AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’; ಅಚ್ಚರಿಯ ವಿಷಯ ರಿವೀಲ್ ಮಾಡಿದ ಪ್ರಶಾಂತ್ ನೀಲ್

ಪ್ರಶಾಂತ್ ನೀಲ್ ಅವರು ಪುನೀತ್ ರಾಜ್‌ಕುಮಾರ್‌ಗಾಗಿ ಒಂದು ಫ್ಯಾಮಿಲಿ ಡ್ರಾಮಾ ಕಥೆಯನ್ನು ಸಿದ್ಧಪಡಿಸಿದ್ದರು. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಸೆಟ್ಟೇರಬೇಕಿತ್ತು. ಕೆಜಿಎಫ್‌ಗೂ ಮೊದಲು ಇದು ನೀಲ್ ಅವರ ಕನಸಿನ ಯೋಜನೆಯಾಗಿತ್ತು. ಆದರೆ, ಅಪ್ಪು ಅವರ ಹಠಾತ್ ಅಗಲಿಕೆಯಿಂದ ಆ ಮಹಾನ್ ಕನಸು ಅರ್ಧಕ್ಕೆ ನಿಂತಿತು. ನೀಲ್ ಭಾವುಕರಾಗಿ, ಆ ಕಥೆಯು ಪುನೀತ್ ಜೊತೆಗೇ ಹೋಯಿತು ಎಂದಿದ್ದಾರೆ.

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’; ಅಚ್ಚರಿಯ ವಿಷಯ ರಿವೀಲ್ ಮಾಡಿದ ಪ್ರಶಾಂತ್ ನೀಲ್
ನೀಲ್-ಪುನೀತ್
ರಾಜೇಶ್ ದುಗ್ಗುಮನೆ
|

Updated on:May 22, 2026 | 1:26 PM

Share

ಪ್ರಶಾಂತ್ ನೀಲ್ ಅವರು (Prashanth Neel) ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದವರು. ಅವರನ್ನು ಎಲ್ಲಾ ಭಾಷೆಯವರು ಗುರುತಿಸೋದು ಹಾಗೆಯೇ. ‘ಕೆಜಿಎಫ್’ಗೂ ಮೊದಲು ಫ್ಯಾಮಿಲಿ ಡ್ರಾಮಾ ಕಥೆಯನ್ನು ಪ್ರಶಾಂತ್ ನೀಲ್ ರೆಡಿ ಮಾಡಿಟ್ಟುಕೊಂಡಿದ್ದರು. ಪುನೀತ್ ರಾಜ್​​ಕುಮಾರ್ ಅವರೇ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ನೀಲ್ ಆಸೆ ಆಗಿತ್ತು. ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ. ಪುನೀತ್ ಜೊತೆ ಆ ಕಥೆಯೂ ಹೋಯಿತು ಎಂದು ಅವರು ಹೇಳಿದ್ದಾರೆ.

ಪ್ರಶಾಂತ್ ನೀಲ್ ಅವರು ಅಪ್ಪುಗಾಗಿ ಒಂದು ಭರ್ಜರಿ ಕಥೆ ಸಿದ್ಧಪಡಿಸಿದ್ದರು. ಹೊಂಬಾಳೆ ಫಿಲ್ಮ್ಸ್ ಎದುರು ಇದನ್ನು ನೀಲ್ ಹೇಳಿದ್ದರು. ನಂತರ ‘ಕೆಜಿಎಫ್’ ಕಥೆ ಹೇಳಿದಾಗ ಹೊಂಬಾಳೆ ಅದನ್ನೇ ಆಯ್ಕೆ ಮಾಡಿತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪುನೀತ್ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ,  ಅದು ಸಾಧ್ಯವಾಗಲಿಲ್ಲ.

ಈ ಬಗ್ಗೆ ಮಾತನಾಡಿರುವ ಪ್ರಶಾಂತ್ ನೀಲ್, ‘ಅದನ್ನು ನಾನು ಪುನೀತ್ ಅವರಿಗಾಗಿ ಮಾಡಿದ್ದೆ. ಅವರ ಜೊತೆಯೇ ಆ ಕಥೆಯೂ ಹೋಯಿತು’ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಅಂದರೆ ಆ ಕಥೆಗೆ ಬೇರೆ ಯಾರೂ ಸೂಕ್ತರಲ್ಲ ಎಂಬುದು ನೀಲ್ ಅಭಿಪ್ರಾಯ.

ಇದನ್ನೂ ಓದಿ: ‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ

‘ನನ್ನ ಸಿನಿಮೀಯ ಬದುಕಿನ ಅತಿ ದೊಡ್ಡ ನಿರಾಶೆ ಎಂದರೆ ಅದು ಅಪ್ಪು ಸರ್ ಜೊತೆ ಸಿನಿಮಾ ಮಾಡಲು ಸಾಧ್ಯವಾಗದೇ ಇರುವುದು’ ಎಂದು ಪ್ರಶಾಂತ್ ನೀಲ್ ಹಲವು ಸಂದರ್ಶನಗಳಲ್ಲಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ರಿಲೀಸ್ ಆಗಿದೆ. ಇದರ ಅವಧಿ 4 ನಿಮಿಷ ಇತ್ತು. ಮುಂದಿನ ದಿನಗಳಲ್ಲಿ 9 ನಿಮಿಷಗಳ ಟ್ರೇಲರ್ ತರುವ ಆಲೋಚನೆಯಲ್ಲಿ ಪ್ರಶಾಂತ್ ನೀಲ್ ಅವರು ಇದ್ದಾರೆ. ಸಿನಿಮಾದಲ್ಲಿ ಏನಿರಲಿದೆ ಎಂಬುದನ್ನು ಅವರು ವಿವರವಾಗಿ ಹೇಳುವ ಆಲೋಚನೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Fri, 22 May 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ