿತಾಗಾರದ ಎದುರು ಸುದೀಪ್ ಕಣ್ಣೀರು

ತಾಯಿ ನಿಧನದ ನಂತರ ಕಿಚ್ಚ ಸುದೀಪ್ ಅವರು ಸಿನಿಮಾ ಮತ್ತು ಬಿಗ್ ಬಾಸ್​ ಕೆಲಸಕ್ಕೆ ಬ್ರೇಕ್ ನೀಡಿದ್ದಾರೆ. ಕಳೆದ ವಾರಾಂತ್ಯದಲ್ಲಿ ಅವರು ಬಿಗ್ ಬಾಸ್​ ಸಂಚಿಕೆಯ ನಿರೂಪಣೆ ಮಾಡಿಲ್ಲ. ಬಿಗ್ ಬಾಸ್​ ಮನೆಯಲ್ಲಿ ಇರುವ ಸ್ಪರ್ಧಿಗಳಿಗೆ ಕೂಡ ಸರೋಜಾ ಸಂಜೀವ್ ಅವರ ಸಾವಿನ ಸುದ್ದಿ ತಿಳಿಸಲಾಗಿದೆ. ವಿಷಯ ಗೊತ್ತಾದ ಬಳಿಕ ಎಲ್ಲರೂ ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!