AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ‘ರಂಗಿತರಂಗ’, ಇಂದು ‘ತರಂಗಾಂತರಂಗ’: ಹೊಸಬರ ಚಿತ್ರದಲ್ಲಿ ಪ್ರಮೊದ್ ಶೆಟ್ಟಿ

ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್.ಆರ್.ಕೆ ವಿಶ್ವನಾಥ್ ಅವರು ‘ತರಂಗಾಂತರಂಗ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಚಿತ್ರತಂಡದಿಂದ ಸುದ್ದಿಗೋಷ್ಠಿ ಮಾಡಲಾಯಿತು. ಶ್ರೀಷ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿ, ಹೀರೋ ಆಗಿ ನಟಿಸಿದ್ದಾರೆ. ಪ್ರಮೊದ್ ಶೆಟ್ಟಿ ಕೂಡ ಪಾತ್ರವರ್ಗದಲ್ಲಿದ್ದಾರೆ.

ಅಂದು ‘ರಂಗಿತರಂಗ’, ಇಂದು ‘ತರಂಗಾಂತರಂಗ’: ಹೊಸಬರ ಚಿತ್ರದಲ್ಲಿ ಪ್ರಮೊದ್ ಶೆಟ್ಟಿ
Tarangantaranga Movie Team
ಮದನ್​ ಕುಮಾರ್​
|

Updated on: Sep 24, 2026 | 7:12 PM

Share

ದಶಕದ ಹಿಂದೆ ‘ರಂಗಿತರಂಗ’ ಸಿನಿಮಾ ಬಂದು ಮೋಡಿ ಮಾಡಿತ್ತು. ಈಗ ಆ ಶೀರ್ಷಿಕೆಯನ್ನು ನೆನಪಿಸುವಂತಹ ‘ತರಂಗಾಂತರಂಗ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕರ್ನಾಟಕದ ಕಡಲ ತೀರದ ಅನೇಕ ಪ್ರತಿಭೆಗಳು ಪ್ರತಿ ವರ್ಷ ಕನ್ನಡ ಚಿತ್ರರಂಗಕ್ಕೆ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ, ತಂತ್ರಜ್ಞರಾಗಿ ಪರಿಚಯವಾಗುತ್ತಲೇ ಇರುತ್ತಾರೆ. ಈಗ ಈ ಸಾಲಿಗೆ ಶ್ರೀಷ ಕೂಡ ಸೇರ್ಪಡೆ ಆಗುತ್ತಿದ್ದಾರೆ. ಉಡುಪಿಯ ಬೈಂದೂರು ಮೂಲದ ಶ್ರೀಷ ಅವರು ‘ತರಂಗಾಂತರಂಗ’ ಚಿತ್ರದ ಮೂಲಕ ನಾಯಕ ನಟನಾಗಿ ಮತ್ತು ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಗ್ರಾಫಿಕ್ಸ್ ಡಿಸೈನರ್ ಆಗಿ ಹಾಗೂ ಇವೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡಿದ ಅನುಭವ ಇರುವ ಶ್ರೀಷ ಅವರು ‘ತರಂಗಾಂತರಂಗ’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿ ಜೊತೆಗೆ ಈ ಚಿತ್ರಕ್ಕೆ ನಿರ್ದೇಶನವನ್ನೂ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣವಾಗಿದ್ದು, ಇದೀಗ ಈ ಚಿತ್ರದ ಮೊದಲ ಟೀಸರ್ ರಿಲೀಸ್ ಮಾಡಲಾಗಿದೆ.

ಈ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ತರಂಗಾಂತರಂಗ’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಯುವ ನಟ, ನಿರ್ದೇಶಕ ಶ್ರೀಷ ಮತ್ತು ಅವರ ತಂಡದವರು ಸೇರಿಕೊಂಡು ಒಂದು ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾನು ಈ ಚಿತ್ರತಂಡದ ಭಾಗವಾಗಿರುವುದಕ್ಕೆ ಖುಷಿಯಿದೆ. ಚಿತ್ರತಂಡದ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ’ ಎಂದು ಹೇಳಿದರು.

‘ತರಂಗಾಂತರಂಗ’ ಟೀಸರ್:

‘ತರಂಗಾಂತರಂಗ’ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್, ‘ಕರಾವಳಿ ಮೂಲದ ಹೊಸ ಪ್ರತಿಭೆಗಳು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಸಿನಿಮಾದ ಟೀಸರಿನಲ್ಲಿ ಹೊಸತನ ಕಾಣುತ್ತಿದೆ. ಸಿನಿಮಾದ ಕಥೆ ಕೂಡ ಗಮನ ಸೆಳೆಯುವಂತಿದೆ. ಸಿನಿಮಾ ಬಿಡುಗಡೆ ಆಗಿ ಪ್ರೇಕ್ಷಕರ ಗಮನ ಸೆಳೆದು, ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

ಇದನ್ನೂ ಓದಿ: ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಈ ವೇಳೆ ಮಾತನಾಡಿದ ‘ತರಂಗಾಂತರಂಗ’ ಚಿತ್ರದ ನಾಯಕ ನಟ ಮತ್ತು ನಿರ್ದೇಶಕ ಶ್ರೀಷ, ‘ಇದೊಂದು ಪುನರ್ಜನ್ಮದ ಕಥೆಯಿರುವ ಸಿನಿಮಾ. ನಾವು ದೇವರಿಗೆ ಕಟ್ಟಿಕೊಂಡ ಹರಕೆ ಅಥವಾ ಸೇವೆಗಳನ್ನು ತೀರಿಸಲು ವಿಫಲವಾದರೆ ಅದರಿಂದ ಏನು ಆಗಬಹುದು ಎಂಬ ಕಥೆಯ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಹಿಸ್ಟರಿ, ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿದೆ’ ಎಂದರು. ದಿನೇಶ್ ಮಂಗಳೂರು, ರಾಕೇಶ್ ಪೂಜಾರಿ, ಚೆರಿಕಾ ಮೂರ್ತಿ, ಯಶಸ್ವಿನಿ ಸ್ವಾಮಿ, ರಮೇಶ್ ಪಂಡಿತ್, ಪ್ರಭಾಕರ ಕುಂದರ್, ಮುರಳಿ, ಲಿಖಿತಾ ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ