AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ಗೆ ಪ್ರಶಂಸೆಗಳ ಸುರಿಮಳೆ, ಪ್ರಭಾಸ್, ಜೂ ಎನ್​​ಟಿಆರ್ ಹೇಳಿದ್ದೇನು?

Kantara Chapter 1 movie: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿನ್ನೆ ಬಿಡುಗಡೆ ಆಗಿದ್ದು ಸಾಮಾನ್ಯ ಪ್ರೇಕ್ಷಕ ಸಿನಿಮಾ ಅನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಅದರ ಜೊತೆಗೆ ಕೆಲವು ಸೆಲೆಬ್ರಿಟಿಗಳು ಸಹ ಸಿನಿಮಾ ಅನ್ನು ಮೆಚ್ಚಿ ಕೊಂಡಾಡಿದ್ದಾರೆ. ಸಿನಿಮಾ ಬಗ್ಗೆ ಪ್ರಭಾಸ್, ಜೂ ಎನ್​​ಟಿಆರ್, ಸಂದೀಪ್ ರೆಡ್ಡಿ ವಂಗಾ ಹೇಳಿರುವುದೇನು?

‘ಕಾಂತಾರ: ಚಾಪ್ಟರ್ 1’ಗೆ ಪ್ರಶಂಸೆಗಳ ಸುರಿಮಳೆ, ಪ್ರಭಾಸ್, ಜೂ ಎನ್​​ಟಿಆರ್ ಹೇಳಿದ್ದೇನು?
Kantara Chapter 1
ಮಂಜುನಾಥ ಸಿ.
|

Updated on: Oct 03, 2025 | 11:38 AM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿ, ಹೊಂಬಾಳೆ ನಿರ್ಮಾಣ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನ 60 ಕೋಟಿ ರೂಪಾಯಿಗೆ ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಜನ ಥ್ರಿಲ್ ಆಗಿದ್ದಾರೆ. ರಿಷಬ್ ಶೆಟ್ಟಿ, ಪ್ರೇಕ್ಷಕರನ್ನು ಯಾವುದೋ ಲೋಕಕ್ಕೆ ಕರೆದೊಯ್ದಿದ್ದಾರೆ. ಸಾಮಾನ್ಯ ಪ್ರೇಕ್ಷಕರು ಸಿನಿಮಾ ಅನ್ನು ಕೊಂಡಾಡುತ್ತಿದ್ದಾರೆ. ಜೊತೆಗೆ ಸಿನಿಮಾ ಸೆಲೆಬ್ರಿಟಿಗಳು ಸಹ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅನ್ನು ಕೊಂಡಾಡಿದ್ದಾರೆ. ನಟ ಪ್ರಭಾಸ್, ಜೂ ಎನ್​​ಟಿಆರ್ ಇನ್ನೂ ಹಲವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಟ್ವೀಟ್ ಮಾಡಿದ್ದಾರೆ.

ನಟ ಪ್ರಭಾಸ್, ಇನ್​​ಸ್ಟಾಗ್ರಾಂನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದು, ‘ಕಾಂತಾರ: ಚಾಪ್ಟರ್ 1’ ಒಂದು ಅದ್ಭುತವಾದ ಸಿನಿಮಾ, ಅದ್ಭುತ ನಟನೆ ಇರುವ ಸಿನಿಮಾ, ಇದು ಈ ವರ್ಷದ ನಂಬರ್ 1 ಬ್ಲಾಕ್ ಬಸ್ಟರ್ ಸಿನಿಮಾ ಆಗಲಿದೆ. ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಹಾಗೂ ಹೊಂಬಾಳೆ ಫಿಲಮ್ಸ್​ಗೆ ಅಭಿನಂದನೆಗಳು’ ಎಂದಿದ್ದಾರೆ.

ಇದನ್ನೂ ಓದಿ:ಸಂದೀಪ್ ರೆಡ್ಡಿ ವಂಗಾ ಸಿನಿಮಾ ಬಗ್ಗೆ ಮಾತನಾಡಿದ ತೃಪ್ತಿ ದಿಮ್ರಿ

ಇನ್ನು ನಟ ಜೂ ಎನ್​ಟಿಆರ್ ನಿನ್ನೆಯೇ ಟ್ವೀಟ್ ಮಾಡಿ, ರಿಷಬ್ ಶೆಟ್ಟಿ ಅವರಿಗೆ ಶುಭ ಕೋರಿದ್ದರು. ‘ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಅಭಿನಂದನೆಗಳು, ನೀವು ಅದ್ಭುತವಾದ ಯಶಸ್ಸನ್ನು ಪಡೆಯುತ್ತಿದ್ದೀರಿ. ರಿಷಬ್ ಶೆಟ್ಟಿ ಅವರು ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದಾರೆ. ಅವರು ನಟನೆ ಹಾಗೂ ನಿರ್ದೇಶನ ಎರಡರಲ್ಲೂ ಅದ್ಭುತವಾದುದನ್ನು ಸಾಧಿಸಿದ್ದಾರೆ. ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ವಿಶೇಷವಾಗಿ ರಿಷಬ್ ಶೆಟ್ಟಿ ಮೇಲೆ ನಿರ್ಭೀತಿಯಿಂದ ನಂಬಿಕೆ ಇಟ್ಟ ಹೊಂಬಾಳೆ ಫಿಲಮ್ಸ್​ಗೆ’ ಎಂದಿದ್ದಾರೆ ಜೂ ಎನ್​​ಟಿಆರ್.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಗ್ಗೆ ‘ಅರ್ಜುನ್ ರೆಡ್ಡಿ’, ‘ಅನಿಮಲ್’ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಹ ಟ್ವೀಟ್ ಮಾಡಿದ್ದು, ‘ಕಾಂತಾರ: ಚಾಪ್ಟರ್ 1’ ಒಂದು ಮಾಸ್ಟರ್​​ಪೀಸ್, ಭಾರತೀಯ ಚಿತ್ರರಂಗ ಇಂಥಹಾ ಒಂದು ಸಿನಿಮಾವನ್ನು ಹಿಂದೆಂದೂ ನೋಡಿಲ್ಲ. ಇದೊಂದು ಸಿನಿಮಾ ಸುನಾಮಿ, ಸಿನಿಮಾ ದೈವೀಕವಾಗಿದೆ, ಸಿನಿಮಾನಲ್ಲಿ ತಪ್ಪು ಹುಡುಕಲು ಸಾಧ್ಯವಿಲ್ಲ. ರಿಷಬ್ ಶೆಟ್ಟಿ ಒನ್​ ಮ್ಯಾನ್ ಶೋ ನೀಡಿದ್ದಾರೆ. ಅದ್ಭುತ ಪ್ರದರ್ಶನ ನೀಡುವ ಜೊತೆಗೆ ಅತ್ಯದ್ಭುತವಾದ ಸಿನಿಮಾ ಕಟ್ಟಿಕೊಟ್ಟಿದ್ದಾರೆ’ ಎಂದಿದ್ದಾರೆ.

ನಿನ್ನೆ ಟ್ವೀಟ್ ಮಾಡಿದ್ದ ನಟ ಶಿವರಾಜ್ ಕುಮಾರ್, ‘ಕಾಂತಾರ ನಮ್ಮ ನೆಲದ ಕಥೆ. ನಮ್ಮ ನಾಡಿನ ಕಥೆ. ಇಂದು ಕಾಂತಾರವನ್ನು ಇಡೀ ದೇಶವೇ ಮೆಚ್ಚುತ್ತಿರುವುದು ತುಂಬಾ ಹೆಮ್ಮೆಯ ವಿಷಯ. ರಿಷಬ್ ಶೆಟ್ಟಿ, ಹೊಂಬಾಳೆ ಫಿಲಮ್ಸ್, ವಿಜಯ್ ಕಿರಗಂದೂರು, ಅಜನೀಶ್ ಲೋಕನಾಥ್ ಅವರಿಗೆ ಅಭಿನಂದನೆಗಳು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!