ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ನೀಡಿದ ಪ್ರಥಮ್

ದರ್ಶನ್ ಪ್ರಕರಣ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದ ಪ್ರಥಮ್​ ಗೆ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರಥಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದರ್ಶನ್ ಅಭಿಮಾನಿಗಳಿಗೆ ಬುದ್ಧಿವಾದ ಹೇಳಿದ್ದಾರೆ.

ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ನೀಡಿದ ಪ್ರಥಮ್
ದರ್ಶನ್-ಪ್ರಥಮ್

Updated on: Jun 19, 2024 | 2:31 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಬಂಧನವಾಗಿದ್ದು, ಹಲವು ಸೆಲೆಬ್ರಿಟಿಗಳು ದರ್ಶನ್ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ ಸೆಲೆಬ್ರಿಟಿಗಳಿಗೆ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನಿಂದನೆ, ಬೆದರಿಕೆ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಬಳಿ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದ ನಟ ಪ್ರಥಮ್ ವಿರುದ್ಧ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ. ಇದೀಗ ಪ್ರಥಮ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ.

ಇತ್ತೀಚೆಗಷ್ಟೆ ಮಾಧ್ಯಮಗಳ ಬಳಿ ಮಾತನಾಡಿದ್ದ ನಟ ಪ್ರಥಮ್, ‘ದರ್ಶನ್ ಅನ್ನು ಬಂಧಿಸಿಟ್ಟಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಎದುರು ನಿಂತಿರುವ ದರ್ಶನ್ ಅಭಿಮಾನಿಗಳನ್ನು ಲಾಠಿ ತೆಗೆದುಕೊಂಡು ಹೊಡೆಯಬೇಕು ಅನಿಸುತ್ತದೆ. ಅಲ್ಲಿರುವ ಒಬ್ಬರೂ ಸಹ ಅವರ ಅಪ್ಪ-ಅಮ್ಮನಿಗೆ ಒಂದೊತ್ತು ಊಟ ಹಾಕುವ ಯೋಗ್ಯತೆ ಇಲ್ಲದವರು. ಮೊದಲು ಅವರನ್ನು ಭಾರಿಸಿ ಅಟ್ಟಬೇಕು’ ಎಂದಿದ್ದರು. ಅಲ್ಲದೆ, ದರ್ಶನ್ ಅನ್ನು ಸೂಪರ್ ಸ್ಟಾರ್ ಎಂದು ಕರೆದ ಬಗ್ಗೆಯೂ ಆಕ್ಷೇಪ ಎತ್ತಿದ್ದರು. ಇದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು.

ಇದನ್ನೂ ಓದಿ:ಸಾಕಷ್ಟು ರಕ್ತ ನೋಡಿದೆ ಪಟ್ಟಣಗೆರೆ ಶೆಡ್, ದರ್ಶನ್​ಗೂ ಇದೆ ರೌಡಿಗಳ ನಂಟು

ಇದೀಗ ಪ್ರಥಮ್, ದರ್ಶನ್​ರ ಅಭಿಮಾನಿಗಳ ವಿರುದ್ಧ ಜ್ಞಾನ ಭಾರತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಥಮ್, ‘ಕಳೆದ ಎರಡು ಮೂರು ದಿನಗಳಿಂದ ಬೆದರಿಕೆ ಕರೆಗಳು ಬರ್ತಿದ್ದವು. ಜ್ಞಾನಭಾರತಿ ಪೊಲೀಸ್ ಠಾಣೆಗೆ ಕಂಪ್ಲೀಟ್ ಮಾಡಿದ್ದೇನೆ. ಎನ್ ಸಿ ಆರ್ ಆಗಿದೆ. ಪೊಲೀಸರು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅರೆಸ್ಟ್ ಮಾಡೋದು ಬೇಡ ವಾರ್ನ್ ಮಾಡಿ ಬಿಡಿ ಅಂಥ ಹೇಳಿದ್ದೇನೆ’ ಎಂದಿದ್ದಾರೆ.

ಕೊಲೆ ಆರೋಪದಲ್ಲಿ ಬಂಧಿತವಾಗಿರುವ ದರ್ಶನ್ ಬಿಡುಗಡೆ ಆದರೆ ನಾನು ಸಹ ಖುಷಿ ಪಡುವೆ. ಇಂಡಸ್ಟ್ರಿಗೆ ಹಾಗೂ ಕಲಾವಿದರಿಗೆ ಕಳಂಕ ತೊಲಗಿತಲ್ಲ ಅಂತ ಖುಷಿಯಾಗುತ್ತೆ’ ಎಂದ ಪ್ರಥಮ್, ದರ್ಶನ್ ಅಭಿಮಾನಿಗಳನ್ನುದ್ದೇಶಿಸಿ, ‘ಮೊದಲು ನಿಮ್ಮ ಅಪ್ಪ ಅಮ್ಮಂದಿರ ಚನ್ನಾಗಿ ನೋಡಿಕೊಳ್ಳಿ, ಕಲಾವಿದರನ್ನು ಕಲಾವಿದರಾಗಿ ಕಾಣಿ. ಬಾಸ್ ಅಂತೆಲ್ಲಾ ಕರೆದು ಮೆರಿಸಬೇಡಿ, ನಾನು ಡೆವಿಲ್ ಅಪೋಸಿಟ್ ಕರ್ನಾಟಕ ಅಳಿಯ ರಿಲೀಸ್ ಮಾಡ್ತಿನಿ, ಈ ತರ ಬೆದರಿಕೆಗಳಿಗೆ ನಾನು ಹೆದರಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Wed, 19 June 24

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us