ದರ್ಶನ್ ಮನವಿಗೆ ಕ್ಯಾರೇ ಎನ್ನದ ಪೊಲೀಸರು, ಗನ್ ಲೈಸೆನ್ಸ್ ರದ್ದು

Darshan Thoogudeepa: ನಟ ದರ್ಶನ್​ ಈ ಹಿಂದೆ ತಮ್ಮ ವೈಯಕ್ತಿಕ ಭದ್ರತೆಗಾಗಿ ಪರವಾನಗಿ ಹೊಂದಿರುವ ಬಂದೂಕನ್ನು ಪೊಲೀಸರ ಅನುಮತಿ ಮೇರೆಗೆ ಪಡೆದುಕೊಂಡಿದ್ದರು. ಆದರೆ ಇದೀಗ ಪೊಲೀಸರು ಬಂದೂಕಿನ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಪರವಾನಗಿ ರದ್ದಾಗಿರಲಿದೆ.

ದರ್ಶನ್ ಮನವಿಗೆ ಕ್ಯಾರೇ ಎನ್ನದ ಪೊಲೀಸರು, ಗನ್ ಲೈಸೆನ್ಸ್ ರದ್ದು
Darshan Thoogudeepa
Follow us
ಮಂಜುನಾಥ ಸಿ.
|

Updated on: Jan 21, 2025 | 12:07 PM

ರೇಣುಕಾ ಸ್ವಾಮಿ ಕೊಲೆ ಆರೋಪಿ, ನಟ ದರ್ಶನ್​ ಅವರ ಬಂದೂಕು ಪರವಾನಗಿಯನ್ನು ಪೊಲೀಸ್ ಇಲಾಖೆ ರದ್ದು ಮಾಡಿದೆ. ಸೆಲೆಬ್ರಿಟಿ ಆಗಿದ್ದ ದರ್ಶನ್, ತಮ್ಮ ರಕ್ಷಣೆಗಾಗಿ ಪರವಾನಗಿ ಹೊಂದಿದ್ದ ಬಂದೂಕನ್ನು ಪೊಲೀಸರಿಂದ ಈ ಹಿಂದೆ ಪಡೆದುಕೊಂಡಿದ್ದರು. ಆದರೆ ಇತ್ತೀಚೆಗಷ್ಟೆ ಪೊಲೀಸರು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಉದಾಹರಣೆ ನೀಡಿ ದರ್ಶನ್​ರ ಬಂದೂಕು ಪರವಾನಗಿಯನ್ನು ರದ್ದು ಮಾಡುವುದಾಗಿ ಹೇಳಿದ್ದರು.

ಪೊಲೀಸರಿಗೆ ಪತ್ರ ಬರೆದಿದ್ದ ದರ್ಶನ್, ತಮ್ಮ ಬಂದೂಕು ಲೈಸೆನ್ಸ್ ಅನ್ನು ರದ್ದು ಮಾಡದಂತೆ ಮನವಿ ಮಾಡಿದ್ದರು. ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ಹೇಳಿದ್ದರು. ಆದರೆ ದರ್ಶನ್ ಮನವಿಯನ್ನು ತಿರಸ್ಕರಿಸಿರುವ ಪೊಲೀಸ್ ಇಲಾಖೆ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ. ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ಹೈಕೋರ್ಟ್​ ನಿಯಮಿತ ಜಾಮೀನು ನೀಡಿದೆ. ದರ್ಶನ್ ಮಾತ್ರವಲ್ಲದೆ ಪ್ರಕರಣದ ಎಲ್ಲ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಲಾಗಿದೆ. ಆದರೆ ಪೊಲೀಸರು, ದರ್ಶನ್​ಗೆ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇನ್ನು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ತಮ್ಮಿಂದ ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂಪಾಯಿ ಹಣವನ್ನು ಮರಳಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ.

ಇದನ್ನೂ ಓದಿ:Darshan Case: ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು

ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂಪಾಯಿ ಹಣ ತಮ್ಮದಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರಿಗೆ ಆ ಮೊತ್ತವನ್ನು ಸಾಲವಾಗಿ ನೀಡಿದ್ದು, ಆ ವ್ಯಕ್ತಿ ಹಣ ಮರಳಿಸಿದ್ದರು, ಅದನ್ನು ಮನೆಯಲ್ಲಿ ಇರಿಸಿಕೊಂಡಿದ್ದೆ ಎಂದು ದರ್ಶನ್​ ಹೇಳಿದ್ದಾರೆ. ಆದರೆ ಪೊಲೀಸರು, ದರ್ಶನ್​ ಬಳಿಯಿಂದ ವಶಪಡಿಸಿಕೊಂಡಿರುವ ಹಣ, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಇರಿಸಿಕೊಂಡಿದ್ದ ಹಣವಾಗಿತ್ತು ಎಂದು ಆರೋಪಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ