AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರಿತು ‘ಕರಾವಳಿ’, ಪ್ರಜ್ವಲ್ ದೇವರಾಜ್​ರ ನಿರೀಕ್ಷೆಯ ಸಿನಿಮಾ

Prajwal Devaraj: ಪೋಸ್ಟರ್ ಹಾಗೂ ಟೀಸರ್ ಮೂಲಕ ಗಮನ ಸೆಳೆದಿರುವ ‘ಕರಾವಳಿ’ ಸಿನಿಮಾ ಇದೀಗ ಮುಹೂರ್ತ ಮುಗಿಸಿದ್ದು ಶೀಘ್ರವೇ ಚಿತ್ರೀಕರಣ ಆರಂಭಿಸಲಿದೆ.

ಸೆಟ್ಟೇರಿತು ‘ಕರಾವಳಿ’, ಪ್ರಜ್ವಲ್ ದೇವರಾಜ್​ರ ನಿರೀಕ್ಷೆಯ ಸಿನಿಮಾ
ಪ್ರಜ್ವಲ್ ದೇವರಾಜ್
ಮಂಜುನಾಥ ಸಿ.
|

Updated on: Feb 20, 2024 | 10:30 PM

Share

ಪ್ರಜ್ವಲ್ ದೇವರಾಜ್ (Prajwal Devaraj) ನಟಿಸುತ್ತಿರುವ ‘ಕರಾವಳಿ’ ಸಿನಿಮಾದ ಪೋಸ್ಟರ್ ಬಿಡುಗಡೆ ಆದಾಗಿನಿಂದಲೇ ನಿರೀಕ್ಷೆ ಮೂಡಿಸಿದೆ. ಗುರುದತ್ ಗಾಣಿಗ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ‘ಕರಾವಳಿ’ ಸಿನಿಮಾದ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಚಿತ್ರತಂಡ ಅಧಿಕೃತವಾಗಿ ಮೂಹೂರ್ತ ಮಾಡುವ ಮೂಲಕ ಚಿತ್ರೀಕರಣಕ್ಕೆ ಶ್ರೀಕಾರ ಹಾಕಿದೆ. ಬೆಂಗಳೂರಿನ ಬುಲ್ ಟೆಂಪಲ್ ನಲ್ಲಿ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡದ ಜೊತೆಗೆ ಹಿರಿಯ ನಟ ದೇವರಾಜ್ ದಂಪತಿ ಸೇರಿದಂತೆ ಎಡಿಜಿಪಿ ಅನುಚಿತ್ ಅವರು ಭಾಗಿಯಾಗಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ನಿರ್ಮಾಪಕ ಜಾಕ್ ಮಂಜು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಡೈನಾಮಿಕ್ ದೇವರಾಜ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಮುಹೂರ್ತದಲ್ಲಿ ಗಮನ ಸೆಳೆದಿದ್ದು ಕೋಣ. ‘ಕರಾವಳಿ’ ಸಿನಿಮಾದ ಫಸ್ಟ್ ಲುಕ್​ನಲ್ಲಿ ಕಾಣಿಸಿಕೊಂಡಿರುವ ಕೋಣ ಪತ್ರಿಕಾಗೋಷ್ಠಿಗೂ ಹಾಜರಾಗಿತ್ತು. ಗಜಗಾತ್ರದ ಕೋಣವನ್ನ ನೋಡಿದವರೆಲ್ಲಾ ಆಶ್ಚರ್ಯಗೊಂಡರು ಜನ.

ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಮಾತನಾಡಿ, ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಕಂಬಳ ಪ್ರಪಂಚದಲ್ಲಿ ನಡೆಯುವ ಕಥೆ ಎಂದ ಗುರುದತ್, ಪ್ರಾಣಿಗಳ ಜೊತೆ ಕೆಲಸ ಮಾಡುವುದು ಎಷ್ಟು ಕಷ್ಟ, ಹೇಗೆ ಕೆಲಸ ಮಾಡಬೇಕು, ಚಿತ್ರೀಕರಣಕ್ಕೆ ಏನೆಲ್ಲಾ ತಯಾರಿ ಮಾಡಿಕೊಂಡಿದ್ದೇವೆ ಎನ್ನುವುದನ್ನು ಸಹ ತಿಳಿಸಿದರು.

ಇದನ್ನೂ ಓದಿ:‘ಕರಾವಳಿ’ ಸಿನಿಮಾಗೆ ಸಂಪದಾ ನಾಯಕಿ; ಪ್ರಜ್ವಲ್​ ನಟನೆಯ ಚಿತ್ರದಲ್ಲಿ ಕನ್ನಡತಿಗೆ ಅವಕಾಶ

ನಟ ಪ್ರಜ್ವಲ್ ದೇವರಾಜ್ ಮಾತನಾಡಿ ‘ಕೋಣದ ಜೊತೆಗಿನ ಶೂಟಿಂಗ್ ಅನುಭವ ಬಿಚ್ಚಿಟ್ಟರು. ‘ನೋಡೋಕೆ ಮಾತ್ರ ಭಯ ಆದರೆ ತುಂಬಾ ಸಾಫ್ಟ್ ಆಗಿದೆ’ ಎಂದ ಪ್ರಜ್ವಲ್, ‘ಕನ್ನಡ ಸಿನಿಮಾರಂಗ ಬೆಳೆಯುತ್ತಿದೆ. ‘ಕರಾವಳಿ’ ಸಿನಿಮಾದ ಟೀಸರ್ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಥೆ ತುಂಬಾ ಚೆನ್ನಾಗಿದೆ. ನನಗೆ ತುಂಬಾ ಇಷ್ಟವಾಗಿದೆ. ನನ್ನ ಫ್ಯಾನ್ಸ್‌ಗೆ ಖುಷಿಯಾಗುವ ಹಾಗೆ ನಾನು ಸಿನಿಮಾಗಳನ್ನ ಮಾಡುತ್ತೇನೆ. ‘ಕರಾವಳಿ’ ಸಿನಿಮಾ ಕೂಡ ನನ್ನ ಫ್ಯಾನ್ಸಿಗೆ ತುಂಬಾ ಇಷ್ಟ ಆಗುತ್ತೆ. ಇದು ನನ್ನ 40 ನೇ ಸಿನಿಮಾ ಎನ್ನುವುದು ವಿಶೇಷ’ ಎಂದರು.

ಮಗನ ಸಿನಿಮಾ ಮುಹೂರ್ತಕ್ಕೆ ಆಗಮಿಸಿದ ಡೈನಾಮಿಕ್ ಸ್ಟಾರ್ ದೇವರಾಜ್, ‘ಇಡೀ ತಂಡಕ್ಕೆ ಶುಭ ಹಾರೈಸುವ ಜೊತೆಗೆ ‘ಕರಾವಳಿ ನನ್ನ ಮಗನ ಕರಿಯರ್ ನಲ್ಲೇ ಬೆಸ್ಟ್ ಸಿನಿಮಾ ಆಗಲಿದೆ. ಎಲ್ಲೇ ಹೋದರು ‘ಕರಾವಳಿ’ ಸಿನಿಮಾದ ಬಗ್ಗೆ ಕೇಳುತ್ತಾರೆ’ ಎಂದರು. ‘ಕರಾವಳಿ’ ಸಿನಿಮಾದ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ‘ಕರಾವಳಿ’ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆ ಬಹಳ ಉತ್ಸುಕರಾಗಿರುವ ಸಂಪದಾ ಪಶುವೈದ್ಯೆಯಾಗಿ ಸಿನಿಮಾದಲ್ಲಿ ನಟಿಸಲಿದ್ದಾರೆ.

‘ಕರಾವಳಿ’ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ಕೆಲಸ ಮಾಡಲಿದ್ದಾರೆ. ಸಚಿನ್ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ನಟ ಮಿತ್ರ ‘ಕರಾವಳಿ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಶ್ರೀಧರ್, ಜಿ ಜಿ, ನಿರಂಜನ್ ಇನ್ನು ಹಲವು ಪ್ರಖ್ಯಾತ ಕಲಾವಿದರು ಕರಾವಳಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿರೋ ಸಿನಿಮಾತಂಡ ಇದೇ ತಿಂಗಳು 23 ರಿಂದ ಕರಾವಳಿ ಭಾಗದಲ್ಲಿ ಚಿತ್ರೀಕರಣ ಶುರು ಮಾಡಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ