AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಪ್ರಜ್ವಲ್-ಯೋಗಿ: ದರ್ಶನ್ ಕಾರಣವಾ?

ಗಣೇಶ್ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿದ್ದ ಬೆನ್ನಲ್ಲೆ ಇದೀಗ ನಟ ಪ್ರಜ್ವಲ್ ದೇವರಾಜ್, ಲೂಸ್ ಮಾದ ಯೋಗಿ ಸಹ ಹುಟ್ಟುಹಬ್ಬ ಆಚರಣೆಯಿಂದ ಹಿಂದೆ ಸರಿದಿದ್ದಾರೆ. ನಟರು ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ದರ್ಶನ್​ ಕಾರಣವಾ?

ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಪ್ರಜ್ವಲ್-ಯೋಗಿ: ದರ್ಶನ್ ಕಾರಣವಾ?
ಮಂಜುನಾಥ ಸಿ.
|

Updated on:Jul 03, 2024 | 1:10 PM

Share

ಕೋವಿಡ್ ಸಮಯದಲ್ಲಿ ಹಲವು ನಟ, ನಟಿಯರು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಕೋವಿಡ್ ಕಾರಣಕ್ಕೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದರು. ಅದಾದ ಬಳಿಕ ಕೆಲವು ನಟರು ತುಸು ಅದ್ಧೂರಿಯಾಗಿ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ ಈಗ ಮತ್ತೆ ಕೆಲ ನಟರು ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕುತ್ತಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ಬೇರೆ-ಬೇರೆ ಕಾರಣಗಳನ್ನು ನೀಡುತ್ತಿದ್ದಾರಾದರೂ ಇದಕ್ಕೆಲ್ಲ ಮೂಲ ಕಾರಣ ದರ್ಶನ್ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೆ ನಟ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ, ಹುಟ್ಟುಹಬ್ಬದಂದು ತಾವು ಮನೆಯಲ್ಲಿರುವುದಿಲ್ಲ ಹಾಗಾಗಿ ಅಭಿಮಾನಿಗಳ್ಯಾರು ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿದ್ದರು. ಇದೀಗ ಪ್ರಜ್ವಲ್ ದೇವರಾಜ್ ಸಹ ತಾವು ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಸಹ ಹಂಚಿಕೊಂಡಿದ್ದಾರೆ.

‘ಈ ವರ್ಷ ಜುಲೈ 4 ರಂದು ನಾನು ಮನೆಯಲ್ಲಿ ಇಲ್ಲದಿರುವ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ (ಅಭಿಮಾನಿಗಳು) ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಕ್ಷಮೆ ಇರಲಿ. ಪ್ರತಿ ವರ್ಷ ನನ್ನ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಹಾಗೂ ನಿಮ್ಮ ಊರುಗಳಲ್ಲಿ, ನಗರಗಳಲ್ಲಿ ಆಚರಿಸುತ್ತಿದ್ದಿರಿ. ನಿಮ್ಮ ಪ್ರೀತಿ ಅಭಿಮಾನವನ್ನು ಅನಾಥಾಶ್ರಮಗಳಲ್ಲಿ, ವೃದ್ಧಾಶ್ರಮಗಳಲ್ಲಿ ಅನ್ನದಾನ ಮಾಡುವ ಮೂಲಕ, ಸಿಹಿ ಹಂಚುವ ಮೂಲಕ, ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಕಲಿಕಾ ವಸ್ತುಗಳನ್ನು ಹಂಚುವ ಮೂಲಕ, ರಕ್ತದಾನ ಮಾಡುವ ಮೂಲಕ, ಇನ್ನಿತರೆ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಆಚರಿಸುತ್ತಾ ಬಂದಿದ್ದೀರಿ’ ಎಂದಿದ್ದಾರೆ ಪ್ರಜ್ವಲ್ ದೇವರಾಜ್.

‘ಈ ನಿಮ್ಮ ಪ್ರೀತಿಗೆ ನಾನು ಚಿರಋಣಿ. ಈ ವರ್ಷ ನಿಮ್ಮ ಊರಿನ, ನಿಮ್ಮ ಅಕ್ಕ-ಪಕ್ಕದ ಶಾಲಾ ಮಕ್ಕಳಿಗೆ ಸಹಾಯ ಮಾಡಿ. ಅನಾಥಾಶ್ರಮಗಳಲ್ಲಿ ಬಡವರಿಗೆ ಅಸಾಹಯಕರಿಗೆ ಸಹಾಯ ಹಸ್ತವನ್ನು ಚಾಚಿ. ಅವರಿಗೆ ನೆರವಾಗಿ ಎಂದು ಈ ಮೂಲಕ ನಾನು ವಿನಂತಿಸುತ್ತಿದ್ದೇನೆ. ಮುಂದಿನ ವರ್ಷ ಖಂಡಿತ ಸೇರೋಣ’ ಎಂದಿದ್ದಾರೆ ಪ್ರಜ್ವಲ್ ದೇವರಾಜ್.

ಇದನ್ನೂ ಓದಿ:ಜೈಲಿನಲ್ಲಿರೋ ದರ್ಶನ್​ಗೆ ಒಂದು ನ್ಯಾಯ ಇತರ ಬಂಧಿಗಳಿಗೊಂದು ನ್ಯಾಯ?

ಇನ್ನು ಜುಲೈ 6ರಂದು ಹುಟ್ಟುಹಬ್ಬವಿರುವ ನಟ ಲೂಸ್ ಮಾದ ಯೋಗಿ ಸಹ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಯೋಗಿ, ‘ಪ್ರತಿ ವರ್ಷ ಜುಲೈ ಆರರಂದು ನೀವೇ ಬಂದು ಕೇಕ್ ತಂದು ನನ್ನ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಿರಿ. ಆದರೆ ಈ ಬಾರಿ ನಾನು ಜುಲೈ 6 ರಂದು ರಾಜ್ಯದಲ್ಲಿ ಇರುವುದಿಲ್ಲ. ಚಿತ್ರೀಕರಣದ ಕಾರಣ ಬೇರೆ ರಾಜ್ಯಕ್ಕೆ ಹೋಗುತ್ತಿದ್ದೀನಿ. ಮುಂದಿನ ವರ್ಷ ಸಿಗುವೆ ಅಥವಾ ಶೂಟ್ ಮುಗಿಸಿಕೊಂಡು ಬಂದ ಬಳಿಕ ಸಿಗುವೆ’ ಎಂದಿದ್ದಾರೆ.

ನಟರು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳದೇ ಇರುವುದಕ್ಕೆ ದರ್ಶನ್ ಅವರೇ ಕಾರಣ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ದರ್ಶನ್ ಜೈಲಿನಲ್ಲಿರುವ ಕಾರಣ ಈ ಸಮಯದಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ನಟರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಇನ್ನು ಇದೇ ತಿಂಗಳು ಜುಲೈ 12 ಕ್ಕೆ ನಟ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವಿದ್ದು ಶಿವಣ್ಣ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಾರೆಯೇ ಇಲ್ಲವೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Wed, 3 July 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ