‘ರಾಬರ್ಟ್’ ನಿರ್ಮಾಪಕ ಉಮಾಪತಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜೇಶ್ ಬಂಧನ
ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮುಂತಾದ ಭೂಗತ ಚಟುವಟಿಕೆಗಳನ್ನು ನಡೆಸಲು ಬಾಂಬೆ ರವಿ ಮತ್ತು ಆತನ ಸಹಚರರು ಪ್ಲ್ಯಾನ್ ರೂಪಿಸಿದ್ದರು. ಬೆಂಗಳೂರಿನಿಂದ ಹೊರಗೆ ಇದ್ದುಕೊಂಡು, ನಗರದಲ್ಲಿನ ಹಣವಂತರಿಗೆ ಧಮ್ಕಿ ಹಾಕುತಿದ್ದರು.
ದರ್ಶನ್ ನಟನೆಯ ರಾಬರ್ಟ್ ಸಿನಿಮಾಗೆ ಬಂಡವಾಳ ಹೂಡಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬಾಂಬೆ ರವಿ ಸಹಚರನಾದ ರಾಜೇಶ್ ಅಲಿಯಾಸ್ ಕರಿಯ ರಾಜೇಶ್ನನ್ನು ಬಂಧಿಸಿದ್ದಾರೆ. ಬಾಂಬೆ ರವಿ ತಂಡಕ್ಕೆ ಸೇರಿದವನಾಗಿದ್ದ ಈತ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಆದರೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕಳೆದ ವರ್ಷ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ಅವರ ಸಹೋದರ ದೀಪಕ್ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ದರೋಡೆ ಮುಂತಾದ ಭೂಗತ ಚಟುವಟಿಕೆಗಳನ್ನು ನಡೆಸಲು ಬಾಂಬೆ ರವಿ ಮತ್ತು ಆತನ ಸಹಚರರು ಪ್ಲ್ಯಾನ್ ರೂಪಿಸಿದ್ದರು. ಬೆಂಗಳೂರಿನಿಂದ ಹೊರಗೆ ಇದ್ದುಕೊಂಡು, ನಗರದಲ್ಲಿನ ಹಣವಂತರಿಗೆ ಧಮ್ಕಿ ಹಾಕುತಿದ್ದ ಈ ಗ್ಯಾಂಗ್ನ ಹಲವರನ್ನು ಈ ಮೊದಲೇ ವಶಕ್ಕೆ ಪಡೆಯಲಾಗಿತ್ತು.
ಘಟನೆ ಕುರಿತಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಹನ್ನೊಂದು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಎರಡು ತಿಂಗಳಿಗೂ ಹೆಚ್ಚು ಕಾಲ ಕಾರ್ಯಚರಣೆ ನಡೆಸಿದ್ದ ದಕ್ಷಿಣ ವಿಭಾಗದ ಪೊಲೀಸರು ಈಗ ರಾಜೇಶ್ ಅಲಿಯಾಸ್ ಕರಿಯ ರಾಜೇಶ್ನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆಯಾದ ಹಳೆ ರೌಡಿ ಪರಂದಾಮಯ್ಯನ ಜೊತೆ ಇರುತ್ತಿದ್ದ ಕರಿಯ ರಾಜೇಶ್ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರವನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್ ಗೌಡ ಅವರು ಈ ಚಿತ್ರದಿಂದ ಗೆಲುವು ಪಡೆದುಕೊಂಡಿದ್ದಾರೆ. ಲಾಕ್ಡೌನ್ ಸಡಿಲಿಕೆ ಬಳಿಕ ಬಿಡುಗಡೆಯಾದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು. ನೂರು ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ರಾಬರ್ಟ್ ಸಿನಿಮಾದ ಹೆಚ್ಚುಗಾರಿಕೆ. ಈಗ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಅವರು ಬಂಡವಾಳ ಹೂಡುತ್ತಿದ್ದಾರೆ.
ಇದನ್ನೂ ಓದಿ:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್ಗೆ ಕೊಲೆ ಬೆದರಿಕೆ
ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..
Published On - 12:34 pm, Tue, 15 June 21