ದರ್ಶನ್ ವಿರುದ್ಧ ಸಿದ್ಧವಾದ ಚಾರ್ಜ್​ಶೀಟ್​ನಲ್ಲಿ ಇರೋದು ಎಷ್ಟು ಸಾವಿರ ಪುಟ ಗೊತ್ತಾ?

| Updated By: ರಾಜೇಶ್ ದುಗ್ಗುಮನೆ

Updated on: Aug 22, 2024 | 10:54 AM

ರೇಣುಕಾ ಸ್ವಾಮಿಯ ಕೊಲೆ ಜೂನ್ 09 ರಂದು ನಡೆದಿತ್ತು. ಜೂನ್ 10 ರಂದು ರೇಣುಕಾ ಸ್ವಾಮಿಯ ಮೃತದೇಹ ಪತ್ತೆಯಾಗಿತ್ತು. ಜೂನ್ 11 ರಂದು ಬೆಳಿಗ್ಗೆ ಮೈಸೂರಿನಲ್ಲಿ ನಟ ದರ್ಶನ್ ಅವರನ್ನು, ಬೆಂಗಳೂರಿನಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ರ ಕೆಲವು ಸಹಚರರನ್ನು ಬಂಧಿಸಲಾಯ್ತು. ಈಗ ಚಾರ್ಜ್​ಶೀಟ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ದರ್ಶನ್ ವಿರುದ್ಧ ಸಿದ್ಧವಾದ ಚಾರ್ಜ್​ಶೀಟ್​ನಲ್ಲಿ ಇರೋದು ಎಷ್ಟು ಸಾವಿರ ಪುಟ ಗೊತ್ತಾ?
ರೇಣುಕಾ ಸ್ವಾಮಿ, ದರ್ಶನ್
Follow us on

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ 3ರಿಂದ 4 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದರ್ಶನ್ ಮತ್ತು ಗ್ಯಾಂಗ್ ರೇಣುಕಾ ಸ್ವಾಮಿ ಅವರನ್ನು ಕರೆತಂದಾಗಿನಿಂದ ನಾಲ್ವರ ಸರೆಂಡರ್​ ಆಗುವವರೆಗಿನ ವೃತ್ತಾಂತವನ್ನು ತೋರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವರದಿ ಆಗಿದೆ.

ದರ್ಶನ್ ಖ್ಯಾತ ಸೆಲೆಬ್ರಿಟಿ. ಹೀಗಾಗಿ, ಇದು ಹೈ ಪ್ರಾಫೈಲ್ ಕೇಸ್ ಎನಿಸಿಕೊಂಡಿದೆ. ಹೀಗಾಗಿ, ಘಟನೆಯ ಕುರಿತು ಹಲವು ಸಾಕ್ಷ್ಯಧಾರಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಹಲವು ಆಯಾಮಗಳಲ್ಲಿ ಪ್ರಕರಣದ ಸೂಕ್ಷ್ಮತೆ ಅರಿತು ಪೊಲೀಸರು ಕೆಲಸ ಮಾಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಿಆರ್​ಪಿಸಿ 164 ಅಡಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಪೊಲೀಸರ ಮುಂದೆ ಒಂದು ಹೇಳಿಕೆ ನೀಡುವ ಸಾಕ್ಷಿಗಳು, ಕೋರ್ಟ್​ಮುಂದೆ ಬೇರೆಯದೇ ಹೇಳಿಕೆ ನೀಡುತ್ತಾರೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಒಟ್ಟಾರೆ 25 ಸಾಕ್ಷ್ಯಗಳನ್ನು ಕರೆತಂದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲು ಮಾಡಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಎನಿಸಿಕೊಂಡಿದೆ.

ಪ್ರಕರಣದ ತನಿಖೆಗೆ ಈಗಾಗಲೇ ಎರಡೂವರೆ ಲಕ್ಷ ರೂಪಾಯಿ ಖರ್ಚಾಗಿದೆ. ಸದ್ಯ ಪೊಲೀಸ್ ಟೀಂ ಎಲ್ಲದಕ್ಕೂ ಹಣದ ಲೆಕ್ಕ ಇಟ್ಟಿದೆ. ಪ್ರತಿಯೊಂದು ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ದಾಖಲು ಮಾಡಿಕೊಳ್ಳಲಿದೆ. ಕೃತ್ಯದಲ್ಲಿ ಆರೋಪಿಗಳ ಪಾತ್ರದ ಕುರಿತು ಉಲ್ಲೇಖ ಮಾಡಲಾಗುತ್ತದೆ.

ಇದನ್ನೂ ಓದಿ: ರೇಣುಕಾ ಸ್ವಾಮಿ-ದರ್ಶನ್ ಪ್ರಕರಣ: ಅಂತಿಮ ಹಂತ ತಲುಪಿದ ತನಿಖೆ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸದ್ಯ ದರ್ಶನ್ ಅವರು ‘ಎ2’ ಆರೋಪಿ ಆಗಿದ್ದಾರೆ. ಅವರನ್ನು ‘ಎ1’ ಆರೋಪಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.