‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

Salaar | Ugramm: ‘ಸಲಾರ್​’ ಸಿನಿಮಾದಲ್ಲಿಯೂ ‘ಉಗ್ರಂ’ ಚಿತ್ರದ ಕಥೆ ಇರಲಿದೆ ಎಂಬ ಮಾತಿಗೆ ನಿರ್ದೇಶಕ ಪ್ರಶಾಂತ್​ ನೀಲ್​ ಪ್ರತಿಕ್ರಿಯೆ ನೀಡಿದ್ದಾರೆ. ಆ ಮೂಲಕ ಅಂತೆ-ಕಂತೆಗಳಿಗೆ ಅವರು ಪೂರ್ಣವಿರಾಮ ಇಟ್ಟಿದ್ದಾರೆ.

‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​
ಶ್ರೀಮುರಳಿ, ಪ್ರಭಾಸ್​
Follow us
TV9 Web
| Updated By: ಮದನ್​ ಕುಮಾರ್​

Updated on: Apr 09, 2022 | 9:47 AM

ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಈಗ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಅನೇಕ ನಗರಗಳಿಗೆ ತೆರಳಿ ಚಿತ್ರದ ಪ್ರಮೋಷನ್​ ಮಾಡಲಾಗುತ್ತಿದೆ. ಯಶ್​, ಶ್ರೀನಿಧಿ ಶೆಟ್ಟಿ, ಸಂಜಯ್​ ದತ್​, ರವೀನಾ ಟಂಡನ್​ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ನಡುವೆ ಪ್ರಶಾಂತ್​ ನೀಲ್​ ಅವರಿಗೆ ‘ಸಲಾರ್​’ ಸಿನಿಮಾ ( Salaar Movie) ಬಗ್ಗೆಯೂ ಪ್ರಶ್ನೆ ಎದುರಾಗಿದೆ. ಪ್ರಭಾಸ್​ ನಟಿಸುತ್ತಿರುವ ‘ಸಲಾರ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ಸಿನಿಮಾದ ಕಥೆ ಏನು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ. ‘ಸಲಾರ್​’ ಸೆಟ್ಟೇರಿದಾಗಿನಿಂದಲೂ ಒಂದು ಗುಸುಗುಸು ಹಬ್ಬಿದೆ. ಪ್ರಶಾಂತ್​ ನೀಲ್​ ಅವರು ‘ಉ್ರಗಂ’ ಸಿನಿಮಾದ (Ugramm Movie) ಕಥೆಯನ್ನೇ ಇಟ್ಟುಕೊಂಡು ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಆ ಮಾತನ್ನು ಪ್ರಶಾಂತ್​ ನೀಲ್​ ತಳ್ಳಿ ಹಾಕಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಉಗ್ರಂ’ ಸಿನಿಮಾದಲ್ಲಿ ಶ್ರೀಮುರಳಿ ಹೀರೋ ಆಗಿ ನಟಿಸಿದ್ದರು. ಆ ಚಿತ್ರದಿಂದ ಅವರ ವೃತ್ತಿಜೀವನಕ್ಕೆ ಹೊಸ ಮೈಲೇಜ್​ ಸಿಕ್ಕಿತು. ನಿರ್ದೇಶಕ ಪ್ರಶಾಂತ್​ ನೀಲ್​ ಕೂಡ ಖ್ಯಾತಿ ಪಡೆದುಕೊಂಡರು. ಅಭಿಮಾನಿಗಳು ಆ ಚಿತ್ರವನ್ನು ಸಖತ್​ ಮೆಚ್ಚಿಕೊಂಡರು. ಈಗ ‘ಸಲಾರ್​’ ಸಿನಿಮಾದಲ್ಲಿಯೂ ‘ಉಗ್ರಂ’ ಚಿತ್ರದ ಕಥೆ ಇರಲಿದೆ ಎಂಬ ಮಾತಿಗೆ ಪ್ರಶಾಂತ್​ ನೀಲ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಮಾಡುವ ಎಲ್ಲ ಸಿನಿಮಾಗಳಲ್ಲೂ ‘ಉಗ್ರಂ’ ಚಿತ್ರದ ಛಾಯೆ ಇದ್ದೇ ಇರುತ್ತದೆ. ಅದು ನನ್ನ ಸ್ಟೈಲ್​. ಆದರೆ ಸಲಾರ್​ ಒಂದು ಫ್ರೆಷ್​ ಸ್ಟೋರಿ. ಅದು ಉಗ್ರಂ ಚಿತ್ರದ ರಿಮೇಕ್​ ಅಥವಾ ಅಳವಡಿಕೆ ಅಲ್ಲ’ ಎಂದು ಪ್ರಶಾಂತ್​ ನೀಲ್​ ಹೇಳಿದ್ದಾರೆ. ಈ ಮೂಲಕ ಎಲ್ಲ ಅನುಮಾನಗಳಿಗೆ ಅವರು ತೆರೆ ಎಳೆದಿದ್ದಾರೆ.

ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಹೀರೋ. ‘ಬಾಹುಬಲಿ’ ಸಿನಿಮಾದ ಗೆಲವಿನ ಬಳಿಕ ಅವರಿಗೆ ಈ ಪಟ್ಟ ಸಿಕ್ಕಿದೆ. ಅದೇ ರೀತಿ ಪ್ರಶಾಂತ್​ ನೀಲ್​ ಕೂಡ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಯಶಸ್ಸಿನಿಂದ ಪ್ಯಾನ್​ ಇಂಡಿಯಾ ಡೈರೆಕ್ಟರ್​ ಎಂಬ ಖ್ಯಾತಿ ಪಡೆದುಕೊಂಡಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಸಲಾರ್​’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ಸಿದ್ಧವಾಗುತ್ತಿದೆ. ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

‘ಸಲಾರ್​’ ಚಿತ್ರಕ್ಕೆ ಶೇ.30ರಷ್ಟು ಶೂಟಿಂಗ್ ಮುಗಿದಿದೆ ಎಂಬ ಮಾಹಿತಿ ಇದೆ. ಪ್ರಭಾಸ್​ ಅವರಿಗೆ ಸಣ್ಣ ಗಾಯ ಆಗಿದ್ದು, ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್​ ನೀಡಲಾಗಿದೆ. ಇತ್ತ ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಹಣ ಗಳಿಸಲು ಈ ಚಿತ್ರ ವಿಫಲವಾಗಿದೆ. ಆದ್ದರಿಂದ ಪ್ರಭಾಸ್​ ನಟಿಸುವ ಮುಂದಿನ ಸಿನಿಮಾಗಳ ಬಗ್ಗೆ ಜನರು ಅನುಮಾನದ ದೃಷ್ಟಿ ಬೀರುವಂತಾಗಿದೆ.

ಸದ್ಯ ಪ್ರಭಾಸ್​ ಅವರ ಖಾತೆಯಲ್ಲಿ ‘ಆದಿಪುರುಷ್​’ ಸಿನಿಮಾ ಕೂಡ ಇದೆ. ಆ ಚಿತ್ರದ ಮೇಲೆ ಭರವಸೆ ಇಟ್ಟುಕೊಳ್ಳಲಾಗಿದೆ. ಸೈಫ್​ ಅಲಿ ಖಾನ್​, ಕೃತಿ ಸನೋನ್​ ಕೂಡ ಆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ