Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು

Jo Lindner Death: ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಜೋ ಲಿಂಡ್ನರ್​ ನಟಿಸಿದ್ದರು. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅಬ್ಬರಿಸಿದ್ದ ಅವರು ಈಗ ನೆನಪು ಮಾತ್ರ.

Jo Lindner: 30ನೇ ವಯಸ್ಸಿಗೆ ಜೋ ಲಿಂಡ್ನರ್​ ನಿಧನ; ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು
ಜೋ ಲಿಂಡ್ನರ್​, ಧ್ರುವ ಸರ್ಜಾ
Follow us
ಮದನ್​ ಕುಮಾರ್​
|

Updated on: Jul 02, 2023 | 11:24 AM

ಫಿಟ್ನೆಸ್​ ಮತ್ತು ಬಾಡಿ ಬಿಲ್ಡಿಂಗ್​ ಬಗ್ಗೆ ಅತಿಯಾಗಿ ಕಾಳಜಿ ವಹಿಸುವವರಿಗೆ ಒಂದು ಶಾಕಿಂಗ್​ ಸುದ್ದಿ ಎದುರಾಗಿದೆ. ಬಾಡಿ ಬಿಲ್ಡಿಂಗ್​​ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್​ (Jo Lindner) ಅವರು ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಕಬ್ಬಿಣದಂತಹ ದೇಹ ಹೊಂದಿದ್ದ ಅವರು ಏಕಾಏಕಿ ನಿಧನರಾಗಿರುವುದು ಅನುಮಾನಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಅವರಿಗೆ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಂಡಿತ್ತು. ರಕ್ತನಾಳದ ಸಮಸ್ಯೆಯೇ ಅವರ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಜೋ ಲಿಂಡ್ನರ್​ ನಿಧನದ ಸುದ್ದಿಯನ್ನು ಅವರ ಪ್ರೇಯಸಿ ಖಚಿತಪಡಿಸಿದ್ದಾರೆ. ಕನ್ನಡದ ‘ಪೊಗರು’ (Pogaru) ಸಿನಿಮಾದಲ್ಲಿ ಜೋ ಲಿಂಡ್ನರ್​ ನಟಿಸಿದ್ದರು. ನಟ ಧ್ರುವ ಸರ್ಜಾ (Dhruva Sarja) ಎದುರು ಅವರು ಫೈಟ್​ ಮಾಡಿದ್ದರು. ಕ್ಲೈಮ್ಯಾಕ್ಸ್​ ದೃಶ್ಯದಲ್ಲಿ ಅಬ್ಬರಿಸಿದ್ದ ಜೋ ಲಿಂಡ್ನರ್​ ಈಗ ನೆನಪು ಮಾತ್ರ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಜೋ ಲಿಂಡ್ನರ್​ ಅವರು ಅಪಾರ ಜನಪ್ರಿಯತೆ ಹೊಂದಿದ್ದರು. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಲಕ್ಷಾಂತರ ಮಂದಿ ಫಾಲೋ ಮಾಡುತ್ತಿದ್ದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು 87 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಹೊಂದಿದ್ದರು. ‘ಜೋಎಸ್ತೆಟಿಕ್​’ ಎಂಬ ಹೆಸರಿನಿಂದ ಅವರು ಫೇಮಸ್​ ಆಗಿದ್ದರು. ಫಿಟ್ನೆಸ್​ ಬಗ್ಗೆ ಅವರು ಅನೇಕ ಟಿಪ್ಸ್​ ನೀಡುತ್ತಿದ್ದರು. ಬಾಡಿ ಬಿಲ್ಡಿಂಗ್​ ಕ್ಷೇತ್ರದಲ್ಲಿ ಅವರು ಅನೇಕರಿಗೆ ಮಾದರಿ ಆಗಿದ್ದರು. ಆದರೆ ಅವರು ಕೇವಲ 30ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಅದು ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್