AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru First Day Collection: ಧ್ರುವ ಸರ್ಜಾ ನಟನೆಯ ಪೊಗರು ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?

ರಥ ಸಪ್ತಮಿ ಪ್ರಯುಕ್ತ ಪೊಗರು ಚಿತ್ರ ಫೆಬ್ರವರಿ 19ರಂದು ತೆರೆಗೆ ಬಂದಿತ್ತು. ವಿಶೇಷ ಎಂದರೆ ಈ ಸಿನಿಮಾ ಮೊದಲ ದಿನ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ ಆಗಿ ಓಡಿದೆ.

Pogaru First Day Collection: ಧ್ರುವ ಸರ್ಜಾ ನಟನೆಯ ಪೊಗರು ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on:Feb 20, 2021 | 4:49 PM

Share

ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಕಂಡಿದ್ದ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಧ್ರುವ ಸರ್ಜಾ ಫ್ಯಾನ್ಸ್​ಗಳನ್ನು ಪೊಗರು ಚಿತ್ರವನ್ನು ಬಾಯ್ತುಂಬ ಹೊಗಳುತ್ತಿದ್ದಾರೆ. ಸಿನಿಮಾದಲ್ಲಿರುವ ಅವರ ಮಾಸ್​ ಅವತಾರ ಅನೇಕರಿಗೆ ಇಷ್ಟವಾಗಿದೆ. ಈ ಮಧ್ಯೆ ಸಿನಿಮಾದ ಮೊದಲ ದಿನದ ಕಲೆಕ್ಷನ್​ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ರಥ ಸಪ್ತಮಿ ಪ್ರಯುಕ್ತ ಪೊಗರು ಚಿತ್ರ ಫೆಬ್ರವರಿ 19ರಂದು ತೆರೆಗೆ ಬಂದಿತ್ತು. ಚಿತ್ರದಲ್ಲಿರುವ ಮೈನವಿರೇಳಿಸುವ ಫೈಟ್​ಗಳು ಹಾಗೂ ಅದ್ಭುತ ಡೈಲಾಗ್​ಗಳು ಅಭಿಮಾನಿಗಳಿಗೆ ತುಂಬಾನೇ ಇಷ್ಟವಾಗಿತ್ತು. ವಿಶೇಷ ಎಂದರೆ, ಈ ಸಿನಿಮಾ ಮೊದಲ ದಿನ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ ಆಗಿ ಓಡಿದೆ.

ಈ ಸಿನಿಮಾ ಮೊದಲ ದಿನ ಒಟ್ಟಾರೆ 6 ಕೋಟಿ ಕಲೆಕ್ಷನ್​ ಮಾಡಿದೆ ಎಂದು ಅಂದಾಜಿಸಲಾಗಿದೆ. ಅಭಿಮಾನಿಗಳಿಗೋಸ್ಕರ ಮುಂಜಾನೆ 6 ಗಂಟೆಗೇ ಶೋ ಇಡಲಾಗಿತ್ತು. ಅಲ್ಲದೆ, ಯಾವುದೆ ದೊಡ್ಡ ಸಿನಿಮಾ ರಿಲೀಸ್​ ಆಗದ ಕಾರಣ ಪೊಗರಿಗೆ ಹೆಚ್ಚು ಚಿತ್ರಮಂದಿರಗಳು ಸಿಕ್ಕಿದ್ದವು. ಇದು ಸಿನಿಮಾದ ಕಲೆಕ್ಷನ್​ ಹೆಚ್ಚಲು ಪ್ರಮುಖ ಕಾರಣ.

ಪೊಗರು ಸಿನಿಮಾ ಮಲ್ಟಿಫ್ಲೆಕ್ಸ್​ಗಳಿಗಿಂತ ಬಿ ಹಾಗೂ ಸಿ ಸಾಲಿನ ಚಿತ್ರಮಂದರಿಗಳಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಅಭಿಮಾನಿಗಳು ಮತ್ತೆ ಮತ್ತೆ ಬಂದು ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಕೊರೊನಾದಿಂದ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಎನ್ನುವ ನಂಬಿಕೆ ಇತ್ತು. ಆದರೆ, ಪೊಗರು ಈ ನಂಬಿಕೆಯನ್ನು ಸುಳ್ಳು ಮಾಡಿದೆ. ಅಷ್ಟೇ ಅಲ್ಲ, ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಅನೇಕ ನಿರ್ಮಾಪಕರು ಸಿನಿಮಾ ರಿಲೀಸ್​ ಮಾಡೋಕೆ ಹಿಂಜರಿದಿದ್ದರು. ಈಗ ಪೊಗರು ಸಿನಿಮಾ ಇವರೆಲ್ಲರಿಗೂ ಬಲ ನೀಡಿದೆ.

ಮುಂದಿನ ದಿನಗಳಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್​ ಆಗುತ್ತಿವೆ. ದರ್ಶನ್​ ನಟನೆಯ ರಾಬರ್ಟ್​, ರಿಷಬ್​ ಶೆಟ್ಟಿ ಅಭಿನಯದ ಹೀರೋ, ಪುನೀತ್​ ಹೀರೋ ಆಗಿ ಕಾಣಿಸಿಕೊಂಡಿರುವ ಯುವರತ್ನ, ಕೋಟಿಗೊಬ್ಬರ 3, ಕೆಜಿಎಫ್​ ಚಾಪ್ಟರ್​ 2ಗಳು ಬಿಡುಗಡೆ ಆಗುತ್ತಿವೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

Pogaru Movie Review: ಪೊಗರು ವಿಮರ್ಶೆ: ಫ್ಯಾನ್ಸ್​ ಖುಷಿಪಡಿಸಲು ಮತ್ತೆ ಮಾಸ್​ ಅವತಾರ ಎತ್ತಿದ ಧ್ರುವ ಸರ್ಜಾ

Published On - 4:17 pm, Sat, 20 February 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ