AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಬಳಿಕ ‘ರಾಜರಥ’ ಸಿನಿಮಾ ಮಾಡಿದರು. ಇದು ಮಿಶ್ರಪ್ರತಿಕ್ರಿಯೆ ಪಡೆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ್ದು ‘ವಿಕ್ರಾಂತ್ ರೋಣ’ ಸಿನಿಮಾ. ಈ ಚಿತ್ರ ಮುಗಿದ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾ ಅನೌನ್ಸ್ ಮಾಡಲು ಕಾದಿದ್ದಾರೆ.

ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ
ಅನೂಪ್​-ಸುದೀಪ್
TV9 Web
| Edited By: |

Updated on: Sep 02, 2023 | 11:17 AM

Share

ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ಅನೂಪ್ ಭಂಡಾರಿ (Anup Bhandari) ಅವರ ಕಾಂಬಿನೇಷನ್​ನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ 3ಡಿಯಲ್ಲೂ ಮೂಡಿ ಬಂದಿತ್ತು. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಈ ಜೋಡಿ ಮತ್ತೊಮ್ಮೆ ಒಂದಾಗಲಿದೆ ಎಂಬುದು ಈ ಮೊದಲೇ ಘೋಷಣೆ ಆಗಿತ್ತು. ಆದರೆ, ಸಿನಿಮಾ ಬಗ್ಗೆ ಈವರೆಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಸುದೀಪ್ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 2) ಸಿನಿಮಾ ಅನೌನ್ಸ್ ಆಗಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ. ಈ ಬಗ್ಗೆ ಅನೂಪ್ ಭಂಡಾರಿ ಅವರು ಮಾಹಿತಿ ನೀಡಿದ್ದಾರೆ.

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಬಳಿಕ ‘ರಾಜರಥ’ ಸಿನಿಮಾ ಮಾಡಿದರು. ಇದು ಮಿಶ್ರಪ್ರತಿಕ್ರಿಯೆ ಪಡೆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ್ದು ‘ವಿಕ್ರಾಂತ್ ರೋಣ’ ಸಿನಿಮಾ. ಈ ಚಿತ್ರ ಮುಗಿದ ಬಳಿಕ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾ ಅನೌನ್ಸ್ ಮಾಡಲು ಕಾದಿದ್ದಾರೆ. ಆದರೆ, ಸುದೀಪ್ ಜನ್ಮದಿನಕ್ಕೆ ಈ ಬಗ್ಗೆ ಯಾವುದೇ ಅಪ್​ಡೇಟ್ ನೀಡುತ್ತಿಲ್ಲ. ಈ ಬಗ್ಗೆ ಅನೂಪ್ ಟ್ವೀಟ್ ಮಾಡಿದ್ದಾರೆ.

‘ನೀವು ನಾನು ನೀಡುವ ಅಪ್​ಡೇಟ್​ಗಾಗಿ ಕಾದಿದ್ದೀರಿ ಎಂಬುದು ಗೊತ್ತು. ನಾನು ಕೂಡ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಲು ನಿಮ್ಮಷ್ಟೇ ಕಾತುರದಿಂದ ಕಾದಿದ್ದೇನೆ. ಆದರೆ, ಸುದೀಪ್ ನಟನೆಯ ಹಲವು ಸಿನಿಮಾಗಳು ಘೋಷಣೆ ಆಗುತ್ತಿರುವುದರಿಂದ ಸದ್ಯಕ್ಕೆ ಅಪ್​ಡೇಟ್ ನೀಡದಿರಲು ನಮ್ಮ ತಂಡದವರು ನಿರ್ಧಾರ ತೆಗೆದುಕೊಂಡಿದ್ದಾರೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದ’ ಎಂದು ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Sanvi Sudeep: ‘ಮತ್ತಷ್ಟು ಬರೋದಿದೆ’; ಕುತೂಹಲ ಮೂಡಿಸಿದ ಸಾನ್ವಿ ಸುದೀಪ್ ಫೋಟೋಶೂಟ್

ಸುದೀಪ್ ಹೊಸ ಹೊಸ ಸಿನಿಮಾ ಘೋಷಣೆ

ಕಿಚ್ಚ ಸುದೀಪ್ ಅವರ 46ನೇ ಸಿನಿಮಾಗೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೈಟಲ್ ಶೀರ್ಷಿಕೆ ಟೀಸರ್ ಗಮನ ಸೆಳೆಯುತ್ತಿದೆ. ಈ ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ಹೆಚ್ಚಿದೆ. ಸುದೀಪ್ ಅವರು ಸಿನಿಮಾ ನಿರ್ದೇಶನಕ್ಕೆ ಮರಳಿದ್ದಾರೆ. ‘ಕೆಆರ್​ಜಿ ಸ್ಟುಡಿಯೋ’ ಮೂಲಕ ಈ ಚಿತ್ರ ಮೂಡಿಬರಲಿದೆ.  ಇನ್ನು ಆರ್ ಚಂದ್ರು ಜೊತೆಗೂ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ಇನ್ನು, ಅನೂಪ್ ಭಂಡಾರಿ ಜೊತೆಗಿನ ಸಿನಿಮಾ ಯಾವಾಗ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!