AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಣಂ ದೇವರಾಜ್ ನಟನೆ ಸನ್ ಆಫ್ ಮುತ್ತಣ್ಣ ಸಿನಿಮಾ ಆಗಸ್ಟ್ 22ಕ್ಕೆ ರಿಲೀಸ್

‘S/o ಮುತ್ತಣ್ಣ’ ಚಿತ್ರದಲ್ಲಿ ಪ್ರಣಂ ದೇವರಾಜ್ ಅವರಿಗೆ ಜೋಡಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಅವರು ನಟಿಸಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್‌, ತಬಲ ನಾಣಿ, ಗಿರೀಶ್‌ ಶಿವಣ್ಣ, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಶ್ರೀನಿವಾಸ್‌ ಪ್ರಭು ಮುಂತಾದ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ.

ಪ್ರಣಂ ದೇವರಾಜ್ ನಟನೆ ಸನ್ ಆಫ್ ಮುತ್ತಣ್ಣ ಸಿನಿಮಾ ಆಗಸ್ಟ್ 22ಕ್ಕೆ ರಿಲೀಸ್
Pranam Devaraj, Rangayana Raghu, Kushi Ravi
ಮದನ್​ ಕುಮಾರ್​
|

Updated on: Jul 11, 2025 | 10:28 PM

Share

ಹಿರಿಯ ನಟ ದೇವರಾಜ್​ (Devaraj) ಅವರ ಕಿರಿಯ ಪುತ್ರ ಪ್ರಣಂ ದೇವರಾಜ್ (Pranam Devaraj) ಅವರು ಕೂಡ ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ನಟಿಸಿರುವ ‘S/o ಮುತ್ತಣ್ಣ’ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. ಟೀಸರ್ ಮೂಲಕ ಈಗಾಗಲೇ ಈ ಚಿತ್ರ ಗಮನ ಸೆಳೆದಿದೆ. ಕೆಲವು ತಿಂಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ 1 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಶ್ರೀಕಾಂತ್ ಹುಣಸೂರು ಅವರು ‘S/o ಮುತ್ತಣ್ಣ’ (Son of Muthanna) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಚಿತ್ರತಂಡದವರು ಬಿಡುಗಡೆ ದಿನಾಂಕ ಪ್ರಕಟಿಸಿದರು.

‘S/o ಮುತ್ತಣ್ಣ’ ಸಿನಿಮಾವನ್ನು ‘ಪುರಾತನ ಫಿಲ್ಮ್ಸ್’ ಮೂಲಕ ನಿರ್ಮಾಣ ಮಾಡಲಾಗಿದೆ. ಶೀರ್ಷಿಕೆಯ ಕಾರಣದಿಂದಲೇ ಈ ಸಿನಿಮಾ ಪ್ರಾರಂಭದಿಂದಲೂ ಒಂದಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ‘ಕಮಂಗಿ ನನ್ನ ಮಗನೆ..’ ಸಾಂಗ್ ಈಗಾಗಲೇ ಜನಮನ ಗೆದ್ದಿದೆ. ‘S/o ಮುತ್ತಣ್ಣ’ ಯಾವಾಗ ಬಿಡುಗಡೆ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಆಗಸ್ಟ್ 22ರಂದು ‘S/o ಮುತ್ತಣ್ಣ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ‘ಬೆಂಗಳೂರು ಕುಮಾರ್ ಫಿಲ್ಮ್ಸ್’ ಸಂಸ್ಥೆಯ ಮೂಲಕ ಕರ್ನಾಟಕದಾದ್ಯಂತ ಈ ಚಿತ್ರವನ್ನು ವಿತರಣೆ ಮಾಡಲಾಗುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಸಿನಿಮಾವನ್ನು ಅಮೆರಿಕ ಮತ್ತು ದುಬೈನಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ಅಂದಹಾಗೆ, ಈ ಸಿನಿಮಾದಲ್ಲಿ ತಂದೆ-ಮಗನ ನಡುವಿನ ಬಾಂಧವ್ಯದ ಕಥಾಹಂದರ ಇದೆ. ಟೀಸರ್​ನಲ್ಲಿ ಈಗಾಗಲೇ ಆ ವಿಚಾರ ಬಹಿರಂಗ ಆಗಿದೆ. ತಂದೆಯ ಪಾತ್ರದಲ್ಲಿ ಪ್ರತಿಭಾವಂತ ಕಲಾವಿದ ರಂಗಾಯಣ ರಘು ಅವರು ನಟಿಸಿದ್ದಾರೆ. ಮಗನಾಗಿ ಪ್ರಣಂ ದೇವರಾಜ್ ಅವರು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್ ಬಗ್ಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ಕುರಿ ಪ್ರತಾಪ್ ಕಾಮಿಡಿಗೆ ಬಿದ್ದು ಬಿದ್ದು ನಕ್ಕ ದೇವರಾಜ್

ಈ ಚಿತ್ರದ ನಿರ್ಮಾಣದಲ್ಲಿ ‘ಪುರಾತನ ಫಿಲ್ಮ್ಸ್’ ಜೊತೆಗೆ ‘ಎಸ್.ಆರ್.ಕೆ. ಫಿಲ್ಮ್ಸ್’ ಸಂಸ್ಥೆ ಕೂಡ ಸಾಥ್ ನೀಡಿದೆ. ಫ್ಯಾಮಿಲಿ ಸೆಂಟಿಮೆಂಟ್ ಇರುವ ಸಿನಿಮಾಗಳನ್ನು ಇಷ್ಟಪಡುವವರಿಗೆ ‘S/o ಮುತ್ತಣ್ಣ’ ಚಿತ್ರದ ಮೇಲೆ ಕುತೂಹಲ ಸೃಷ್ಟಿ ಆಗಿದೆ. ಸ್ಕೇಟಿಂಗ್ ಕೃಷ್ಣ ಅವರು ಛಾಯಾಗ್ರಹಣ ಮಾಡಿದ್ದಾರೆ. ಹರೀಶ್ ಕೊಮ್ಮೆ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್