ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​

ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ!

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​
ಪ್ರಶಾಂತ್​​ ನೀಲ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 24, 2021 | 4:11 PM

 ಕೆಜಿಎಫ್​ ಚಾಪ್ಟರ್​ 2 ನಂತರ ಪ್ರಶಾಂತ್​ ನೀಲ್​ ಮುಂದೇನು ಮಾಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಹೀಗಿರುವಾಗಲೇ ಪ್ರಭಾಸ್​ ಜತೆ ಸಿನಿಮಾ ಮಾಡುವ ಘೋಷಣೆಯನ್ನು ಮಾಡಿದ್ದರು ಪ್ರಶಾಂತ್​ ನೀಲ್​. ಇದಾದ ಬೆನ್ನಲ್ಲೇ ಅವರು​ ಕನ್ನಡ ಚಿತ್ರರಂಗ ಮರೆತರು ಎನ್ನುವ ಮಾತು ಕೇಳಿ ಬಂದಿತ್ತು. ಈಗ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಸದ್ಯಕ್ಕೆ ಪ್ರಶಾಂತ್​ ನೀಲ್​ ಕನ್ನಡಕ್ಕೆ ಬರೋದು ಅನುಮಾನ ಎನ್ನಲಾಗುತ್ತಿದೆ. ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ​. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ! ಹೀಗೊಂದು ವಿಚಾರ ಟಾಲಿವುಡ್​ ಅಂಗಳದಲ್ಲಿ ಹರಿದಾಡಿದೆ.

ಈಗಾಗಲೇ ಸಲಾರ್​ ಸಿನಿಮಾದ ಎರಡು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಮೂರನೇ ಹಂತದ ಶೂಟಿಂಗ್​ ಸದ್ಯದಲ್ಲೇ ಪ್ರಾರಂಭಗೊಳ್ಳಲಿದೆ. ಪ್ರಶಾಂತ್​ ನೀಲ್​ ಕಾರ್ಯವೈಖರಿ ನೋಡಿ ಪ್ರಭಾಸ್​ ಫಿದಾ ಆಗಿದ್ದಾರಂತೆ. ಹೀಗಾಗಿ, ಇಬ್ಬರ ನಡುವೆ ಮತ್ತೊಂದು ಸಿನಿಮಾ ಮೂಡಿ ಬರುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ಈ ಸಿನಿಮಾವನ್ನು ಯಾರು ನಿರ್ಮಾಣ ಮಾಡುತ್ತಾರೆ ಎನ್ನುವ ಬಗ್ಗೆಯೂ ಗಾಸಿಪ್​ ಹರಿದಾಡಿದೆ. ಈ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಬಂಡವಾಳ ಹೂಡಲಿದ್ದಾರಂತೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಘೋಷಣೆ ಇಲ್ಲ.

ಸಲಾರ್​ ಸಿನಿಮಾ ಘೋಷಣೆ ಆದ ನಂತರ ಕನ್ನಡ ಅಭಿಮಾನಿಗಳು ಬೇಸರ ಹೊರ ಹಾಕಿದ್ದರು. ನಿಮಗೆ ಸಿನಿಮಾ ಮಾಡೋಕೆ ಕನ್ನಡದಲ್ಲಿ ಯಾರೂ ಹೀರೋ ಸಿಕ್ಕಿಲ್ಲವೇ ಎಂದು ಪ್ರಶ್ನೆ ಕೂಡ ಮಾಡಿದ್ದರು. ಈಗ ಕೇಳಿ ಬಂದಿರುವ ಹೊಸ ಮಾಹಿತಿ ಅಭಿಮಾನಿಗಳಿಗೆ ಮತ್ತಷ್ಟು ಬೇಸರ ತಂದಿದೆ.

ಸಲಾರ್​ ಸಿನಿಮಾ 150 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. 2022ರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ