Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಿಗರ್‌’ ಸಿನಿಮಾದ ಹಾಡು ಬಿಡುಗಡೆ: ಸಂಚಿತ್ ಹೆಗ್ಡೆ ದನಿಯಲ್ಲಿ ಹೊಸ ಹಾಡು

Praveen Tej: ನಟ ಪ್ರವೀಣ್ ತೇಜ್ ನಟಿಸಿರುವ 'ಜಿಗರ್' ಆಕ್ಷನ್ ಸಿನಿಮಾದ ಹೊಸ ಹಾಡೊಂದು ಬಿಡುಗಡೆ ಆಗಿದೆ. ಈಗ ಬಿಡುಗಡೆ ಆಗಿರುವುದು ರೊಮ್ಯಾಂಟಿಕ್ ಹಾಡಾಗಿದ್ದು, ಹಾಡನ್ನು ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

'ಜಿಗರ್‌' ಸಿನಿಮಾದ ಹಾಡು ಬಿಡುಗಡೆ: ಸಂಚಿತ್ ಹೆಗ್ಡೆ ದನಿಯಲ್ಲಿ ಹೊಸ ಹಾಡು
ಜಿಗರ್
Follow us
ಮಂಜುನಾಥ ಸಿ.
|

Updated on:Sep 09, 2023 | 9:05 PM

ನಟ ಪ್ರವೀಣ್ ತೇಜ್ ‘ಜಿಗರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದ್ದಾರೆ. ಈಗಾಗಲೇ ಭಿನ್ನ-ಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ‘ಜಿಗರ್’ ಹೆಸರಿನ ಆಕ್ಷನ್ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಶೂಟಿಂಗ್ ಮುಗಿಸಿ ಬಿಡುಗಡೆಗೆ ರೆಡಿಯಾಗಿರುವ ‘ಜಿಗರ್’ ಸಿನಿಮಾದ ಹಾಡೊಂದು ಇದೀಗ ಬಿಡುಗಡೆ ಆಗಿದೆ.

‘ಜಿಗರ್’ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. ‘ಜಿಗರ್’ ಒಂದು ಮಾಸ್ ಸಿನಿಮಾ ಆಗಿದ್ದರೂ ಈಗ ಬಿಡುಗಡೆ ಆಗಿರುವುದು ಮಾತ್ರ ರೊಮ್ಯಾಂಟಿಕ್ ಹಾಡು. ಈಗ ರಿಲೀಸ್ ಆಗಿರುವ ಹಾಡು ಸಂಗೀತ ಪ್ರಿಯರ ಮೆಚ್ಚಿನ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಂಚಿತ್ ಹಾಡಿರುವ ಬಹುತೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ‘ಜಿಗರ್’ ಸಿನಿಮಾದ ಈ ರೊಮ್ಯಾಂಟಿಕ್ ಹಾಡು ಕೂಡ ಸಂಚಿತ್ ಧ್ವನಿಯಲ್ಲಿ ಮಧುರವಾಗಿ ಮೂಡಿ ಬಂದಿದ್ದು, ಪಕ್ಕಾ ವೈರಲ್ ಆಗುವ ನಿರೀಕ್ಷೆ ಮೂಡಿಸಿದೆ.

‘ಸುಮ್ಮನೆ…..’ ಎಂಬ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡಿಗೆ ರಿತ್ವಿಕ್ ಮುರಳಿಧರ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಸುಂದರ ಹಾಡಿಗೆ ಅರ್ಜುನ್ ಲೂಯಿಸ್ ಸಾಹಿತ್ಯ ಬರೆದಿದ್ದಾರೆ. ‘ಚಮಕ್’, ‘ವೆನಿಲ್ಲ’, ‘ಸಖತ್’ ಸೇರಿದಂತೆ ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಅರ್ಜುನ್ ಇದೀಗ ‘ಜಿಗರ್’ ಸಿನಿಮಾದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಈಗ ಬಿಡುಗಡೆ ಆಗಿರುವ ಸುಂದರ ಹಾಡನ್ನು ಕರಾವಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲ್ಪೆ, ಮರುವಂತೆ, ಮಂಗಳೂರು ಸುತ್ತಮುತ್ತ ಸೆರೆಹಿಡಿಯಲಾಗಿದೆ. ಸಿನಿಮಾ ಕೂಡ ಇದೇ ಪ್ರದೇಶಗಳ ಹಿನ್ನೆಲೆಯಲ್ಲಿ ನಡೆಯಲಿದೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ಪ್ರಯಕ್ತ ‘ತುಕ್ರ-ತನಿಯ’ ಪೋಸ್ಟರ್​ ಬಿಡುಗಡೆ; ಏನು ಇದರ ಅರ್ಥ?

ನಿರ್ದೇಶಕ ಸೂರಿ ಕುಂದರ್ ಅವರು ಪ್ರವೀಣ್ ತೇಜ್ ಅವರನ್ನು ಆಕ್ಷನ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ತಂದಿದ್ದಾರೆ. ಚಂದನವನದಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸೂರಿ ‘ಜಿಗರ್’ ಸಿನಿಮಾ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಗಿದ್ದು ಪೂಜಾ ವಸಂತ್ ಈ ಸಿನಿಮಾದ ನಿರ್ಮಾಪಕಿ. ಶಿವಸೇನಾ ಸಿನಿಮಾಟೊಗ್ರಫಿ ಚಿತ್ರಕ್ಕಿದೆ. ಪ್ರವೀಣ್‌ಗೆ ನಾಯಕಿಯಾಗಿ ವಿಜಯ್ ಶ್ರೀ ನಟಿಸಿದ್ದಾರೆ. ನಟಿ ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ.

ನಟ ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ. ಪ್ರವೀಣ್ ಕೊನೆಯದಾಗಿ ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಸಂಪೂರ್ಣ ಭಿನ್ನ ಜಾನರ್, ಕತೆಯುಳ್ಳ ‘ಜಿಗರ್’ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಸದ್ಯ ಹಾಡಿನ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುವ ಜಿಗರ್ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sat, 9 September 23

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್