ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ಮತ್ತು ರಾಗಿಣಿ ದಂಪತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ದಂಪತಿ ಚಿಕಿತ್ಸೆ ಪಡೆದು ಕ್ವಾರಂಟೈನ್ನಲ್ಲಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ‘ನಮಗೆ ಕೊರೊನಾ ಸೋಂಕು ದೃಢಪಟ್ಟಿದೆ. ವೈದ್ಯರ ಸೂಚನೆ ಮೇರೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸೂಕ್ತ ಚಿಕಿತ್ಸೆ ತೆಗೆದುಕೊಂಡು ಸದ್ಯ ಕ್ವಾರಂಟೈನ್ನಲ್ಲಿದ್ದೇವೆ. ದಯವಿಟ್ಟು ಎಲ್ಲರೂ ಎಚ್ಚರಿಕೆಯಿಂದ ಇರಿ. ಕೊರೊನಾ ಸೋಂಕು ತಗುಲದಂತೆ ಕಾಳಜಿ ವಹಿಸಿ. ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನಗಳಿಗೆ ನಮ್ಮ ಮನಃಪೂರ್ವಕ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಗುರುವಾರ ಒಂದೇ ದಿನ (ಏಪ್ರಿಲ್ 1) 4,234 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 10,01,238ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 18 ಜನರು ಮೃತಪಟ್ಟಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆಯು 12,585 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 9,57,769 ಜನ ಗುಣಮುಖರಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಹಿಂತಿರುಗಿದ್ದಾರೆ.
Ragini and I have been tested positive for COVID. We are taking the prescribed medication and adequate rest. We shall get through this together. Pls don’t let your guard down. Stay safe. Thank you for your love and concern.
— prajwal devaraj (@PrajwalDevaraj) April 1, 2021
30,865 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬೆಂಗಳೂರು ಮಹಾನಗರದಲ್ಲಿ ಇಂದು ಒಂದೇ ದಿನ 2,906 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಬೆಂಗಳೂರು ಒಂದರಲ್ಲೇ ಕೊರೊನಾ ಸೋಂಕಿಗೆ 11 ಜನರು ಮೃತಪಟ್ಟಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 4,630ಕ್ಕೆ ಏರಿಕೆಯಾಗಿದೆ.
ಇಂದಿನಿಂದ ವಿಸ್ತರಣೆಯಾಗಿದೆ ಲಸಿಕೆ ಅಭಿಯಾನ
ಕೊರೊನಾ ಲಸಿಕೆ ವಿತರಣೆಯ ವೇಗ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ನಿರ್ಧಾರ ಕೈಗೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸರ್ಕಾರಿ ರಜಾ ದಿನಗಳಲ್ಲಿಯೂ ಕೊರೊನಾ ಲಸಿಕೆ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ಎರಡೂ ಬಗೆಯ ಲಸಿಕಾ ಕೇಂದ್ರಗಳಲ್ಲಿ ಕೊರೊನಾ ಲಸಿಕೆಯನ್ನು ಏಪ್ರಿಲ್ ತಿಂಗಳ ಸರ್ಕಾರಿ ರಜಾ ದಿನಗಳಲ್ಲಿಯೂ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ದೇಶದಲ್ಲಿ ಇಂದಿನಿಂದ (ಏಪ್ರಿಲ್ 1 ) 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಿದೆ. ಲಸಿಕೆ ಪಡೆಯಬಯಸುವವರು ಕೊವಿನ್ ಪೋರ್ಟಲ್ನಲ್ಲಿ ತಮ್ಮ ಹೆಸರು ರಿಜಿಸ್ಟರ್ ಮಾಡಿಕೊಳ್ಳಬೇಕಿದ್ದು, 45 ವರ್ಷಕ್ಕಿಂತ ಮೇಲ್ಪಟ ಎಲ್ಲರೂ ಲಸಿಕೆ ಪಡೆಯಬಹುದಾಗಿದೆ.
ಇದನ್ನೂ ಓದಿ: ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್
Karnataka Coronavirus Update: ರಾಜ್ಯದಲ್ಲಿಂದು 4,234 ಹೊಸ ಕೊರೊನಾ ಪ್ರಕರಣ ಪತ್ತೆ; 18 ಜನರು ಮೃತ