ಫಿಟ್ನೆಸ್ ಮತ್ತು ಬಾಡಿ ಬಿಲ್ಡಿಂಗ್ ಬಗ್ಗೆ ಅತಿಯಾಗಿ ಕಾಳಜಿ ವಹಿಸುವವರಿಗೆ ಒಂದು ಶಾಕಿಂಗ್ ಸುದ್ದಿ ಎದುರಾಗಿದೆ. ಬಾಡಿ ಬಿಲ್ಡಿಂಗ್ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್ (Jo Lindner) ಅವರು ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಕಬ್ಬಿಣದಂತಹ ದೇಹ ಹೊಂದಿದ್ದ ಅವರು ಏಕಾಏಕಿ ನಿಧನರಾಗಿರುವುದು ಅನುಮಾನಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಅವರಿಗೆ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಂಡಿತ್ತು. ರಕ್ತನಾಳದ ಸಮಸ್ಯೆಯೇ ಅವರ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಜೋ ಲಿಂಡ್ನರ್ ನಿಧನದ ಸುದ್ದಿಯನ್ನು ಅವರ ಪ್ರೇಯಸಿ ಖಚಿತಪಡಿಸಿದ್ದಾರೆ. ಕನ್ನಡದ ‘ಪೊಗರು’ (Pogaru) ಸಿನಿಮಾದಲ್ಲಿ ಜೋ ಲಿಂಡ್ನರ್ ನಟಿಸಿದ್ದರು. ನಟ ಧ್ರುವ ಸರ್ಜಾ (Dhruva Sarja) ಎದುರು ಅವರು ಫೈಟ್ ಮಾಡಿದ್ದರು. ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಅಬ್ಬರಿಸಿದ್ದ ಜೋ ಲಿಂಡ್ನರ್ ಈಗ ನೆನಪು ಮಾತ್ರ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.
ಜೋ ಲಿಂಡ್ನರ್ ಅವರು ಅಪಾರ ಜನಪ್ರಿಯತೆ ಹೊಂದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಲಕ್ಷಾಂತರ ಮಂದಿ ಫಾಲೋ ಮಾಡುತ್ತಿದ್ದರು. ಇನ್ಸ್ಟಾಗ್ರಾಮ್ನಲ್ಲಿ ಅವರು 87 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದರು. ‘ಜೋಎಸ್ತೆಟಿಕ್’ ಎಂಬ ಹೆಸರಿನಿಂದ ಅವರು ಫೇಮಸ್ ಆಗಿದ್ದರು. ಫಿಟ್ನೆಸ್ ಬಗ್ಗೆ ಅವರು ಅನೇಕ ಟಿಪ್ಸ್ ನೀಡುತ್ತಿದ್ದರು. ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಅವರು ಅನೇಕರಿಗೆ ಮಾದರಿ ಆಗಿದ್ದರು. ಆದರೆ ಅವರು ಕೇವಲ 30ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಅದು ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.
ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.