ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಇದು ಧ್ರುವ ಹವಾ; ಹಿಂದಿಗೆ ಡಬ್​ ಆದ ಪೊಗರು ಚಿತ್ರ, ನಾಲ್ಕೇ ದಿನಕ್ಕೆ ಇಷ್ಟೊಂದು ವೀವ್ಸ್​
ಧ್ರುವ ಸರ್ಜಾ ಪೊಗರು
Follow us
ರಾಜೇಶ್ ದುಗ್ಗುಮನೆ
|

Updated on:Apr 28, 2021 | 7:11 PM

 ಧ್ರುವ ಸರ್ಜಾ ಕೇವಲ ಸ್ಯಾಂಡಲ್​ವುಡ್​ನಲ್ಲಿ ಮಾತ್ರ ಅಭಿಮಾನಿಗಳನ್ನು ಹೊಂದಿಲ್ಲ. ಅವರ ಎಲ್ಲಾ ಚಿತ್ರಗಳು ಹಿಂದಿಗೆ ಡಬ್​ ಆಗಿ ತೆರೆಕಂಡಿವೆ. ಹಿಂದಿ ಪ್ರೇಕ್ಷಕರು ಕೂಡ ಧ್ರುವ ಸಿನಿಮಾವನ್ನು ತುಂಬಾನೇ ಇಷ್ಟಪಟ್ಟು ನೋಡುತ್ತಾರೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ. ಪೊಗರು ಸಿನಿಮಾ ಡಬ್​ ಆಗಿ ಹಿಂದಿಗೆ ತೆರೆಕಂಡಿದೆ. ನಾಲ್ಕೇ ದಿನಕ್ಕೆ ಈ ಚಿತ್ರ ಕೋಟಿ ಕೋಟಿ ವೀಕ್ಷಣೆ ಕಂಡಿದೆ.

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 50 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರ ಹಿಂದಿಗೆ ಡಬ್​ ಆಗಿ ತೆರೆಕಂಡಿದೆ. ಅಲ್ಲಿಯೂ ಧ್ರುವ ಹವಾ ಮುಂದುವರಿದಿದೆ.

ಏಪ್ರಿಲ್​ 25ರಂದು ಪೊಗರು ಸಿನಿಮಾ ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ತೆರೆಕಂಡಿದೆ. ಕೇವಲ ನಾಲ್ಕು ದಿನಕ್ಕೆ ಸಿನಿಮಾ ಬರೋಬ್ಬರಿ 35 ಮಿಲಿಯನ್​ ಅಂದರೆ, 3.5 ಕೋಟಿ ವೀಕ್ಷಣೆ ಕಂಡಿದೆ. ಈ ಮೂಲಕ ಈ ಮಾಸ್​ ಸಿನಿಮಾಗೆ ಹಿಂದಿಯಲ್ಲೂ ಭಾರೀ ಬೇಡಿಕೆ ಸೃಷ್ಟಿ ಆಗಿರುವುದು ಸ್ಪಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ನಟಿಸಿರುವುದಲ್ಲದೆ ಈಗ ಬಾಲಿವುಡ್​​ಗೂ ಕಾಲಿಟ್ಟಿದ್ದಾರೆ. ಹೀಗಾಗಿ ದೇಶಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಪೊಗರು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಅವರನ್ನು ಕಣ್ತುಂಬಿಕೊಳ್ಳಬೇಕು ಎನ್ನುವ ಕಾರಣಕ್ಕೂ ಅನೇಕರು ಈ ಸಿನಿಮಾ ವೀಕ್ಷಿಸಿರಬಹುದು. ಈ ಕಾರಣಕ್ಕೂ ಸಿನಿಮಾದ ವೀಕ್ಷಣೆ ಹೆಚ್ಚಿರಬಹುದು ಎನ್ನಲಾಗುತ್ತಿದೆ.

ಫೆಬ್ರವರಿ 11ರಂದು ಪೊಗರು ರಿಲೀಸ್​ ಆಗಿತ್ತು.  ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿವೆ ಎಂಬ ಕಾರಣಕ್ಕೆ ಸಾಕಷ್ಟು ವಿವಾದ ಕೂಡ ಆಗಿತ್ತು. ಯುಗಾದಿ ಪ್ರಯುಕ್ತ ಈ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

Published On - 7:09 pm, Wed, 28 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ