AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕರಣದಲ್ಲಿ ಇದ್ದಾರೆ ಪ್ರತ್ಯಕ್ಷ ಸಾಕ್ಷಿಗಳು: ಪೊಲೀಸರ ಮಾಹಿತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ, ಆದರೆ ಈಗ ಪೊಲೀಸರು ನ್ಯಾಯಾಲಯಕ್ಕೆ ನೀಡಿರುವ ಮಾಹಿತಿಯಂತೆ ಪ್ರಕರಣದಲ್ಲಿ ಪ್ರತ್ಯಕ್ಷ್ಯ ಸಾಕ್ಷಿಗಳಿದ್ದಾರೆ. ಪ್ರತ್ಯಕ್ಷ್ಯ ಸಾಕ್ಷಿಗಳು ಪ್ರಕರಣದ ದಿಕ್ಕನ್ನೆ ಬದಲಿಸುವ ಸಾಧ್ಯತೆ ಇದೆ.

ಪ್ರಕರಣದಲ್ಲಿ ಇದ್ದಾರೆ ಪ್ರತ್ಯಕ್ಷ ಸಾಕ್ಷಿಗಳು: ಪೊಲೀಸರ ಮಾಹಿತಿ
ದರ್ಶನ್-ರೇಣುಕಾ ಸ್ವಾಮಿ
ಮಂಜುನಾಥ ಸಿ.
|

Updated on: Jun 20, 2024 | 6:22 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪದಲ್ಲಿ ಈವರೆಗೆ ಸುಮಾರು 19 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲ ಆರೋಪಿಗಳು ರೇಣುಕಾ ಸ್ವಾಮಿ ಕೊಲೆಯಲ್ಲಿ ಒಂದಲ್ಲ ಒಂದು ರೀತಿ ಪಾತ್ರವಹಿಸಿದ್ದಾರೆ ಎಂಬುದು ಪೊಲೀಸರ ಆರೋಪ. ಇಂದು (ಜೂನ್ 20) ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನಡೆದ ವಾದ ವಿವಾದದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷ್ಯಗಳು ಇದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಜೂನ್ 20ಕ್ಕೆ ಆರೋಪಿಗಳ ಪೊಲೀಸ್ ಕಸ್ಟಡಿ ಮುಗಿದ ಕಾರಣ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದ 17 ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಮತ್ತೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೆಲವು ಕಾರಣಗಳನ್ನು ಸಹ ನೀಡಲಾಗಿತ್ತು. ಅದರಲ್ಲಿ ಮಹತ್ವದ ಕಾರಣವೆಂದರೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿ ಇದ್ದಾರೆಂಬುದು.

ಈವರೆಗೆ ತಿಳಿದು ಬಂದಿದ್ದ ಅಂಶವೆಂದರೆ ಪಟ್ಟಣಗೆರೆ ಶೆಡ್​ನಲ್ಲಿ ದರ್ಶನ್, ಪವಿತ್ರಾ ಮತ್ತು ಅವರ ಆಪ್ತರು ರೇಣುಕಾ ಸ್ವಾಮಿ ಹಲ್ಲೆ ಮಾಡಿದ್ದರು, ಆತನನ್ನು ಕೊಂದ ಬಳಿಕ ಕೆಲವರಿಗೆ ಹಣ ನೀಡಿ ಶವವನ್ನು ಮೋರಿಗೆ ಎಸೆಯಲಾಗಿತ್ತು. ಶೆಡ್​ನ ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿ ಕೃತ್ಯ ಎಸೆಗಲಾಗಿತ್ತು. ಯಾವುದೇ ಪ್ರತ್ಯಕ್ಷ್ಯ ಸಾಕ್ಷ್ಯಗಳು ಸಿಗದಂತೆ ಆರೋಪಿಗಳು ಎಚ್ಚರ ವಹಿಸಿದ್ದಾರೆ ಎಂಬ ಅಂಶಗಳು ತಿಳಿದು ಬಂದಿತ್ತು. ಆದರೆ ಈಗ ತಿಳಿದು ಬಂದಿರುವ ಮಾಹಿತಿಯೆಂದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ್ಯ ಸಾಕ್ಷ್ಯಗಳು ಇದ್ದಾರೆ ಎಂಬುದು. ಇದು ಈ ಪ್ರಕರಣಕ್ಕೆ ಅತ್ಯಂತ ಮಹತ್ವದ ತಿರುವು ನೀಡಲಿದೆ.

ಇದನ್ನೂ ಓದಿ:Breaking: ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲು ಪಾಲು

ಪ್ರತ್ಯಕ್ಷ ಸಾಕ್ಷ್ಯ ಎಂಬುದು ಯಾವುದೇ ಪ್ರಕರಣದಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ. ದರ್ಶನ್ ಹಾಗೂ ಗ್ಯಾಂಗ್ ಹಲ್ಲೆ ಮಾಡುವಾಗ ಯಾರೋ ಒಬ್ಬ ಅಥವಾ ಕೆಲವರು ಪ್ರತ್ಯಕ್ಷ್ಯವಾಗಿ ಅದನ್ನು ನೋಡಿದವರು ಇದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ದರ್ಶನ್ ಹಾಗೂ ಇತರರನ್ನು ಪುನಃ ಪೊಲೀಸ್ ಕಸ್ಟಡಿಗೆ ಪಡೆಯಲು ಇದನ್ನು ಪ್ರಮುಖ ಕಾರಣವನ್ನಾಗಿ ಪೊಲೀಸರು ಬಳಸಿದ್ದಾರೆ. ಯಾರು ಆ ಪ್ರತ್ಯಕ್ಷ್ಯ ದರ್ಶಿ, ಶೆಡ್​ನ ನೌಕರನಾ? ಅಥವಾ ಶೆಡ್​ನ ಅಕ್ಕ-ಪಕ್ಕ ಇರುವವರಾ? ಆ ವ್ಯಕ್ತಿ ಯಾವ ಘಟನೆಗೆ ಪ್ರತ್ಯಕ್ಷ ಸಾಕ್ಷಿ? ಹಲ್ಲೆಗಾ? ಅಥವಾ ಶವ ವಿಲೇವಾರಿ ಆಗಿದ್ದನ್ನು ನೋಡಿದನಾ? ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ