ನೃತ್ಯ ನಿರ್ದೇಶನದಿಂದ ನಿರ್ದೇಶನದತ್ತ ಹೊರಳಿದ ಕಲೈಗೆ ಪ್ರಜ್ವಲ್ ದೇವರಾಜ್ ಸಾಥ್

Prajwal Devaraj: ನಟ ಪ್ರಜ್ವಲ್ ದೇವರಾಜ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಪ್ರಜ್ವಲ್ ನಟಿಸಲಿದ್ದು, ನೃತ್ಯ ನಿರ್ದೇಶಕ ಕಲೈ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ನೃತ್ಯ ನಿರ್ದೇಶನದಿಂದ ನಿರ್ದೇಶನದತ್ತ ಹೊರಳಿದ ಕಲೈಗೆ ಪ್ರಜ್ವಲ್ ದೇವರಾಜ್ ಸಾಥ್
ಪ್ರಜ್ವಲ್ ದೇವರಾಜ್
Follow us
ಮಂಜುನಾಥ ಸಿ.
|

Updated on:Jul 21, 2023 | 10:16 PM

ಪ್ರಜ್ವಲ್ ದೇವರಾಜ್ (Prajwal Devaraj) ಸಾಲು-ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೇ ವರ್ಷದಲ್ಲಿ ನಾಲ್ಕು ಸಿನಿಮಾಗಳಲ್ಲಿ ನಟಿಸಿರುವ ಪ್ರಜ್ವಲ್ ದೇವರಾಜ್ ಐದನೇ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಮಾಸ್, ಥ್ರಿಲ್ಲರ್, ಆಕ್ಷನ್ ಕಾಮಿಡಿ ಸಿನಿಮಾಗಳನ್ನೇ ಹೆಚ್ಚು ಆಯ್ಕೆ ಮಾಡಿಕೊಳ್ಳುತ್ತಿದ್ದ ಪ್ರಜ್ವಲ್ ದೇವರಾಜ್ ಈ ಬಾರಿ ಸಾಮಾಜಿಕ ಸಂದೇಶವುಳ್ಳ (Social Media) ಸಿನಿಮಾ (Cinema) ಮಾಡಲು ಮುಂದಾಗಿದ್ದಾರೆ. ಸಿನಿಮಾಕ್ಕೆ ಕಲೈ ನಿರ್ದೇಶನ ಇರಲಿದ್ದು, ನೃತ್ಯ ನಿರ್ದೇಶನದಿಂದ ನಿರ್ದೇಶನದತ್ತ ಕಲೈ ಹೊರಳಿದ್ದಾರೆ.

ಪ್ರತಿಭಾ ಅವರು ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಮೂಲಕ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಕಲೈ ಅವರು ಮೊತ್ತ ಮೊದಲ ಬಾರಿಗೆ ನಿರ್ದೇಶಿಸುತ್ತಿದ್ದಾರೆ. ಪ್ರಮುಖವಾದ ಸಾಮಾಜಿಕ ಸಂದೇಶವನ್ನು ಈ ಸಿನಿಮಾ ಒಳಗೊಂಡಿದ್ದು ಸಿನಿಮಾದ ಚಿತ್ರೀಕರಣವು ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭ ಆಗಲಿದೆ. ಮಂಗಳೂರು ಮೂಲದವರಾಗಿರುವ ನಿರ್ಮಾಪಕಿ ಪ್ರತಿಭಾ ಅವರು ಎರಡು ದಶಕಗಳಿಂದಲೂ ರಾಜಲಕ್ಷ್ಮಿ ಟ್ರಾವಲ್ಸ್ ನಡೆಸುತ್ತಿದ್ದು, ಅವರಿಗೆ ಸಿನಿಮಾ ಹೊಸದೇನೂ ಅಲ್ಲ. ಪ್ರತಿಭಾ ನಿರ್ಮಾಣದ ಮೂರನೇ ಸಿನಿಮಾ ಇದು.

ಇನ್ನು ಈ ಸಿನಿಮಾದ ಮೂಲಕ ನಿರ್ದೇಶಕರಾಗುತ್ತಿರುವ ಕಲೈ ಅವರಿಗೂ ಸಹ ಸಿನಿಮಾ ರಂಗ ಹೊಸದಲ್ಲ. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ಕಲೈ ನಂಟು ಹೊಂದಿದ್ದಾರೆ. ನೃತ್ಯ ನಿರ್ದೇಶಕರಾಗಿ ಅವರು ಜನಪ್ರಿಯರು. ಮದನ್ – ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕಲೈ ಕೆಲಸ ಮಾಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನವನ್ನು ಕಲೈ ಮಾಡಿದ್ದಾರೆ. ಈ ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶಕರ ಕ್ಯಾಪ್ ತೊಡುತ್ತಿದ್ದಾರೆ.

ಇದನ್ನೂ ಓದಿ:ವೀರಂ ಹಿಂದೆಯೇ ಬರಲಿದೆ ಮಾಫಿಯಾ, ಒಂದರಹಿಂದೊಂದು ಪ್ರಜ್ವಲ್ ದೇವರಾಜ್ ಸಿನಿಮಾ

ಸಿನಿಮಾದ ಚಿತ್ರೀಕರಣ ಇದೇ ಅಕ್ಟೋಬರ್​ನಲ್ಲಿ ಪ್ರಾರಂಭವಾಗಲಿದೆ. ಸಿನಿಮಾದ ಹೆಚ್ಚಿನ ಭಾಗದ ‌ಚಿತ್ರೀಕರಣವನ್ನು ಸೆಟ್​ಗಳಲ್ಲಿಯೇ ಮಾಡಲು ನಿರ್ದೇಶಕರು ಮುಂದಾಗಿದ್ದು, 80 ದಿನಗಳಲ್ಲಿ ಚಿತ್ರೀಕರಣ ಮುಗಿಸುವ ಯೋಜನೆ ಹಾಕಿಕೊಂಡಿದ್ದಾರೆ. ಸಿನಿಮಾದಲ್ಲಿ ಆರು ಸಾಂಗ್ಸ್ ಹಾಗೂ ಆರು ಫೈಟ್ ಇರಲಿವೆ. ಕೆಜಿಎಫ್ ಸಿನಿಮಾಕ್ಕೆ ಸಂಭಾಷಣೆ ಬರೆದಿರುವ ಶಂಕರ್ ಹಾಗೂ ಚಂದ್ರಮೌಳಿ ಈ ಸಿನಿಮಾಕ್ಕೂ ಸಂಭಾಷಣೆ ಬರೆಯಲಿದ್ದಾರೆ.

ಪ್ರಜ್ವಲ್ ದೇವರಾಜ್ ನಟನೆಯ ‘ಗಣ’ ಸಿನಿಮಾ ಬಿಡುಗಡೆಗೆ ರೆಡಿಯಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೆ ‘ಜಾತರೆ’ ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾವನ್ನು ಒಪ್ಪಿಕೊಂಡು ಚಿತ್ರೀಕರಣ ಆರಂಭಿಸಿದ್ದಾರೆ. ಇವುಗಳ ಜೊತೆಗೆ ‘ವೀರಂ’ ಹಾಗೂ ‘ಮಾಫಿಯಾ’ ಸಿನಿಮಾಗಳಲ್ಲಿ ನಟಿಸಿ ಮುಗಿಸಿದ್ದು ಅವುಗಳ ಬಿಡುಗಡೆಗೆ ಕಾತರರಾಗಿದ್ದಾರೆ. ಹೀಗೆ ಒಂದರ ಮೇಲೊಂದು ಸಿನಿಮಾಗಳಲ್ಲಿ ಪ್ರಜ್ವಲ್ ದೇವರಾಜ್ ನಟಿಸುತ್ತಲೇ ಸಾಗುತ್ತಿದ್ದಾರೆ. ಭಾರಿ ದೊಡ್ಡ ಹಿಟ್ ಅಲ್ಲದಿದ್ದರೂ ಪೈಸಾ ವಸೂಲ್ ಸಿನಿಮಾಗಳಲ್ಲಿ ಪ್ರಜ್ವಲ್ ನಟಿಸುತ್ತಲೇ ಸಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Fri, 21 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ