‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಪ್ರಜ್ವಲ್​ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ‘ಆನಂದ್​ ಆಡಿಯೋ’ ಮೂಲಕ ಈ ಸಿನಿಮಾದ ಹೊಸ ಸಾಂಗ್​ ರಿಲೀಸ್​ ಆಗಿದೆ.

‘ಮಾಫಿಯಾ’ ಚಿತ್ರದ ಹೊಸ ಹಾಡು ರಿಲೀಸ್​; ಪ್ರಜ್ವಲ್ ದೇವರಾಜ್​ ಜತೆ ಅದಿತಿ ಪ್ರಭುದೇವ ರೊಮ್ಯಾಂಟಿಕ್ ಗೀತೆ
ಅದಿತಿ ಪ್ರಭುದೇವ, ಪ್ರಜ್ವಲ್​ ದೇವರಾಜ್​
Follow us
ಮದನ್​ ಕುಮಾರ್​
|

Updated on: Jan 04, 2024 | 6:35 PM

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಅಭಿನಯಿಸಿರುವ ‘ಮಾಫಿಯಾ’ ಸಿನಿಮಾ (Mafia Movie) ಒಂದಷ್ಟು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರತಂಡದಿಂದ ಈಗ ಒಂದು ರೊಮ್ಯಾಂಟಿಕ್ ಸಾಂಗ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ ಮತ್ತು ಅದಿತಿ ಪ್ರಭುದೇವ (Aditi Prabhudeva) ಅವರು ಜೋಡಿಯಾಗಿ ನಟಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಲೋಹಿತ್ ಅವರು ‘ಮಾಫಿಯಾ’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಕ ಲೋಹಿತ್​ ಮತ್ತು ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ ಸಿನಿಮಾದಲ್ಲಿ ಒಂದಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದೆ. ಈಗ ಹಾಡಿನ ಮೂಲಕ ಸದ್ದು ಮಾಡುತ್ತಿದೆ. ಈ ಸಾಂಗ್​ನಲ್ಲಿ ಅದಿತಿ ಪ್ರಭುದೇವ ಮತ್ತು ಪ್ರಜ್ವಲ್​ ದೇವರಾಜ್​ ಅವರು ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ

‘ತುಂಬಾನೇ ಕೇಳಲಾರೆ…’ ಎಂದು ಶುರುವಾಗುವ ಈ ಹಾಡಿಗೆ ಅನೂಪ್​ ಸಿಳೀನ್​ ಅವರು ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಹರಿಚರಣ್​ ಮತ್ತು ಸಾನ್ವಿ ಶೆಟ್ಟಿ ಅವರ ಕಂಠದಲ್ಲಿ ಈ ಸಾಂಗ್​ ಮೂಡಿಬಂದಿದೆ. ‘ಆನಂದ್​ ಆಡಿಯೋ’ದಲ್ಲಿ ಸದ್ಯ ರಿಲೀಸ್​ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಪೂರ್ತಿ ವಿಡಿಯೋ ಸಾಂಗ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಈಗಾಗಲೇ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್​ ಪೂರ್ಣಗೊಂಡಿದೆ. ಸಿನಿಮಾ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಟೀಸರ್ ಮತ್ತು ಹಾಡಿನ ಮೂಲಕ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದರೆ ಫೆಬ್ರವರಿಯಲ್ಲಿ ‘ಮಾಫಿಯಾ’ ಬಿಡುಗಡೆ ಆಗುವ ನಿರೀಕ್ಷೆ ಇದೆ. ಕುಮಾರ್ ಅವರು ಈ ಸಿನಿಮಾ ಬಂಡವಾಳ ಹೂಡಿದ್ದಾರೆ. ಪಾಂಡಿಕುಮಾರ್​ ಛಾಯಾಗ್ರಹಣ, ಸಿ. ರವಿಚಂದ್ರನ್​ ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್