AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ

‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಗುರುತಿಸಿಕೊಂಡ ನಟ ಮಡೆನೂರು ಮನು ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಡೆನೂರು ಮನು ವಿರುದ್ಧ ನಟಿಯೊಬ್ಬರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗಾಗಿ ಮನು ಅವರನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ
Madenur Manu
ಮದನ್​ ಕುಮಾರ್​
|

Updated on:May 22, 2025 | 3:48 PM

Share

ಕಿರುತೆರೆ ಕಲಾವಿದ ಮಡೆನೂರು ಮನು (Madenur Manu) ವಿರುದ್ಧ ಅತ್ಯಾಚಾರ ಆರೋಪ ಎದುರಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇಲೆ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ಮಡೆನೂರಿನಲ್ಲಿ ಮನು ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರಿಂದ (Bengaluru Police) ವಶಕ್ಕೆ ಪಡೆಯಲಾಗಿದೆ. ಮನು ಅವರನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಕಾನೂನು ಪ್ರಕ್ರಿಯೆ ಮುಂದುವರಿಸಲಾಗುವುದು. ಬಳಿಕ ಇಂದು (ಮೇ 22) ರಾತ್ರಿ ಬಂಧಿಸಿ ಜಡ್ಜ್‌ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.

ಮಡೆನೂರು ಮನು ಮತ್ತು ಯುವತಿ ಮಧ್ಯೆ 2018ರಲ್ಲಿ ಪರಿಚಯ ಬೆಳೆದಿತ್ತು. ಮನು ಅವರೇ ಯುವತಿಗೆ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದರು. ಯುವತಿ ಜೊತೆಗೆ ಆಪ್ತತೆ ಬೆಳೆಸಿಕೊಂಡಿದ್ದ ಮನುಗೆ ಈ ಮೊದಲೇ ಮದುವೆ ಆಗಿ ಒಂದು ಮಗು ಸಹ ಇತ್ತು! ಮನು ಜೊತೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದಾಗ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪ ಹೊರಿಸಿದ್ದಾರೆ.

ಪೊಲೀಸರ ವಶಕ್ಕೆ ಮಡೆನೂರು ಮನು:

ಇದನ್ನೂ ಓದಿ
Image
ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದೆ; ‘ಕಾಮಿಡಿ ಕಿಲಾಡಿ’ ಕಲಾವಿದರ ಜಗಳ ಬೀದಿಗೆ
Image
ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ FIR
Image
ಮೇ 23ಕ್ಕೆ ಕುಲದಲ್ಲಿ ಕೀಳ್ಯಾವುದೋ ರಿಲೀಸ್; ಕಾಮಿಡಿ ಕಿಲಾಡಿ ನಟನ ಹೊಸ ಜರ್ನಿ
Image
‘ಕುಲದಲ್ಲಿ ಕೀಳ್ಯಾವುದೋ’ ಟೈಟಲ್ ಸಿಕ್ಕಿದ್ದು ಅಣ್ಣಾವ್ರ ಆಶೀರ್ವಾದ: ಮಡೆನೂರು

‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ಮಡೆನೂರು ಮನು ಅವರು ಹೀರೋ ಆಗಿ ನಟಿಸಿದ್ದಾರೆ. ಆ ಸಿನಿಮಾ ಮೇ 23ರಂದು ಬಿಡುಗಡೆ ಆಗಲಿದೆ. ಬಿಡುಗಡೆಗೆ ಇನ್ನು ಒಂದು ದಿನ ಬಾಕಿ ಇದೆ ಎನ್ನುವಾಗ ಅವರಿಗೆ ವಿವಾದ ಎದುರಾಗಿದೆ. ಸಿನಿಮಾದ ರಿಲೀಸ್ ಸಂಭ್ರಮದಲ್ಲಿ ಭಾಗಿಯಾಗಬೇಕಿದ್ದ ಅವರು ಈಗ ಪೊಲೀಸರ ಅತಿಥಿ ಆಗುವಂತಾಗಿದೆ. ತಮ್ಮ ಮೇಲಿನ ಆರೋಪಗಳಿಗೆ ಮನು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಅತ್ಯಾಚಾರ ಆಗಿದೆ, ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದೆ’; ‘ಕಾಮಿಡಿ ಕಿಲಾಡಿ’ ಕಲಾವಿದರ ಜಗಳ ಬೀದಿಗೆ

ಫೇಸ್ ಬುಕ್ ಲೈವ್ ಮೂಲಕ ಮಡೆನೂರು ಮನು ಸ್ಪಷ್ಟನೆ ನೀಡಿದ್ದಾರೆ. ‘ಹರಿದಾಡ್ತಿರೋ ವಿಚಾರದ ಬಗ್ಗೆ ಸಾಕ್ಷಿ ಸಮೇತ ಕ್ಲಾರಿಟಿ ಕೊಡುತ್ತೇನೆ. ಇದರ ಹಿಂದೆ ಯಾರೆಲ್ಲ ಇದಾರೆ ಎಂಬುದನ್ನು ಹೇಳುತ್ತೇನೆ. ಸಿನಿಮಾ ನಿಲ್ಲಿಸ್ಬೇಕು ಅಂತ ಒದ್ದಾಡ್ತಿದಾರೆ. ಈ ಸಿನಿಮಾ ಪ್ರಮೋಷನ್ ನೋಡಿ ಯಾರೆಲ್ಲ ನನಗೆ ಬೆದರಿಕೆ ಹಾಕ್ತಿದಾರೆ ಎಂಬುದನ್ನು ಸಾಕ್ಷಿ ಸಮೇತ ತೋರಿಸುತ್ತೇನೆ. ಕಷ್ಟಪಟ್ಟು ಸಿನಿಮಾ ಮಾಡಿದೀವಿ. ಸಿನಿಮಾಗೆ ಯಾವುದೇ ತೊಂದರೆ ಆಗಬಾರದು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Thu, 22 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್