AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kazan Khan: ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಕಲಾವಿದ

Kazan Khan Death: ಕನ್ನಡದ ‘ಹಬ್ಬ’, ‘ನಾಗದೇವತೆ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ಕಝಾನ್​ ಖಾನ್​ ನಿಧನಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

Kazan Khan: ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಕಲಾವಿದ
ಕಝಾನ್​ ಖಾನ್​
ಮದನ್​ ಕುಮಾರ್​
|

Updated on:Jun 13, 2023 | 10:12 AM

Share

ಜನಪ್ರಿಯ ನಟ ಕಝಾನ್​ ಖಾನ್​ (Kazan Khan) ಅವರು ಸೋಮವಾರ (ಜೂನ್​ 12) ನಿಧನರಾಗಿದ್ದಾರೆ. ತೀವ್ರ ಹೃದಯಾಘಾತ (Heart Attack) ಆದ ಬಳಿಕ ಅವರು ಇಹಲೋಕ ತ್ಯಜಿಸಿದ್ದಾರೆ ಎಂಬುದು ತಿಳಿದುಬಂದಿದೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡುವ ಮೂಲಕ ಕಝಾನ್​ ಖಾನ್​ ಅವರು ಫೇಮಸ್​ ಆಗಿದ್ದರು. ಮಲಯಾಳಂ, ತಮಿಳು ಸಿನಿಮಾಗಳಲ್ಲಿ ಅವರು ಹೆಚ್ಚಾಗಿ ನಟಿಸಿದ್ದರು. ಕನ್ನಡದ ‘ಹಬ್ಬ’, ‘ನಾಗದೇವತೆ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ಕಝಾನ್​ ಖಾನ್​ ನಿಧನಕ್ಕೆ (Kazan Khan Death) ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಖ್ಯಾತ ನಟನ ಸಾವಿನಿಂದ ಚಿತ್ರರಂಗಕ್ಕೆ ಆಘಾತ ಆಗಿದೆ.

ಕಝಾನ್​ ಖಾನ್​ ಅವರ ನಿಧನದ ಸುದ್ದಿಯನ್ನು ನಿರ್ಮಾಪಕ ಎನ್​ಬಿ ಬದುಶ ಅವರು ಖಚಿತಪಡಿಸಿದ್ದಾರೆ. ಈ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ‘ಗಂಧರ್ವಂ’, ‘ಸಿಐಡಿ ಮೂಸಾ’, ‘ದಿ ಕಿಂಗ್​’, ‘ಡ್ರೀಮ್ಸ್​’, ‘ಸೇತುಪತಿ ಐಪಿಎಸ್​’, ‘ವಾನತೈಪೋಲ’, ‘ಮೇಟ್ಟುಕುಡಿ’, ‘ವಲ್ಲರಸು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕಝಾನ್​ ಖಾನ್​ ನಟಿಸಿದ್ದರು. ಅವರು ಮಾಡಿದ ಗಮನಾರ್ಹ ಪ್ರಾತ್ರಗಳನ್ನು ಅಭಿಮಾನಿಗಳು ಈಗ ನೆನಪು ಮಾಡಿಕೊಳ್ಳುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕಝಾನ್​ ಖಾನ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1992ರಲ್ಲಿ. ತಮಿಳು ಸಿನಿಮಾಗಳಿಂದ ಅವರ ಬಣ್ಣದ ಬದುಕು ಆರಂಭ ಆಯಿತು. ನಂತರ 1995ರಲ್ಲಿ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಅಲ್ಲಿಯೂ ಅವರಿಗೆ ಯಶಸ್ಸು ಸಿಕ್ಕಿತು.

ಇದನ್ನೂ ಓದಿ: ಸೋಮವಾರದಂದು ಅತಿ ಹೆಚ್ಚು ಹೃದಯಾಘಾತ ಸಂಭವಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ಕಾರಣ ಹೀಗಿದೆ

ವಿಲನ್​ ಪಾತ್ರಗಳಲ್ಲಿ ಅವರನ್ನು ನೋಡಲು ಪ್ರೇಕ್ಷಕರು ಇಷ್ಟಪಡುತ್ತಿದ್ದಾರೆ. 50ಕ್ಕೂ ಅಧಿಕ ಸಿನಿಮಾಗಳಲ್ಲಿ ಕಝಾನ್​ ಖಾನ್​ ನಟಿಸಿದ್ದರು. ಅನೇಕ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:07 am, Tue, 13 June 23

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?