ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಪ್ರಕಾಶ್ ರಾಜ್ ದೇವತೆಯಂತೆ ಕಂಡ ತಾಯಿಯ ಬದುಕು ತ್ಯಾಗಮಯವಾಗಿತ್ತು. ಗದಗದವರಾದ ಸ್ವರ್ಣಲತಾ ಅವರು ಬಾಲ್ಯದಲ್ಲಿಯೇ ಅನಾಥರಾಗಿ ಬೆಳಗಾವಿ ಅನಾಥಾಶ್ರಮದಲ್ಲಿ ನರ್ಸಿಂಗ್ ತರಬೇತಿ ಪಡೆದು ಬೆಂಗಳೂರಿಗೆ ಬಂದು ನೆಲೆಸಿದ್ದರು.

ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ
ಪ್ರಕಾಶ್ ರಾಜ್ ತಾಯಿ-ಪ್ರಕಾಶ್ ರಾಜ್
Image Credit source: Zee Kannada

Updated on: Mar 30, 2026 | 1:57 PM

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು.

ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರು. ಅವರ ಬಗ್ಗೆ ಈ ಮೊದಲು ಪ್ರಕಾಶ್ ರಾಜ್ ಮಾತನಾಡಿದ್ದರು. ‘ನನ್ನ ತಾಯಿ ಗದಗದವರು. ಅವರು ಅನಾಥೆ ಆಗಿದ್ದರು. ನನ್ನ ಅಜ್ಜಿ ತೀರಿಕೊಂಡಾಗ ಅಮ್ಮನಿಗೆ 12 ವರ್ಷ ವಯಸ್ಸು. ಬೆಳಗಾವಿಯ ಅನಾಥಾಶ್ರಾಮದಲ್ಲಿ ಬೆಳೆದರು. ನರ್ಸಿಂಗ್ ಟ್ರೇನಿಂಗ್ ಮಾಡಿ ಬೆಂಗಳೂರಿಗೆ ಬಂದರು’ ಎಂದಿದ್ದರು ಪ್ರಕಾಶ್ ರಾಜ್.

‘ನಮ್ಮ ಅಪ್ಪ ಮಂಗಳೂರಿನವರು. ಅವರು ಬೆಂಗಳೂರಿಗೆ ಬಂದರು. ಇಬ್ಬರೂ ಮದುವೆ ಆದರು. ನಮ್ಮ ಅಪ್ಪನಿಗೆ ಅವರದ್ದೇ ಆದ ನಂಬಿಕೆ ಇದೆ, ತಾಯಿಗೆ ಅವರದ್ದೇ ಆದ ದೇವರ ನಂಬಿಕೆ ಇದೆ. ನನ್ನ ನಂಬಿಕೆ ಬೇರೆಯದೇ ಇದೆ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದರು.

ತಾಯಿಯನ್ನು ದೇವತೆ ರೀತಿಯಲ್ಲಿ ಪ್ರಕಾಶ್ ರಾಜ್ ನೋಡಿಕೊಳ್ಳುತ್ತಿದ್ದರು. ‘ಎಲ್ಲರನ್ನೂ ಓದಿಸಿದ್ದಳು ನನ್ನ ಅಮ್ಮ. ಅವಳ ತ್ಯಾಗ ಅಮೂಲ್ಯವಾದುದು. ನನ್ನ ತಂದೆ ದುಡಿಯುತ್ತಾ ಇರಲಿಲ್ಲ. ತಂಗಿಯನ್ನು ಮದುವೆ ಮಾಡಿದ್ದು ಅವಳೇ.  ನನ್ನ ತಾಯಿ ದೇವರ ಮುಂದೆ ನಿಂತು ಜಗಳ ಆಡುತ್ತಿದ್ದಳು, ಪ್ರಾರ್ಥನೆ ಮಾಡುತ್ತಿದ್ದಳು’ ಎಂದು ಪ್ರಕಾಶ್ ರಾಜ್ ಹೇಳಿದ್ದರು. ಸ್ವರ್ಣಲತಾ ಮಾಡಿದ ತ್ಯಾಗ ನೋಡಿ ಪ್ರಕಾಶ್ ಅವರಿಗೆ ತಾಯಿ ದೇವತೆ ರೀತಿಯೇ ಕಾಣುತ್ತಿದ್ದರು.

ಇದನ್ನೂ ಓದಿ: ಜಗಳ ಆಡಿ ಖ್ಯಾತ ನಿರ್ದೇಶಕನ ಸಿನಿಮಾದಿಂದ ಹೊರ ನಡೆದ ಪ್ರಕಾಶ್ ರಾಜ್? 

ಪ್ರಕಾಶ್ ರಾಜ್ 1965 ಮಾರ್ಚ್ 26ರಂದು ಜನಿಸಿದರು. ಅವರ ತಂದೆ ಹೆಸರು ಮಂಜುನಾಥ್. 2000 ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಪ್ರಕಾಶ್ ರಾಜ್ ನಟಿಸಿದ್ದಾರೆ . ಕನ್ನಡ, ತೆಲುಗು, ತಮಿಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ಪ್ರಕಾಶ್ ರಾಜ್ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Mon, 30 March 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us