‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ
Prabhas movie: ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ ಕೆಲವು ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ಗಲಾಟೆ ಮಾಡಿದ್ದು, ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದಾರೆ.

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ ಕೆಲವು ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ಗಲಾಟೆ ಮಾಡಿದ್ದು, ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದಾರೆ.
ಆಂಧ್ರ ಪ್ರದೇಶದಲ್ಲಿ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ತೆಲಂಗಾಣದಲ್ಲಿ ಅದರಲ್ಲೂ ವಿಶೇಷವಾಗಿ ಹೈದರಾಬಾದ್ನಲ್ಲಿ ಕೆಲವು ಚಿತ್ರಮಂದಿರಗಳಲ್ಲಿ ಬಹಳ ತಡವಾಗಿ ಪ್ರೀಮಿಯರ್ ಶೋ ಆಯೋಜನೆ ಮಾಡಲಾಯ್ತು. ಇದರಿಂದಾಗಿ ಸಾಕಷ್ಟು ಗೊಂದಲ ಉಂಟಾಗಿದೆ.
ಹೈದರಾಬಾದ್ನ ವಿಮಲ್ ಚಿತ್ರಮಂದಿರಗಳಲ್ಲಿ ಪ್ರಭಾಸ್ ಅಭಿಮಾನಿಗಳು ಗುರುವಾರ ರಾತ್ರಿ ದಾಂಧಲೆ ನಡೆಸಿದ್ದು, ಚಿತ್ರಮಂದಿರದ ಗಾಜುಗಳನ್ನು ಒಡೆದಿದ್ದಾರೆ. ವಿಮಲ್ ಚಿತ್ರಮಂದಿರದಲ್ಲಿ ಶೋ ತಡವಾಗಿದ್ದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಹೈದರಾಬಾದ್ನ ಇನ್ನೂ ಕೆಲವು ಚಿತ್ರಮಂದಿರಗಳಲ್ಲಿಯೂ ಸಹ ಪ್ರಭಾಸ್ ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ವಿಮಲ್ ಚಿತ್ರಮಂದಿರದಲ್ಲಿ ಪೊಲೀಸರು ಲಾಠಿಚಾರ್ಜ್ ಸಹ ಮಾಡಿದ್ದಾರೆ. ಕೆಲವು ಅಭಿಮಾನಿಗಳು, ಪೊಲೀಸರಿಂದ ಲಾಠಿ ಕಿತ್ತುಕೊಂಡು ಅವರ ಮೇಲೆಯೇ ದಾಳಿ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.
Janalu out of control ay vimal, police la midha ki reverse aithunnaru#Prabhas #TheRajaSaab pic.twitter.com/VNEP7ufHDy
— RRRR👑 (@__RRRR__8) January 8, 2026
ಪ್ರಭಾಸ್ ನಟಿಸಿರುವ ‘ದಿ ರಾಜಾ ಸಾಬ್’ ಸಿನಿಮಾ ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಪ್ರಭಾಸ್ ಜೊತೆಗೆ ನಿಧಿ ಅಗರ್ವಾಲ್, ರಿಧ್ಧಿ ಕುಮಾರ್, ಮಾಳವಿಕಾ ಮೋಹನನ್ ನಟಿಸಿದ್ದಾರೆ. ಬೊಮನ್ ಇರಾನಿ ಮತ್ತು ಸಂಜಯ್ ದತ್ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಮಾರುತಿ. ಬಹಳ ವರ್ಷಗಳ ಬಳಿಕ ಪ್ರಭಾಸ್ ಹಾಸ್ಯಕ್ಕೆ ಪ್ರಾಮುಖ್ಯತೆ ಇರುವ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




