ಗಂಭೀರ ಸ್ವರೂಪ ಪಡೆದುಕೊಂಡ ಉಪೇಂದ್ರ ವಿವಾದ; ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್
ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಆಕ್ಷೇಪಾರ್ಹ ಶಬ್ದ ಬಳಕೆ ಮಾಡಿದ್ದರು. ಇದರಿಂದ ದಲಿತ ಸಂಘಟನೆಗಳು ಸಿಟ್ಟಿಗೆದ್ದಿವೆ. ಹಲವು ಕಡೆಗಳಲ್ಲಿ ಉಪ್ಪಿ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ.
ನಟ ಉಪೇಂದ್ರ (Upendra) ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ. ತಪ್ಪಿನ ಅರಿವಾದ ಬಳಿಕ ಉಪೇಂದ್ರ ಕ್ಷಮೆ ಕೇಳಿದ್ದರು. ಆದರೆ, ಈ ತಪ್ಪನ್ನು ಕೆಲವರು ಮನ್ನಿಸಿಲ್ಲ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಆಕ್ಷೇಪಾರ್ಹ ಶಬ್ದ ಬಳಕೆ ಮಾಡಿದ್ದರು. ಈ ಶಬ್ದ ಬಳಕೆ ಮಾಡುವಾಗ ಅವರಲ್ಲಿ ಗಂಭೀರತೆ ಇರಲಿಲ್ಲ. ಇದರಿಂದ ದಲಿತ ಸಂಘಟನೆಗಳು ಸಿಟ್ಟಿಗೆದ್ದಿವೆ. ಹಲವು ಕಡೆಗಳಲ್ಲಿ ಉಪ್ಪಿ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರಿಂದ ನಟ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ.
ತಕ್ಷಣ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ಸೂಚಿಸಲಾಗಿದೆ. ನಟನ ಕತ್ರಿಗುಪ್ಪೆ ಮತ್ತು ಸದಾಶಿವನಗರ ಮನೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯ ವಾಟ್ಸ್ಆ್ಯಪ್ ಮೂಲಕ ನೋಟಿಸ್ ರವಾನೆ ಮಾಡಲಾಗಿದೆ. ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಯಲಿದೆ. ವಿಡಿಯೋ ಮಾಡಿದ ಜಾಗದ ಸ್ಥಳ ಮಹಜರನ್ನು ಪೊಲೀಸರು ಮಾಡಲಿದ್ದಾರೆ. ದೂರುದಾರ ಸಮ್ಮುಖದಲ್ಲೇ ಈ ಪ್ರಕ್ರಿಯೆ ನಡೆಯಲಿದೆ.
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ…
— Upendra (@nimmaupendra) August 13, 2023
ಇದನ್ನೂ ಓದಿ: ಜಾತಿ ನಿಂದನೆ ಆರೋಪ: ಉಪೇಂದ್ರ ಹೇಳಿದ್ದೇನು? ಆ ಮಾತಿನ ಹಿನ್ನೆಲೆ ಏನಿತ್ತು? ಉಪ್ಪಿಯ ಮಾತು ಯಥಾವತ್ತು ಇಲ್ಲಿದೆ
ಸಿನಿಮಾ ವಿಚಾರಕ್ಕೆ ಬರೋದಾದರೆ ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಬುದ್ಧಿವಂತ 2’ ಸಿನಿಮಾ ಸೆಪ್ಟೆಂಬರ್ 18ರಂದು ರಿಲೀಸ್ ಆಗಲಿದೆ. ಈ ಚಿತ್ರ ರಿಲೀಸ್ ಆಗುವ ಸಂದರ್ಭದಲ್ಲೇ ಅವರು ವಿವಾದ ಮಾಡಿಕೊಂಡಿದ್ದಾರೆ. ‘ಯುಐ’ ಚಿತ್ರದ ನಿರ್ದೇಶನದಲ್ಲೂ ಉಪ್ಪಿ ತೊಡಗಿಕೊಂಡಿದ್ದಾರೆ. ಈ ವರ್ಷ ತೆರೆಗೆ ಬಂದ ‘ಕಬ್ಜ’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಮತ್ತೊಂದು ಕೇಸ್ ದಾಖಲು..
ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಅವರು ಉಪೇಂದ್ರ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:42 am, Mon, 14 August 23