AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀರಂ’ ಹಿಂದೆಯೇ ಬರಲಿದೆ ‘ಮಾಫಿಯಾ’, ಒಂದರಹಿಂದೊಂದು ಪ್ರಜ್ವಲ್ ದೇವರಾಜ್ ಸಿನಿಮಾ

ಪ್ರಜ್ವಲ್ ದೇವರಾಜ್ ನಟನೆಯ ವೀರಂ ಸಿನಿಮಾ ಮುಂದಿನ ವಾರ ಬಿಡುಗಡೆ ಆಗಲಿದೆ. ಅದರ ಬೆನ್ನಲ್ಲೆ ಇನ್ನೊಂದು ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ.

'ವೀರಂ' ಹಿಂದೆಯೇ ಬರಲಿದೆ 'ಮಾಫಿಯಾ', ಒಂದರಹಿಂದೊಂದು ಪ್ರಜ್ವಲ್ ದೇವರಾಜ್ ಸಿನಿಮಾ
ಪ್ರಜ್ವಲ್ ದೇವರಾಜ್
ಮಂಜುನಾಥ ಸಿ.
|

Updated on: Apr 01, 2023 | 10:15 PM

Share

ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ವೀರಂ (Veeram) ಸಿನಿಮಾದ ಬಿಡುಗಡೆಗೆ ಸಜ್ಜಾಗಿದ್ದು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೆ ಇನ್ನೊಂದು ಸಿನಿಮಾದ ಚಿತ್ರೀಕರಣವನ್ನು ಪ್ರಜ್ವಲ್ ಮುಗಸಿದ್ದು, ಕೆಲವೇ ದಿನಗಳ ಅವಧಿಯಲ್ಲಿ ಹೊಸ ಸಿನಿಮಾದ ಬಿಡುಗಡೆ ಆಗಲಿದೆ. ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಮಾಫಿಯಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಅರವತ್ತು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಜೂನ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ದೊಡ್ಡ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ. ಚಿತ್ರೀಕರಣ ಮುಗಿದಿದ್ದು, ಪ್ರೀ ಪ್ರೊಡಕ್ಷನ್ ಕಾರ್ಯಗಳು ಚಾಲ್ತಿಯಲ್ಲಿವೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ ಎಂದಿದೆ ಚಿತ್ರತಂಡ.

“ಮಾಫಿಯಾ” ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ‌. ಇದು ಅವರ ನಟನೆಯ ಮೂವತ್ತೈದನೇ ಚಿತ್ರವೂ ಹೌದು. ಈ ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದೆ‌. ವಿನೋದ್, ರಿಯಲ್ ಸತೀಶ್, ಡಿಫರೆಂಟ್ ಡ್ಯಾನಿ ಹಾಗೂ ಜಾಲಿ ಬಾಸ್ಟಿನ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ಹತ್ತು ದಿನಗಳ ಕಾಲ ನಡೆದಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ ಕುಮಾರ್ ಬಿ.

ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದಲ್ಲಿ ಮೂರು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಇದನ್ನೂ ಓದಿ: Veeram: ವೀರಂ ಸಿನಿಮಾದಲ್ಲಿ ವಿಷ್ಣುವರ್ಧನ್ ಎಂಟ್ರಿ: ದಾದಾ ಅಭಿಮಾನಿಗಳಿಗೆ ಹಬ್ಬ ಎಂದ ಪ್ರಜ್ವಲ್ ದೇವರಾಜ್

ಇನ್ನು ಪ್ರಜ್ವಲ್ ದೇವರಾಜ್ ನಟಿಸಿರುವ ವೀರಂ ಸಿನಿಮಾ ಮುಂದಿನ ವಾರ (ಏಪ್ರಿಲ್ 7) ತೆರೆಗೆ ಬರಲಿದೆ. ರಚಿತಾ ರಾಮ್ ಈ ಸಿನಿಮಾದ ನಾಯಕಿ. ಸಿನಿಮಾದಲ್ಲಿ ವಿಷ್ಣುವರ್ಧನ್ ಅಪ್ಪಟ ಅಭಿಮಾನಿಯಾಗಿ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ. ವೀರಂ ಸಿನಿಮಾದಲ್ಲಿ ವಿಷ್ಣುವರ್ಧನ್ ಅವರು ವಿಶೇಷ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳಿಗೆ ಸರ್ಪ್ರೈಸ್ ದೃಶ್ಯಗಳು ಇವೆ ಎಂದು ಪ್ರಜ್ವಲ್ ದೇವರಾಜ್ ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆರ, ಶಿಷ್ಯ ಸಿನಿಮಾದ ಖ್ಯಾತಿಯ ದೀಪಕ್ ಸಖತ್ ರಗಡ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ.

ವೀರಂ, ಮಾಫಿಯಾದ ಜೊತೆಗೆ ತೆಲುಗು ನಿರ್ದೇಶಕರ ಗಣ ಹೆಸರಿನ ಸಿನಿಮಾದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ. ಅದರ ಜೊತೆಗೆ ಮೇಘನಾ ಸರ್ಜಾ ನಟನೆಯ ತತ್ಸಮ-ತದ್ಭವ ಸಿನಿಮಾದಲ್ಲಿಯೂ ಪ್ರಜ್ವಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ