AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel: ಉರ್ದು ಭಾಷೆಯಲ್ಲಿ ಯಶ್​ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ ಪ್ರಶಾಂತ್​ ನೀಲ್​; ಕನ್ನಡಿಗರು ಗರಂ

Prashanth Neel | Rocking Star Yash: ಯಶ್​ ಜನ್ಮದಿನಕ್ಕೆ ಪ್ರಶಾಂತ್​ ನೀಲ್​ ಅವರು ಉರ್ದು ಭಾಷೆಯಲ್ಲಿ ವಿಶ್​ ಮಾಡಿದ್ದಕ್ಕೆ ಕೆಲವು ಅಭಿಮಾನಿಗಳಿಗೆ ಬೇಸರ ಆಗಿದೆ. ಕನ್ನಡದಲ್ಲೇ ಶುಭಾಶಯ ತಿಳಿಸಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

Prashanth Neel: ಉರ್ದು ಭಾಷೆಯಲ್ಲಿ ಯಶ್​ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ ಪ್ರಶಾಂತ್​ ನೀಲ್​; ಕನ್ನಡಿಗರು ಗರಂ
ಪ್ರಶಾಂತ್ ನೀಲ್, ಯಶ್
TV9 Web
| Edited By: |

Updated on: Jan 09, 2023 | 2:45 PM

Share

ಕನ್ನಡ ಚಿತ್ರರಂಗಕ್ಕೆ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ನೀಡಿದ ಕೊಡುಗೆ ದೊಡ್ಡದು. ಅವರ ನಿರ್ದೇಶನದಲ್ಲಿ ಮೂಡಿಬಂದ ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿವೆ. ಈ ಸಿನಿಮಾಗಳಿಂದಾಗಿ ಕನ್ನಡ ಚಿತ್ರರಂಗಕ್ಕೆ ಹೊಸ ಚಾರ್ಮ್​ ಸಿಕ್ಕಿದೆ. ಪರಭಾಷೆ ಮಂದಿ ಕೂಡ ಸ್ಯಾಂಡಲ್​ವುಡ್​ ಕಡೆಗೆ ತಿರುಗಿ ನೋಡುವಂತಾಗಿದೆ. ಆದರೆ ಈಗ ಒಂದು ವಿಚಾರಕ್ಕೆ ಕನ್ನಡಿಗರಿಗೆ ಬೇಸರ ಉಂಟಾಗಿದೆ. ಯಶ್​ (Yash) ಹುಟ್ಟುಹಬ್ಬಕ್ಕೆ ಶುಭಕೋರಿರುವ ಪ್ರಶಾಂತ್​ ನೀಲ್​ ಅವರು ಉರ್ದು (Urdu) ಸಾಲುಗಳನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ಕಂಡು ಕನ್ನಡಿಗರು ಗರಂ ಆಗಿದ್ದಾರೆ. ಕನ್ನಡ ಮರೆತು ಹೋಯ್ತಾ ಎಂದು ಕೆಲವರು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಜನವರಿ 8ರಂದು ಯಶ್​ ಹುಟ್ಟುಹಬ್ಬ. ಯಶ್​ ಜೊತೆ ಇರುವ ತಮ್ಮ ಫೋಟೋವನ್ನು ಪ್ರಶಾಂತ್​ ನೀಲ್​ ಅವರ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆಜಿಎಫ್​ ಸಿನಿಮಾದಲ್ಲಿ ಬರುವ ಒಂದು ಉರ್ದು ಡೈಲಾಗ್​ ಅನ್ನು ಅವರು ಈ ಫೋಟೋಗೆ ಕ್ಯಾಪ್ಷನ್​ ಆಗಿ ನೀಡಿದ್ದಾರೆ. ಇದರಿಂದ ಕನ್ನಡದ ಅಭಿಮಾನಿಗಳಿಗೆ ಬೇಸರ ಆಗಿದೆ. ಕನ್ನಡದಲ್ಲೇ ವಿಶ್​ ಮಾಡಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಇದನ್ನೂ ಓದಿ: Yash 19: ಯಶ್​ 19ನೇ ಚಿತ್ರಕ್ಕೆ ‘ಕೆವಿಎನ್​’ ಬಂಡವಾಳ: ‘ರಾಕಿಂಗ್​ ಸ್ಟಾರ್​’ ಬರ್ತ್​ಡೇ ದಿನವೇ ಸಿಹಿ ಸುದ್ದಿ

ಕೆಲವೊಂದು ವಿಚಾರಕ್ಕೆ ಪ್ರಶಾಂತ್​ ನೀಲ್​ ಅವರನ್ನು ಕನ್ನಡಿಗರು ವಿರೋಧಿಸೋದುಂಟು. ‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಅವರು ಬೇರೆ ಭಾಷೆಯ ಸ್ಟಾರ್​ ಕಲಾವಿದರ ಜೊತೆ ಕೈ ಜೋಡಿಸಿದ್ದಾರೆ ಎಂಬುದು ಕೂಡ ಅದಕ್ಕೆ ಒಂದು ಕಾರಣ. ‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ಗೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಆ ಬಳಿಕ ಅವರು ಜೂನಿಯರ್​ ಎನ್​ಟಿಆರ್​ ಜೊತೆಗಿನ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಕನ್ನಡದ ಸ್ಟಾರ್​ ಹೀರೋಗಳ ಜೊತೆ ಸಿನಿಮಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು ಎಂಬುದು ಕರುನಾಡಿನಲ್ಲಿರುವ ಅಭಿಮಾನಿಗಳ ಅಭಿಪ್ರಾಯ.

‘ಕೆಜಿಎಫ್​: ಚಾಪ್ಟರ್​ 2’ ಸಾರ್ವಕಾಲಿಕ ಹಿಟ್​ ಆಗಿದ್ದರಿಂದ ಅದರ ಮುಂದುವರಿದ ಭಾಗದ ಬಗ್ಗೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇದೆ. ‘ಕೆಜಿಎಫ್​ 3’ ಬರಲಿದೆ ಎಂಬುದು ಖಚಿತವಾಗಿದೆ. ಆದರೆ ಅದಕ್ಕಾಗಿ ಸಿನಿಪ್ರಿಯರು ಇನ್ನೂ ಕಾಯಬೇಕಿದೆ. ಆದಷ್ಟು ಬೇಗ ಪ್ರಶಾಂತ್ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 3’ ಸಿನಿಮಾದ ಕೆಲಸಗಳತ್ತ ಗಮನ ಹರಿಸಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅವರು ಬೇರೆ ಸಿನಿಮಾದಲ್ಲಿ ಬ್ಯುಸಿ ಆಗಿರುವುದರಿಂದ ‘ಕೆಜಿಎಫ್​ 3’ ಸೆಟ್ಟೇರುವುದು ಸಹಜವಾಗಿಯೇ ವಿಳಂಬ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?