AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್​ ನೀಲ್​ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳ ಕಡೆಗೆ ಗಮನ ಹರಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ಬೇರೆ ಬೇರೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಈ ಮೂವರು ಒಂದಾಗಿ ‘ಕೆಜಿಎಫ್​ 3’ ಸಿನಿಮಾ ಮಾಡುವುದು ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​, ಯಶ್​
ಮದನ್​ ಕುಮಾರ್​
|

Updated on: May 08, 2024 | 6:21 PM

Share

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆದ ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಕನ್ನಡ ಚಿತ್ರರಂಗಕ್ಕೆ ಹೊಸ ಮೆರುಗು ತಂದುಕೊಟ್ಟವು. ಈ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಪ್ರಶಾಂತ್​ ನೀಲ್​ (Prashanth Neel) ಅವರ ಖ್ಯಾತಿ ದೇಶಾದ್ಯಂತ ಹಬ್ಬಿತು. ನಟ ಯಶ್​ (Yash) ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದರು. ಈಗ ‘ಕೆಜಿಎಫ್​ 3’ (KGF 3) ಸಿನಿಮಾ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ನೀಲ್​ ಅವರು ಈ ಬಗ್ಗೆ ಮಾತನಾಡಿದ್ದಾರೆ. ಆ ಕುರಿತು ಪಿಂಕ್​ವಿಲ್ಲಾ ವರದಿ ಪ್ರಕಟ ಮಾಡಿದೆ.

‘ಕೆಜಿಎಫ್​ 3 ಸಿನಿಮಾ ಖಂಡಿತಾ ಆಗುತ್ತದೆ. ಅದರ ಸ್ಕ್ರಿಪ್ಟ್​ ಮಾಡಲಾಗಿದೆ. ಸ್ಕ್ರಿಪ್ಟ್​ ಬರೆದಿರಲಿಲ್ಲ ಎಂದಿದ್ದರೆ ಕೆಜಿಎಫ್​ 2ನಲ್ಲಿ ಅದನ್ನು ಹಾಕುತ್ತಿರಲಿಲ್ಲ. ನಾವು ಕೆಜಿಎಫ್​ ಪಾರ್ಟ್​ 3 ಮಾಡುತ್ತೇವೆ ಎಂಬುದು ಕೊನೆಗೆ ಎಲ್ಲರಿಗೂ ತಿಳಿದಿತ್ತು’ ಎಂದು ಪ್ರಶಾಂತ್​ ನೀಲ್​ ಹೇಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಸೂಪರ್​ ಹಿಟ್​ ಆಗಿದ್ದರಿಂದ 3ನೇ ಪಾರ್ಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಅಷ್ಟಕ್ಕೂ ‘ಕೆಜಿಎಫ್​ 3’ ಸಿನಿಮಾ ಸೆಟ್ಟೇರುವುದು ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಈಗ ಪ್ರಶಾಂತ್​ ನೀಲ್ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳತ್ತ ಗಮನ ಹರಿಸಿದ್ದಾರೆ. ‘ರಾಕಿಂಗ್​ ಸ್ಟಾರ್​’ ಯಶ್​ ಅವರು ‘ಟಾಕ್ಸಿಕ್​’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ ಕೂಡ ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದೆ. ಸೂಕ್ತ ಸಮಯಲ್ಲಿ ಈ ಮೂವರೂ ಒಂದಾಗಬೇಕಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್​ ಜೊತೆ ನಟಿಸ್ತಾರಾ ನಯನತಾರಾ?

ಪ್ರಶಾಂತ್​ ನೀಲ್​ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ‘ಸಲಾರ್​ 2’ ಮುಗಿದ ಬಳಿಕ ಅವರು ಜೂನಿಯರ್​ ಎನ್​ಟಿಆರ್​ ಜೊತೆಗೆ ಸಿನಿಮಾ ಮಾಡಬೇಕಿದೆ. ಇತ್ತೀಚೆಗೆ ಅವರು ವಿಜಯ್​ ದೇವರಕೊಂಡ ನಿವಾಸಕ್ಕೆ ಭೇಟಿ ನೀಡಿದ್ದರು. ಆ ಭೇಟಿಯ ಉದ್ದೇಶ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಹೊಸ ಸಿನಿಮಾ ಕುರಿತು ಮಾತುಕತೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ