‘ಲಾಫಿಂಗ್ ಬುದ್ಧ’ ಬಿಡುಗಡೆ ಬೆನ್ನಲ್ಲೆ ಮತ್ತೊಂದು ಸಿನಿಮಾ ಘೋಷಿದ ಪ್ರಮೋದ್ ಶೆಟ್ಟಿ

Pramod Shetty: ಪ್ರಮೋದ್ ಶೆಟ್ಟಿಯ ‘ಲಾಫಿಂಗ್ ಬುದ್ಧ’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿ ಧನಾತ್ಮಕ ವಿಮರ್ಶೆಗಳನ್ನು ಪಡೆದಿದೆ. ಅದರ ಬೆನ್ನಲ್ಲೆ ಇದೀಗ ಪ್ರಮೋದ್ ಶೆಟ್ಟಿ ತಮ್ಮ ನಟನೆಯ ಹೊಸ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

‘ಲಾಫಿಂಗ್ ಬುದ್ಧ’ ಬಿಡುಗಡೆ ಬೆನ್ನಲ್ಲೆ ಮತ್ತೊಂದು ಸಿನಿಮಾ ಘೋಷಿದ ಪ್ರಮೋದ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on:Sep 01, 2024 | 10:12 AM

ಕನ್ನಡ ಚಿತ್ರರಂಗದ ಶೆಟ್ಟಿ ಗೆಳೆಯರ ಗುಂಪಿನ ಪ್ರಮುಖ ಸದಸ್ಯರ ಪ್ರಮೋದ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು, ಬಳಿಕ ಚಿತ್ರರಂಗದ ಪ್ರಮುಖ ಪೋಷಕ ನಟನಾಗಿ ಗುರುತಿಸಿಕೊಂಡರು. ಈಗ ನಾಯಕನಾಗಿಯೂ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೆ (ಆಗಸ್ಟ್ 30) ಪ್ರಮೋದ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಬಿಡುಗಡೆ ಆಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾಕ್ಕೆ ಸಕಾರಾತ್ಮಕ ವಿಮರ್ಶೆಗಳು ವ್ಯಕ್ತವಾದ ಬೆನ್ನಲ್ಲೆ ಪ್ರಮೋದ್ ಶೆಟ್ಟಿ ಮತ್ತೊಂದು ಸಿನಿಮಾ ಘೋಷಿಸಿದ್ದಾರೆ.

ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ’ ಸಿನಿಮಾದ ಪೋಸ್ಟರ್ ಬಿಡುಗಡೆ. ಪ್ರಮೋದ್ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಸಿನಿಮಾದ ಟೀಸರ್ ಅತ್ಯಂತ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ ಎಂದು ಪೋಸ್ಟರ್​ನಲ್ಲಿ ಹೇಳಲಾಗಿದೆ. ಅಲ್ಲದೆ ಪೋಸ್ಟರ್ ಸಹ ಗಮನ ಸೆಳೆಯುತ್ತಿದ್ದು, ಇದೊಂದು ಹಾಸ್ಯಮಯ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಎಂದು ಪೋಸ್ಟರ್​ನಿಂದ ತಿಳಿದು ಬರುತ್ತಿದೆ.

ಮ್ಮೂರಿನ ಕಥೆಗಳು ಎಲ್ಲಾ ಊರುಗಳಲ್ಲೂ ತಲುಪಬೇಕೆಂಬ ಆಶಯವುಳ್ಳ ಅನೀಶ್ ಎಸ್ ಶರ್ಮಾ ಈಗಾಗಲೇ ‘ವಡ್ಡಾರಾಧಕ’ , ‘ಶಬರಿ’ ಅಂಥಹ ಕಿರುಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಈಗ ಅವರೇ ಈ ‘ಕರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ತರಂಜನ್ ಕಶ್ಯಪ್, ವಲ್ಲಭ ಸೂರಿ ಮತ್ತು ಸುನೀತ್ ಹಲಗೇರಿ ತಮ್ಮ ಸಂಸ್ಥೆ ಗನ್ನಿಬ್ಯಾಗ್ ಸ್ಟುಡಿಯೋಸ್ ಸಿನಿಮಾಕ್ಕೆ ಬಂಡವಾಳ ತೊಡಗಿಸಿದ್ದಾರೆ.

ಇದನ್ನೂ ಓದಿ:ರಿಷಬ್ ಶೆಟ್ಟಿ​ ಹೀಗೆ ಇರೋದು ಏಕೆ? ವಿವರಿಸಿದ ಪ್ರಮೋದ್ ಶೆಟ್ಟಿ

ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರನ್ನು ಹೊರತುಪಡಿಸಿ ರಾಘು ಶಿವಮೊಗ್ಗ, ಕಿರಣ್ ನಾಯ್ಕ್, ಮಂಜುನಾಥ್ ಹೆಗ್ಡೆ, ಚಂದ್ರಕಲಾ, ಕೆ ಜಿ ಕೃಷ್ಣಮೂರ್ತಿ ಮತ್ತು ಮುಂತಾದವರು ಬಣ್ಣ ಹಚ್ಚಿದ್ದಾರೆ. ಸುಮಂತ್ ಶರ್ಮಾ ಅವರ ಛಾಯಾಗ್ರಹಣ, ಚೇತನ್ ಕುಮಾರ್ ಸಂಗೀತ, ಸಂಜೀವ್ ಜಾಗಿರ್ದರ್ ಅವರ ಸಂಕಲನ ಈ ಚಿತ್ರಕ್ಕೆ ಶಕ್ತಿ ತುಂಬಿದೆ. ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಇನ್ನೇನು ತಮ್ಮ ಮೊದಲ ಟೀಸರ್ ಬಿಡುಗಡೆ ಮಾಡಲು ಸಿದ್ಧರಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Sat, 31 August 24

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು